ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ
ಶಿವಮೊಗ್ಗ: ನಂಜಪ್ಪ ಆಸ್ಪತ್ರೆ ಸಿಬ್ಬಂದಿಯೊಬ್ಬರ ಮೊಬೈಲ್ (Mobile) ಕಸಿದುಕೊಂಡ ಮಂಗವೊಂದು ಮರ ಹತ್ತಿ ಕುಳಿತು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿತ್ತು. ಸುಮಾರು ಒಂದು ಗಂಟೆಯ ಪ್ರಹಸನದ ಬಳಿಕ ಮಂಗ ಮೊಬೈಲ್ ಬಿಟ್ಟು ಪರಾರಿಯಾಗಿದೆ. ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಯ ಕಿಟಕಿಯೊಳಗೆ ಕೈ ಹಾಕಿದ ಮಂಗ, ಆಸ್ಪತ್ರೆ ಸಿಬ್ಬಂದಿ ರೇಷ್ಮಾ ಎಂಬುವವರಿಗೆ ಸೇರಿದ ಮೊಬೈಲ್ ಎತ್ತಿಕೊಂಡು ಪರಾರಿಯಾಗಿತ್ತು. ಮೊಬೈಲ್ ಕಸಿದುಕೊಂಡು ಆಸ್ಪತ್ರೆ ಪಕ್ಕದ ಮರವೇರಿ ಕುಳಿತಿದ್ದ ಮಂಗ ಜನರ ಕುತೂಹಲ ಮೂಡಿಸಿತ್ತು. ಮರದ ತುದಿಗೆ ಏರಿ ರೆಂಬೆಯೊಂದರ ಮೇಲೆ ಬಹು … Read more