ಶಿವಮೊಗ್ಗದಲ್ಲಿ ಆರೋಗ್ಯ ಸಚಿವರ ಮೀಟಿಂಗ್‌, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ

health minister dinesh gundurao meeting in Shimoga.

ಶಿವಮೊಗ್ಗ: ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ ಪಾಯಿಂಟ್ಸ್‌ ಸಚಿವರು ಏನೇನು ಸೂಚಿಸಿದರು? ತಾಯಿ ಮತ್ತು ಮಗು ಮರಣ ಪ್ರಮಾಣ ರಾಜ್ಯದ ಸರಾಸರಿಗಿಂತ ಜಿಲ್ಲೆಯಲ್ಲಿ ಹೆಚ್ಚಿದೆ. ಅದನ್ನು ಕಡಿಮೆ ಮಾಡಲು ಸೂಕ್ತ ಕ್ರಮ‌ ಕೈಗೊಳ್ಳಿ. ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಲಿಂಗಾನುಪಾತ ಕಡಿಮೆ ಇದೆ. ಅದಕ್ಕೆ ಕಾರಣ ತಿಳಿದು ಸಮತೋಲನವಾಗಿರುವಂತೆ … Read more

‘ನಾನೇನು ಸನ್ಯಾಸಿಯಲ್ಲ, ಹೈಕಮಾಂಡ್‌ ಶೀಘ್ರ ನಿರ್ಧಾರ ಕೈಗೊಳ್ಳಲಿʼ

Beluru-Gopalakrishna-speaks-to-media-in-Shimoga

ಶಿವಮೊಗ್ಗ: ನಾನೇನು ಸನ್ಯಾಸಿಯಲ್ಲ. ನನ್ನ ಹಕ್ಕು ಕೇಳುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಪರಿಹಾರ ಮಾಡುವುದರ ಜೊತೆಗೆ ಹೊಸಬರಿಗೆ ಸಚಿವ ಸ್ಥಾನ ನೀಡುವ ವಿಚಾರವನ್ನು ಹೈಕಮಾಂಡ್‌ ಶೀಘ್ರ ಬಗೆಹರಿಸಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಚಿವ ಸ್ಥಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಕೇಳಿದ್ದೇನೆ. ಪ್ರಬಲ ಆಕಾಂಕ್ಷಿ ಎಂಬುದನ್ನ ಮನದಟ್ಟು ಮಾಡಿದ್ದೇನೆ. ‘ನಾನು ಹೈಕಮಾಂಡ್‌ ಬಣʼ ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಗೊಂದಲ ಮೂಡಿಸಿದೆ. … Read more

‘ವರಿಷ್ಠರ ಭೇಟಿಗೆ ದೆಹಲಿಗೆ ತೆರಳುವೆ’, ಸಚಿವ ಸ್ಥಾನದ ಬಗ್ಗೆ ಸಾಗರ ಎಂಎಲ್‌ಎ ಏನಂದ್ರು?

Sagara-Beluru-Gopalakrishna-press-meet

ಸಾಗರ: ನಾನು ಹಿರಿಯ ಶಾಸಕ. ನನಗೆ ಸಚಿವ (Minister) ಸ್ಥಾನ ಸಿಗುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ವರಿಷ್ಠರ ಭೇಟಿಗೆ ಹೊಸದಿಲ್ಲಿಗೂ ತೆರಳುವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೃಢವಾಗಿ ಹೇಳಿದರು. ಸಾಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ಹಿಂದೆ ಹೊಸದಿಲ್ಲಿಗೆ ಹೋಗಿದ್ದಾಗ ವರಿಷ್ಠರಿಗೆ ಮನವಿ ಮಾಡಿದ್ದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಳಿಯೂ ಕೇಳಿದ್ದೇನೆ. ನನ್ನ ಹಕ್ಕನ್ನು ಕೇಳಲು ಮುಜುಗರವಿಲ್ಲ ಎಂದರು. ಮುಖ್ಯಮಂತ್ರಿ ಬದಲಾವಣೆ, … Read more

‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್‌ ಪದವಿ ಬಗ್ಗೆ ಬೇಳೂರು ಏನೆಲ್ಲ ಹೇಳಿದರು?

Beluru-Gopalakrishna-Speaks-to-media-in-sagara

ಸಾಗರ: ನಾನು ಸಚಿವ (Minister) ಸ್ಥಾನದ ಪ್ರಬಲ ಆಕಾಂಕ್ಷಿ. ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಪತ್ರಕರ್ತರ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನ ಕೊಡಿ ಎಂದು ಎಐಸಿಸಿ ಅಧ್ಯಕ್ಷ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು … Read more

ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ, ರಾಜ್ಯದಲ್ಲಿ ಶುರುವಾಗಲಿದೆ ಎರಡು ವಿಶೇಷ ಶಾಲೆ

111025-Minister-Madhu-Bangarappa-speaks-about-special-schools-in-shimoga.webp

Published On: 11 October 2025 ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ಮತ್ತು ಕ್ಯಾನ್ಸರ್ ಬಾಧಿತ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು (Special Schools) ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಕರ್ತರ ಜೊತೆ ಸಂವಾದದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇವೆರಡು ಮಾದರಿ ಶಾಲೆಗಳನ್ನು ಆರಂಭಿಸುವ ಗುರಿ ಇದೆ ಎಂದರು‌. ತೀರ್ಥಹಳ್ಳಿಯಲ್ಲಿ ವಿಶೇಷ ಚೇತನರ ಶಾಲೆ ತೀರ್ಥಹಳ್ಳಿಯಲ್ಲಿ ಶಾಲೆಯೊಂದರಲ್ಲಿ ವಿಶೇಷ ಚೇತನರಿಗೆ ವಿಶೇಷ … Read more

‘ಎಲ್ಲ ಸಮಸ್ಯೆ ಪರಿಹಾರವಾಗಿದೆ, ನಿಗದಿತ ಸಮಯದಲ್ಲೆ ಪೂರ್ಣ ಆಗುತ್ತೆʼ, ಶಿವಮೊಗ್ಗದಲ್ಲಿ ಮಿನಿಸ್ಟರ್‌ ಏನೆಲ್ಲ ಹೇಳಿದರು?

270925 Minister Madhu Bangarappa speaks to media in shimoga

ಶಿವಮೊಗ್ಗ: ತಾಂತ್ರಿಕ ಕಾರಣದಿಂದಾಗಿ ಜಾತಿ ಸಮೀಕ್ಷೆ(Caste Census) ಕಾರ್ಯಕ್ಕೆ ಸಮಸ್ಯೆಯಾಗಿತ್ತು. ಶಿಕ್ಷಕರು ಸ್ಪಂದಿಸುತ್ತಿಲ್ಲ ಎಂಬುದು ಸುಳ್ಳು. ಈಗ ಎಲ್ಲ ಸಮಸ್ಯ ಪರಿಹಾರವಾಗಿದೆ. ನಿಗದಿತ ಅವಧಿಯೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕುವೆಂಪು ರಂಗಮಂದಿರ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆಗೆ ಸಭೆ ನಡೆಸಿದ್ದಾರೆ. ಎಲ್ಲ ಸಮಸ್ಯೆಗಳು ಪರಿಹಾರವಾಗಿದೆ. ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಕಡೆ … Read more

ಶಿವಮೊಗ್ಗ ಬಸ್‌ ನಿಲ್ದಾಣದ ಮುಂಭಾಗ ಅಭಿಯಾನದ ಪೋಸ್ಟರ್‌ಗೆ ಮಿನಿಸ್ಟರ್‌ ಸಹಿ, ಬಿಜೆಪಿ ವಿರುದ್ಧ ಕಿಡಿ

Minister-Madhu-Bangarappa-at-a-Protest-in-Shimoga-city.

ಶಿವಮೊಗ್ಗ: ಮತಗಳವು ಆರೋಪದ ಹಿನ್ನೆಲೆ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ‍ವೋಟ್ ಚೋರ್ (Vote Chor) ಗದ್ದಿ ಚೋಡ್ (ಮತಗಳ್ಳರೇ ಗದ್ದುಗೆ ಬಿಡಿ) ಅಭಿಯಾನಕ್ಕೆ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಬೃಹತ್ ಬ್ಯಾನರ್‌ಗೆ ಸಹಿ ಹಾಕುವ ಮೂಲಕ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಇದನ್ನೂ ಓದಿ » ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು? ಲೋಕಸಭಾ ಚುನಾವಣೆ ವೇಳೆ ಮಹಾದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷ ಮತಗಳು … Read more

ಶಿವಮೊಗ್ಗ ವಿಮಾನ ನಿಲ್ದಾಣ, ಸಂಸದ ರಾಘವೇಂದ್ರ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಆಕ್ರೋಶ, ಏನೆಲ್ಲ ಹೇಳಿದರು?

Madhu-Bangarappa-in-Shimoga-Ambedkar-Bhavana

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು (Airport) ರಾಜ್ಯ ಸರ್ಕಾರಕ್ಕೆ ನಿರ್ವಹಣೆಗೆ ನೀಡಬಾರದಾಗಿತ್ತು ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿನಿಸ್ಟರ್‌ ಹೇಳಿದ್ದೇನು? ರಾಜ್ಯ ಸರ್ಕಾರ ಬೆವರು ಸುರಿಸಿ ಸಂಗ್ರಹಿಸಿದ ತೆರಿಗೆ ಹಣದಿಂದ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಹಾಗಿದ್ದ ಮೇಲೆ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರಕ್ಕೆ ಯಾಕೆ ನೀಡಬೇಕು? ಇದನ್ನು ಅದಾನಿಯಂತಹ ಖಾಸಗಿ ಸಂಸ್ಥೆಗೆ ನೀಡಬೇಕಿತ್ತೇ? ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು. ವಿಮಾನ ನಿಲ್ದಾಣ … Read more

ಸೊರಬ, ಶಿವಮೊಗ್ಗ, ತೀರ್ಥಹಳ್ಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

Minister-Madhu-Bangarappa-Press-meet.

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸೆ.13ರಂದು ಮಧ್ಯಾಹ್ನ ಸೊರಬದ ರಂಗಮಂದಿರದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೆ.14ರಂದು ಬೆಳಗ್ಗೆ 10ಕ್ಕೆ ತೀರ್ಥಹಳ್ಳಿಯ ಬಸವಾನಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ … Read more

ಅರಣ್ಯ ಸಚಿವರನ್ನು ಭೇಟಿಯಾದ ಭದ್ರಾವತಿ MLA, 3 ಯೋಜನೆಗಳ ಕುರಿತು ಪ್ರಸ್ತಾಪ

Bhadravathi-MLA-sangameshwara-meets-minister-eshwar-khandre.

ಭದ್ರಾವತಿ: ಅರಣ್ಯ (forest) ಸಚಿವ ಈಶ್ವರ ಖಂಡ್ರೆ ಅವರನ್ನು ಶಾಸಕ ಬಿ.ಕೆ.ಸಂಗಮೇಶ್ವರ ಭೇಟಿ ನೀಡಿ ಮೂರು ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿದರು. ಈ ಸಂದರ್ಭ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಶಾಸಕರ ಡಿಮಾಂಡ್‌ಗಳೇನು? ಬೆಳ್ಳಿಗೆರೆ, ಗಂಗೂರು, ದೇವರಹಳ್ಳಿ, ಕಾಚಗೊಂಡನಹಳ್ಳಿ ಗ್ರಾಮಗಳ ಅರಣ್ಯ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಹಾಗೂ ಆನೆ ನಿರೋಧಕ ಕಂದಕ (ಇ.ಪಿ.ಟಿ) ಸೋಲಾರ್ ಟೆಂಟಕಲ್ಸ್ ಕಾಮಗಾರಿಯನ್ನು ₹20 ಕೋಟಿ ವೆಚ್ಚದಲ್ಲಿ ತುರ್ತಾಗಿ ನಡೆಸಬೇಕು. ಗಂಗೂರು, ದೇವರಹಳ್ಳಿ ಕಾಚಗೊಂಡನಹಳ್ಳಿ ಗ್ರಾಮಗಳ ಸುಮಾರು 850 ಹೆಕ್ಟರ್ … Read more