ಶಿವಮೊಗ್ಗದಲ್ಲಿ ಬಿಡುವು ನೀಡಿದ ಪುನರ್ವಸು ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-in-Shimoga-city-Kuvempu-Road

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ (Rainfall) ಅಬ್ಬರ ತಗ್ಗಿದೆ. ಪುನರ್ವಸು ಮಳೆ ಕೊಂಚ ಬಿಡುವು ನೀಡಿದ್ದು, ಬಿಸಿಲು ಕಾಣಿಸಿಕೊಂಡಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇತ್ತು. ಆಗಾಗ ತುಸು ಮಳೆಯಾಗಿದೆ. ಆ ಬಳಿಕ ಬಿಸಿಲು ಆವರಿಸಿದೆ. ಮೋಡ ಮರೆಯಾಗಿದ್ದು, ಆಗಸ ಸ್ವಚ್ಛವಾಗಿ ಕಾಣಿಸುವಂತಿದೆ. ಭಾರಿ ಮಳೆಯಾಗುತ್ತಿದ್ದ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿಯು ಮಳೆ ಪ್ರಮಾಣ ಕಡಿಮೆಯಾಗಿದೆ. 24 ಗಂಟೆಯಲ್ಲಿ  30 ಮಿ.ಮೀ ಮಳೆ ಇನ್ನು , ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ, ಅಲ್ಲಲ್ಲಿ ಧರೆಗುರುಳಿದ ಮರ, ರಸ್ತೆ ಮೇಲೆ ಹರಿದ ನೀರು

rainfall-in-Shimoga-and-sagara.

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ (Rainfall). ಹಲವೆಡೆ ಮರಗಳು ಧರೆಗುರುಳಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇನ್ನೊಂದೆಡೆ ಗುರುವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳಗೆ ನಗರದಲ್ಲಿ ಭಾರಿ ಮಳೆಯಾಯಿತು. ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ಹರಿದಿತ್ತು. ತಾಲೂಕು ಕಚೇರಿ ಮುಂಭಾಗ ಮರ ಬಿದ್ದು ರಸ್ತೆ ಬದಿಯಲ್ಲಿದ್ದ ಶೆಡ್‌ಗಳಿಗೆ … Read more

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌

SHIMOGA-NEWS-FATAFAT.webp

SHIVAMOGGA LIVE NEWS | 17 DECEMBER 2024 ಫಟಾಫಟ್‌ ಸುದ್ದಿ : ಶಿವಮೊಗ್ಗ ನಗರದಲ್ಲಿ (City) ಏನೇನಾಯ್ತು? ಇಲ್ಲಿದೆ ಎಲ್ಲ ಸುದ್ದಿಗಳ ಫಟಾಫಟ್‌ ಮಾಹಿತಿ. ಇದನ್ನೂ ಓದಿ » ಇನ್ನು ಮೂರು ತಿಂಗಳು ಜೋಗ ಜಲಪಾತಕ್ಕೆ ಪ್ರವೇಶ ನಿಷೇಧ

ಶಿವಮೊಗ್ಗ ಜಿಲ್ಲೆಗೆ ಮಳೆ ಅಲರ್ಟ್‌, ಮುಂದಿನ 7 ದಿನ ಹೇಗಿರುತ್ತೆ ವಾತಾವರಣ?

rain-in-shimoga-city-near-vidyanagara-flyover

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ವಿವಿಧೆಡೆ ಈ ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲು ಮಳೆಯಾಗುವ ಸಾಧ್ಯತೆ ಇದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಅಲರ್ಟ್‌ (Alert) ನೀಡಲಾಗಿದೆ. ಇನ್ನು ಏಳು ದಿನ ಹೇಗಿರುತ್ತೆ ವಾತಾವರಣ? 10 ಡಿಸೆಂಬರ್‌ 2024 : ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ. 11 ಮತ್ತು 12 … Read more

ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ, ಚಳಿ ಜೋರು

WEATHER-REPORT-SHIMOGA-

SHIMOGA WEATHER REPORT, 27 NOVEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಪ್ರಮಾಣ ತೀವ್ರವಾಗಿದೆ. ಹಲವು ಕಡೆ ಬೆಳಗ್ಗೆ ಬಹು ಹೊತ್ತಿನವರೆಗೆ ಥಂಡಿ ವಾತಾವರಣ ಇರುತ್ತದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತುಸು ಮೋಡ ಕವಿದ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 … Read more

ಶಿವಮೊಗ್ಗದಲ್ಲಿ ಇವತ್ತು ಬಿಸಿಲ ಧಗೆ, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ

WEATHER-REPORT-SHIMOGA-

WEATHER REPORT, 3 NOVEMBER 2024 : ಮಳೆ ಕಡಿಮೆಯಾಗಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಏರಿಕೆಯಾಗಿದೆ. ಬಿಸಿಲಿನ ಝಳ ಮತ್ತು ಧಗೆ ಇರುವುದರಿಂದ ಶಕೆ ಹೆಚ್ಚಾಗಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಇವತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜೋರು ಬಿಸಿಲಿನ ವಾತಾವರಣ ಸಾಧ್ಯತೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ … Read more

ತಗ್ಗಿದ ಮಳೆ, ಹೆಚ್ಚಿದ ತಾಪಮಾನ, ಶಿವಮೊಗ್ಗದಲ್ಲಿ ಇವತ್ತು ಹೇಗಿದೆ ವಾತಾವರಣ?

WEATHER-REPORT-SHIMOGA-

WEATHER REPORT, 24 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಪುನಃ ಬಿಸಲು ಆವರಿಸಿಕೊಂಡಿದೆ. ಇನ್ನೊಂದೆಡೆ ಬಿಸಿಲ ಝಳಕ್ಕೆ ತಾಪಮಾನದಲ್ಲಿ ತುಸು ಹೆಚ್ಚಳವಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾ‍ಧ್ಯತೆ ಇದೆ. ♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆ ಅಬ್ಬರ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

rain-at-shankaramutt-road-in-Shimoga-city

RAINFALL NEWS, 16 OCTOBER 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿದೆ. ನಗರದಲ್ಲಿ ಸತತ ಒಂದು ಗಂಟೆಯಿಂದ ಮಳೆಯಾಗುತ್ತಿದೆ. ಇನ್ನೊಂದೆಡೆ ಅ.17ರಂದು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಜೋರು ಮಳೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಸಣ್ಣ ಪ್ರಮಾಣದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಕೆಲವು ಕಡೆ ಆಗಾಗ ಬಿಡುವು ನೀಡಿ, ಬಳಿಕ ಅಬ್ಬರಿಸುತ್ತಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಇನ್ನು, ಸಂಜೆ ವೇಳೆಗೆ ಭದ್ರಾವತಿ ತಾಲೂಕಿನ ಹಲವು ಕಡೆ ಜೋರು ಮಳೆಯಾಗುತ್ತಿದೆ. ಈ … Read more

ರಾಜ್ಯಾದ್ಯಂತ ಇನ್ನು ಮೂರ್ನಾಲ್ಕು ದಿನ ಭಾರಿ ಮಳೆ, ಎಲ್ಲೆಲ್ಲಿ? ಯಾವಾಗ ಮಳೆಯಾಗಲಿದೆ?

rain-in-shimoga-city-near-NCC-Office.

RAINFALL NEWS, 15 OCTOBER 2024 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇನ್ನು ನಾಲ್ಕು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್‌ 17ರವರೆಗೆ ಭಾರಿ ಮಳೆಯಾಗಲಿದೆ. ಎಲ್ಲೆಲ್ಲಿ ಯಾವಾಗ ಮಳೆಯಾಗುತ್ತೆ? ಅಕ್ಟೋಬರ್‌ 15 : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಹೇಗಿದೆ ತಾಪಮಾನ?

WEATHER-REPORT-SHIMOGA-

WEATHER NEWS, 11 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಆದರೆ ತಾಪಮಾನ ಮಾತ್ರ ತಗ್ಗಿಲ್ಲ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನ ಹಾಗೂ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗುವ ಸಂಭವವಿದೆ. ♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, … Read more