ಶಿವಮೊಗ್ಗದ ಹರಿಗೆ ಬಳಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ, ಬೈಕ್ ಮುಂಭಾಗ ಪೀಸ್ ಪೀಸ್

221121 truck vike accident near harige

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಸ್ಥಳೀಯರೆ ಆಸ್ಪತ್ರೆಗೆ ರವಾನಿಸಿದ್ದಾರೆ. ಶಿವಮೊಗ್ಗದ ಹರಿಗೆ ಸಮೀಪದ ಹಾತಿ ನಗರದ ಬಳಿ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹೋಂಡಾ ಆ್ಯಕ್ಟೀವಾ ಡಿಕ್ಕಿಯಾಗಿದೆ. ಅಫಘಾತದ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಭಾರಿ ಮಳೆ ಮತ್ತು ಲಾರಿ ಚಾಲಕ ಇಂಡಿಕೇಟರ್ ಹಾಕದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರಿಂದ … Read more

ಲಕ್ಕಿನಕೊಪ್ಪ ಸರ್ಕಲ್ ಬಳಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ

181121 Accident Near Lakkinakoppa Circle

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021 ಕಾರು, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೆ ಹಾನಿ ಸಂಭವಿಸಿಲ್ಲ. ಲಕ್ಕಿನಕೊಪ್ಪ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಕುವೆಂಪು ವಿಶ್ವವಿದ್ಯಾಲಯದ ಮೂಲಕ ಚಿಕ್ಕಮಗಳೂರಿಗೆ ತೆರಳುತಿತ್ತು. ಲಕ್ಕಿನಕೊಪ್ಪ ಸರ್ಕಲ್ ಬಳಿ ವೇಗವಾಗಿ ಬಂದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಪಕ್ಕಕ್ಕೆ ಹೋಗಿ … Read more

BREAKING NEWS | ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

breaking news graphics

ಶಿವಮೊಗ್ಗ ಲೈವ್.ಕಾಂ | SHIMOGA NEWS |  24 ಸೆಪ್ಟೆಂಬರ್ 2021 ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ಮಾಡಲಾಗಿದೆ. ಹತ್ಯೆಯಾದವರನ್ನು ರಿಯಲ್ ಎಸ್ಟೇಟ್ ಉದ್ಯಮಿ ಎಂದು ಹೇಳಲಾಗುತ್ತಿದೆ. ಸಯ್ಯದ್ ಸಾದಿಕ್, ಮೃತ ಉದ್ಯಮಿ. ಕಲ್ಲೂರು ಹೊಸಳ್ಳಿ ಬಳಿ ಕೃತ್ಯ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದರಿಂದ ಸಯ್ಯದ್ ಸಾದಿಕ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಖಾಲಿ ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ … Read more

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗ್ಗೆ ನಾಪತ್ತೆ

Car Theft General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗಾಗುವುದರಲ್ಲಿ ಕಣ್ಮರೆಯಾಗಿದೆ. ಸರ್ವಿಸ್ ಸೆಂಟರ್ ಒಂದರ ಮುಂದೆ ಕಾರು ನಿಲ್ಲಿಸಿದ್ದ ಮಾಲೀಕ ನಂತರ ಬಂದು ನೋಡಿದಾಗ ಇರಲಿಲ್ಲ. ಮತ್ತೂರಿನ ಪ್ರಶಾಂತ್ ಎಂಬುವವರಿಗೆ ಸೇರಿದ ಟೊಯೋಟಾ ಇಟಿಯೋಸ್ ಕಾರನ್ನು ಕಳ್ಳರು ಕದ್ದೊಯ್ದಿದ್ದಾರೆ. ಊರುಗಡೂರು ಬಳಿ ಬೈಪಾಸ್ ರಸ್ತೆಯಲ್ಲಿರುವ ಸರ್ವಿಸ್ ಸೆಂಟರ್ ಒಂದರ ಮುಂದೆ ಪ್ರಶಾಂತ್ ಅವರು ಕಾರು ನಿಲ್ಲಿಸಿ ಮನೆಗೆ ತೆರಳಿದ್ದರು. ಬೆಳಗ್ಗೆ ಬಂದು ಪರಿಶೀಲಿಸಿದಾಗ ಕಾರು … Read more

BREAKING NEWS | ಶಿವಮೊಗ್ಗದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಪೊಲೀಸ್

190221 Police Firing on rowdy sheeter deepu at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021 ಶಿವಮೊಗ್ಗ ಪೊಲೀಸರ ಬಂದೂಕು ಮತ್ತೆ ಸದ್ದು ಮಾಡಿದೆ. ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ರೌಡಿ ಶೀಟರ್‍ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರಿದು ರೌಡಿ ಶೀಟರ್? ರೌಡಿ ಶೀಟರ್ ದೀಪು ಅಲಿಯಾಸ್ ಡಿಂಗನ ಕಾಲಿಗೆ ಪೊಲೀಸರು ಫೈರ್ ಮಾಡಿದ್ದಾರೆ. ಪ್ರಕರಣವೊಂದರ ಸಂಬಂಧ ರೌಡಿ ಶೀಟರ್‍ ದೀಪುನನ್ನು ಬಂಧಿಸಲು ತೆರಳಿದಾಗ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ … Read more

SHIMOGA NEWS | ಮೊಬೈಲ್ ಟವರ್ ನಿರ್ಮಾಣದ ವಿರುದ್ಧ ಸಿಡಿದೆದ್ದ ಜನರು, ಕಾಮಗಾರಿ ಸ್ಥಗಿತಕ್ಕೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019 ಮೊಬೈಲ್ ಟವರ್ ನಿರ್ಮಾಣಕ್ಕೆ ಇಡಿ ಏರಿಯಾದ ಜನರೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ, ಮತ್ತೆ ಇಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದಾರೆ. ಶಿವಮೊಗ್ಗದ RML ನಗರದ ಮನೆ ಒಂದರ ಮೇಲೆ ಟವರ್ ನಿರ್ಮಿಸಲಾಗುತ್ತಿದೆ. ಇದರಿಂದ ಸುತ್ತಮುತ್ತಲ ಜನರಿಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. RML ನಗರ ಜನನಿಬಿಡ ಪ್ರದೇಶವಾಗಿದೆ. ಸುತ್ತಮುತ್ತಲು ಸ್ಕೂಲು, ಕಾಲೇಜುಗಳಿವೆ. ಟವರ್ ನಿರ್ಮಾಣವಾದರೆ ರೇಡಿಯೇಷನ್ ಉಂಟಾಗಲಿದೆ. ಇದು … Read more