ಶಿವಮೊಗ್ಗದಲ್ಲಿ ಸೆ.2ರಂದು ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ಸೆ.2ರಂದು ಬೆಳಗ್ಗೆ 10 ಗಂಟೆಗೆ ಸಾರ್ವಜನಿಕರಿಂದ ಅಹವಾಲು (Grievances) ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೆ.2ರ ಬೆಳಗ್ಗೆ 9.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿರುವ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ » ಕುವೆಂಪು ರಂಗಮಂದಿರದಲ್ಲಿ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ … Read more