ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ, ಬಾಂಬೆ ಬ್ಲಡ್‌ಗಾಗಿ 6 ಗಂಟೆ ಪರಿಶ್ರಮ, ಏನಿದು ಆಪರೇಷನ್?
SHIVAMOGGA LIVE NEWS | 18 NOVEMBER 2023 SHIMOGA : ಅತಿ ವಿರಳ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿದ್ದ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಗೆ ಶಸ್ತ್ರಚಿಕಿತ್ಸೆ (ರಪ್ಚರಡ್ ಎಕ್ಟೋಪಿಕ್) ಮಾಡಿ ಮೆಗ್ಗಾನ್ ಆಸ್ಪತ್ರೆ ವೈದ್ಯರು ಅವರ ಜೀವ ಉಳಿಸಿದ್ದಾರೆ. ಗರ್ಭನಾಳದಲ್ಲಿ ಗರ್ಭ ಧರಿಸಿದ್ದರು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹಳೆ ಜೋಗದ ವೀರಭದ್ರಪ್ಪ ಅವರ ಪತ್ನಿ ಬೇಬಿ (31) ನವೆಂಬರ್ 12ರಂದು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದರು. ತುರ್ತು ಚಿಕಿತ್ಸೆ ವಿಭಾಗಕ್ಕೆ ದಾಖಲಾಗಿದ್ದರು. … Read more