ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ಬಂಧನಕ್ಕೆ ಒತ್ತಾಯ, ಕಾರಣವೇನು?

NSUI-Protest-against-vishweshwara-hegde-kageri-in-shimoga

ಶಿವಮೊಗ್ಗ: ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂದು ಹೇಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಹಾಗೂ ಸಂಸದ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಸಂಘಟನೆ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು. ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದ ಶಿಕ್ಷಣ ಸಚಿವರಾಗಿದ್ದವರು. ವಿಧಾನಸಭೆಯ ಸ್ಪೀಕರ್ ಹುದ್ದೆಯಂತಹ ಸಾಂವಿಧಾನಿಕ ಹುದ್ದೆ ನಿಭಾಯಿಸಿದ್ದವರು. ಆದರೆ, ಸಂಸದರಾಗಿ ಜನರಲ್ಲಿ ರಾಷ್ಟ್ರಗೀತೆ, ಸಂವಿಧಾನಗಳ ಬಗ್ಗೆ ಅಗೌರವ ಮೂಡಿಸುವಂತಹ ಮಾತುಗಳನ್ನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. … Read more

‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್‌ʼ, NSUI ಗರಂ

NSUI-memorandum-about-Re-valuation

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ಡಿಜಿಟಲ್ ರೂಪದಲ್ಲಿ ನಡೆಸಿದ ಮೌಲ್ಯಮಾಪನದಲ್ಲಿ ಸಾಕಷ್ಟು ಲೋಪಗಳಿವೆ. ಆದ್ದರಿಂದ ಮರುಮೌಲ್ಯಮಾಪನ (Valuation) ಮಾಡಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿ ಕಾಲೇಜಿನಲ್ಲಿ 50 ರಿಂದ 60 ವಿದ್ಯಾರ್ಥಿಗಳು 0,5,6,7 ಅಂಕಗಳನ್ನು ಪಡೆದು ಅನುತ್ತೀರ್ಣ ಗೊಂಡಿದ್ದಾರೆ ಹಾಗೂ ಉತ್ತೀರ್ಣ ಗೊಂಡ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ವಿಶ್ವ ವಿದ್ಯಾಲಯದ ಪರೀಕ್ಷಾಂಗ ವಿಭಾಗವು ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಪರೀಕ್ಷಾ ಶುಲ್ಕ, ಮರುಮೌಲ್ಯ ಮಾಪನ ಎಂದು … Read more

ಶೂ ಎಸೆದ ವಕೀಲ, ಬಂಧನಕ್ಕೆ ಶಿವಮೊಗ್ಗದಲ್ಲಿ ಕಾನೂನು ವಿದ್ಯಾರ್ಥಿಗಳ ಆಗ್ರಹ

131025 NSUI Protest in Shimoga city

ಶಿವಮೊಗ್ಗ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ (advocate) ರಾಕೇಶ್‌ ಕಿಶೋರ್‌ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಸಿಬಿಆರ್‌ ರಾಷ್ಟ್ರೀಯ ಕಾನೂನು ಕಾಲೇಜಿನ ಎನ್‌ಎಸ್‌ಯುಐ ಘಟಕ ರಾಷ್ಟ್ರಪತಿ ಅವರನ್ನು ಆಗ್ರಹಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾನೂನು ವಿದ್ಯಾರ್ಥಿಗಳು, ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ಸಂವಿಧಾನ ಮತ್ತು ಡಾ. ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ. ಘಟನೆ ಬೆನ್ನಿಗೆ ವಕೀಲ ಪರಿಷತ್‌ನಿಂದ ಅವರನ್ನು ಅಮಾನತು … Read more

ಶಿವಮೊಗ್ಗ ಕಾಂಗ್ರೆಸ್‌ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ

Chethan-Gowda-nominated-as-president-for-board.

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅ‍ಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ನಾಯಕ (Youth Leader) ಚೇತನ್.ಕೆ ಅವರನ್ನು ಜವಳಿ ಮೂಲ ಸೌಲಭ್ಯ (ವಿದುತ್‌ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಇದನ್ನೂ ಓದಿ » ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು?

NSUI-protest-at-Kuvempu-University

ಶಂಕರಘಟ್ಟ: ನಿಗದಿತ ಸಮಯಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶದಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು. ಎನ್‌ಎಸ್‌ಯುಐ ಬೇಡಿಕೆಗಳೇನು? ಕುವೆಂಪು ವಿವಿಯ ರಂಭಾಪುರಿ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕೊಠಡಿಗಳಲ್ಲಿ ಮಳೆ ನೀರು ಸೋರುತ್ತಿದೆ. ಕಳೆದ 2 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ಕಾಲೇಜಿನಲ್ಲಿ ಬಿಸಿಎ ಪದವಿಗೆ ಸರ್ಕಾರಿ ಸೀಟುಗಳಿದ್ದರೂ ಮನಬಂದಂತೆ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ. … Read more

ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ, ಸಚಿವ ಸ್ಥಾನದಿಂದ ವಜಾಗೆ ಪಟ್ಟು

NSUI-Protest-against-Home Minister Amith-Shah-in-Shimoga

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ (Minister) ಅಮಿತ್‌ ಷಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿತು. ಮಹಾನಗರ ಪಾಲಿಕೆಯ ಡಾ. ಅಂಬೇಡ್ಕರ್‌ ಪ್ರತಿಮೆ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅಮಿತ್‌ ಷಾ ವಿರುದ್ಧ ಘೋಷಣೆ ಕೂಗಿದರು. ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸದೇ ಇದ್ದಿದ್ದರೆ ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. … Read more

ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ

20923-Kuvempu-Rangamandira-in-Shimoga.webp

SHIMOGA, 31 JULY 2024 : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ‘ನಮ್ಮೂರ ಹೆಮ್ಮೆʼ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಆ.3ರಂದು ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರಾಂಕ್‌ ಗಳಿಸಿದವರಿಗೆ. ಯುಪಿಎಸ್‌ಸಿ, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್‌ … Read more

ಶಿವಮೊಗ್ಗದಲ್ಲಿ ಸುರಿವ ಮಳೆಯಲ್ಲು ವಿದ್ಯಾರ್ಥಿಗಳ ಹೋರಾಟ, ಭದ್ರಾವತಿಯಲ್ಲಿ ಮೆರವಣಿಗೆ

NSUI-Protest-against-NEET-Exam-scam

SHIVAMOGGA LIVE NEWS | 10 JUNE 2024 SHIMOGA : ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಆದ್ದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ‌ಎನ್‌ಎಸ್‌ಯುಐ ಸಂಘಟನೆ (Students) ಆಗ್ರಹಿಸಿದೆ. ಸುರಿವ ಮಳೆಯಲ್ಲೂ ಮಹಾವೀರ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರು, ನೀಟ್‌ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಅನುಮಾನವಿದೆ. 67 ವಿದ್ಯಾರ್ಥಿಗಳು ಪ್ರಥಮ ರಾಂಕ್‌ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 8 … Read more

ಶಿವಮೊಗ್ಗದಲ್ಲಿ ಡೊನೇಷನ್‌ ಹಾವಳಿ, ತಡೆಯೊಡ್ಡದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

NSUI-memorandum-against-Donation-menace-in-Shimoga.

SHIVAMOGGA LIVE NEWS | 14 MAY 2024 SHIMOGA : ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಡೊನೇಷನ್‌ ಹಾವಳಿಗೆ (Donation Menace) ತಡೆಯೊಡ್ಡಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತದೆ. ಶುಲ್ಕದಲ್ಲಿ ವಿನಾಯಿತಿ ನೀಡಿದರೆ ಸಾವಿರಾರು ವಿದ್ಯಾರ್ಥಿಗಳಿಗೆ ಹಾಗೂ ಬಡವರಿಗೆ … Read more

ಶಿವಮೊಗ್ಗದಲ್ಲಿ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್ ವಶಕ್ಕೆ

070224 NSUI workers protest in front if vijayendra house Shimoga 1

SHIVAMOGGA LIVE NEWS | 7 FEBRUARY 2024 SHIMOGA | ತೆರಿಗೆ ಹಂಚಿಕೆ, ಬರ ಪರಿಹಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಿತು. ಬೈಪಾಸ್ ರಸ್ತೆಯಲ್ಲಿರುವ ವಿಜಯೇಂದ್ರ ನಿವಾಸಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು‌‌. ಸಂಸದರಿಗೆ ದಮ್ಮು, ತಾಖತ್ತು ಇದ್ದರೆ ಇದಕ್ಕೂ ಮೊದಲು ಬೈಪಾಸ್ ರಸ್ತೆಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನಾ ಸಭೆ ನಡೆಸಿದರು. ಈ ವೇಳೆ … Read more