BREAKING NEWS – ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು

160125 mc gann hospital general image

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ (Convict) ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ. ಮೃತ ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದ. ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನಲೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಜೈಲು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more

ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಅಸ್ವಸ್ಥರಾಗಿ ಬಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು, ಎರಡೂ ಕೈ ಮೇಲಿದೆ ಹಚ್ಚೆ

KSRTC-Bus-Stand-Shivamogga

ಶಿವಮೊಗ್ಗ: KSRTC ಬಸ್‌ ನಿಲ್ದಾಣದಲ್ಲಿ ತೀವ್ರ ಅಸ್ವಸ್ಥರಾಗಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ.13ರಂದು KSRTC ಬಸ್‌ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿದ್ದರು. ಜನರು ವಿಚಾರಿಸಿದಾಗ ಇಲಿ ಪಾಷಾಣ ಸೇವಿಸಿರುವುದಾಗಿ ತಿಳಿಸಿದ್ದ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ.18ರಂದು ಆ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಗಣಪತಿ ಹಬ್ಬದ ಚಂದಾ ವಿಚಾರವಾಗಿ ನಡುಬೀದಿಯಲ್ಲಿ ಗಲಾಟೆ, ಮೂವರ ವಿರುದ್ಧ ಕೇಸ್‌ … Read more

ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ದಾವಣಗೆರೆ ವ್ಯಕ್ತಿಗೆ ಕಾದಿತ್ತು ಶಾಕ್

160125 mc gann hospital general image

ಶಿವಮೊಗ್ಗ: ಕಾಲು ನೋವಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೊರ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು (Bike Theft) ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ದಾವಣಗೆರೆ ಜಿಲ್ಲೆಯ ಜಗಳೂರಿನ ಶರತ್‌ ಬಾಬು ಎಂಬುವವರಿಗೆ R15 ಬೈಕ್‌ ಕಳ್ಳತನವಾಗಿದೆ. ಶರತ್‌ ಬಾಬು ಅವರು ಹಿಂದೆ ಬೈಕಿನಿಂದ ಬಿದ್ದು ಕಾಲು ನೋವಾಗಿತ್ತು. ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಬೈಕನ್ನು ಮೆಗ್ಗಾನ್‌ … Read more

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೂವರ ಕಂಚಿನ ಪ್ರತಿಮೆ ಸ್ಥಾಪನೆಗೆ ಒತ್ತಾಯ

160125 mc gann hospital general image

ರಿಪ್ಪನ್‌ಪೇಟೆ : ಮಲೇರಿಯಾ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಸರ್ಜನ್ ಟಿ.ಜೆ.ಮೆಗ್ಗಾನ್ ಅವರ ಕಂಚಿನ ಪ್ರತಿಮೆಯನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ (Hospital) ಆವರಣದಲ್ಲಿ ಸ್ಥಾಪಿಸುವಂತೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ ಕಲ್ಲೂರು ಮೇಘರಾಜ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಲ್ಲೂರು ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್‌, ಸಮಾಜವಾದದ ಹರಿಕಾರ ಶಾಂತವೇರಿ ಗೋಪಾಲ ಗೌಡರು ಹಾಗೂ ಗೇಣಿ ಸತ್ಯಾಗ್ರಹದ ರೂವಾರಿ ಹೆಚ್.ಗಣಪತಿಯಪ್ಪ ಅವರ ಕಂಚಿನ ಪ್ರತಿಮೆಯನ್ನೂ ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. … Read more

ಮೆಗ್ಗಾನ್‌ ಆಸ್ಪತ್ರೆ ವಾರ್ಡ್‌ನಲ್ಲೇ ಪತ್ನಿಯ ಸ್ನೇಹಿತೆ ಮೇಲೆ ಹಲ್ಲೆ ನಡೆಸಿದ ಪತಿ, ವಿಡಿಯೋ ವೈರಲ್

lady-and-a-person-fight-at-mc-gann-hospital

ಶಿವಮೊಗ್ಗ : ಆಸ್ಪತ್ರೆಗೆ (Hospital) ದಾಖಲಾಗಿದ್ದ ಮಹಿಳೆಯ ಆರೈಕೆ ಮಾಡಲು ಬಂದಿದ್ದ ಸ್ನೇಹಿತೆ ಮೇಲೆ ಮಹಿಳೆಯ ಪತಿ ಹಲ್ಲೆ ಮಾಡಿದ್ದಾನೆ. ಇಬ್ಬರು ಕೈ ಕೈ ಮಿಲಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ. ಅಸ್ವಸ್ಥಳಾಗಿದ್ದ ಮಹಿಳೆಯನ್ನು ಆಕೆಯ ಸ್ನೇಹಿತೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದರು. ವಾರ್ಡ್‌ನಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಪತಿ, ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ … Read more

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಹೊತ್ತಲ್ಲಿ ತಾಯಿ ಸಾವು

Mc-Gann-Hospital-Shimoga

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು (Maternal Death) ಮೃತಪಟ್ಟಿದ್ದಾರೆ. ತೀವ್ರ ರಕ್ತಸ್ರಾವವಾಗಿ ಹೃದಯಾಘಾತ ಸಂಭವಿಸಿ ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಹರಿಹರ ಮೂಲದ ಕವಿತಾ ಮೃತ ಬಾಣಂತಿ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು? ಜನವರಿ 1ರಂದು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಕವಿತಾ, ಜನವರಿ 3ರಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಕವಿತಾಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಕೆಲವೇ ಕ್ಷಣಕ್ಕೆ … Read more

ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶು ರವಾನೆ, ಕಾರಣವೇನು?

Zero-Traffic-for-5-day-baby-in-shimoga

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಅನಾರೋಗ್ಯ ಪೀಡಿತ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್‌ನಲ್ಲಿ (Zero Traffic) ಮಣಿಪಾಲ್‌ ಆಸ್ಪತ್ರೆಗೆ ಭಾನುವಾರ ರವಾನೆ ಮಾಡಲಾಯಿತು. ಉಸಿರಾಟ ಸಂಬಂಧಿ ಕಾಯಿಲೆಯಿಂದ ನಗರದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸಾಗರ ಮೂಲದ ಸುಮಂಗಳಾ ಹಾಗೂ ಲೋಕೇಶ್ ದಂಪತಿಗೆ ಐದು ದಿನದ ಹಿಂದೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಮಗು … Read more

ಮೆಗ್ಗಾನ್‌ ಆಸ್ಪತ್ರೆಯಿಂದ ಹೊರ ಬಂದು ಆಟೋ ಹತ್ತಿದ್ದ ಮಹಿಳೆಗೆ ಆಘಾತ

Mc-Gann-Hospital-Shimoga

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯಲ್ಲಿ (Hospital) ಜನ ದಟ್ಟಣೆ ಹೆಚ್ಚಿದ್ದ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದು ಒಳಗಿದ್ದ 2.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವ ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ತಬಸುಮ್‌ ಎಂಬುವರ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನವಾಗಿದೆ. ತಬಸುಮ್‌ ತಮ್ಮ ತಾಯಿಯನ್ನು ವೈದ್ಯರ ಬಳಿ ಪರೀಕ್ಷೆಗೆ ಕರೆತಂದಿದ್ದರು. ಈ ಸಂದರ್ಭ ಮೆಗ್ಗಾನ್‌ ಆಶ್ಪತ್ರೆಯಲ್ಲಿ ಜನ ದಟ್ಟಣೆ ಹೆಚ್ಚಿತ್ತು. … Read more

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಲಾಂಗು, ಚಾಕು ಪ್ರದರ್ಶನ

Mc-Gann-Hospital-Shimoga

SHIMOGA NEWS, 9 OCTOBER 2024 : ಮೆಗ್ಗಾನ್‌ ಆಸ್ಪತ್ರೆ (Mc Gann Hospital) ಆವರಣದಲ್ಲಿ ಲಾಂಗ್‌ ಮತ್ತು ಚಾಕು ತೋರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್‌ ಗೌಸ್‌ ಮತ್ತು ಅಯಾನ್‌ ಬಂಧಿತರು. ಮಧ್ಯಾಹ್ನದ ಹೊತ್ತಿಗೆ ಮೆಗ್ಗಾನ್‌ ಆಸ್ಪತ್ರೆಯ ಪಾರ್ಕಿಂಗ್‌ ಸ್ಥಳದಲ್ಲಿ ಇಬ್ಬರು ಮಾರಕಾಸ್ತ್ರ ಪ್ರದರ್ಶಿಸಿ ಜನರಲ್ಲಿ ಆತಂಕ ಮೂಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ದಾಳಿ ನಡೆಸಿ ಮಾರಕಾಸ್ತ್ರ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ … Read more

BREAKING NEWS | ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

SHIMOGA-BREAKING-NEWS.jpg

SHIMOGA NEWS, 7 OCTOBER 2024 : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ (Rowdy) ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ … Read more