MRPಗಿಂತಲು ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡದಂತೆ ಎಚ್ಚರಿಕೆ
SHIMOGA NEWS, 25 OCTOBER 2024 : MRPಗಿಂತಲು ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಎಚ್ಚರಿಸಿದರು. ಅಬಕಾರಿ ಇಲಾಖೆಯ ಶಿವಮೊಗ್ಗ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು. ನಿಗದಿಗಿಂತಲು ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದರು. ಸಿಎಲ್-2, ಎಂಎಸ್‌ಐಎಲ್ ಅಂಗಡಿಗಳಲ್ಲಿ ಮದ್ಯ ಖರೀದಿಸಿ ಹೊರಗೆ ಕೊಂಡೊಯ್ದು ಸೇವಿಸುತ್ತಾರೆ. … Read more