ಮೀನು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ಸೊರಬ: ದಂಡಾವತಿ ನದಿಯಲ್ಲಿ ಮೀನು ಹಿಡಿಯಲು (Fishing) ಹೋಗಿದ್ದ ಪಟ್ಟಣದ ಕಾನುಕೇರಿ ಗ್ರಾಮದ ಕುಮಾರ್(40) ಎಂಬುವವರು ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೀರಿನಲ್ಲಿ ಮುಳುಗಿದ ಕುಮಾರ್ ಅವರನ್ನು ಜನರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆಗಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಹಾಕುವ ಎಚ್ಚರಿಕೆ one drowned while fishing