ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು, ಯಾರದು ಆರೋಪಿ? ಗುಂಡು ಹಾರಿಸಿದ್ದೇಕೆ?
SHIVAMOGGA LIVE | 3 JULY 2023 SHIMOGA : ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು (BULLET) ಹಾರಿಸಿದ್ದಾರೆ. ಬಂಧಿಸಲು ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಸೈಫುಲ್ಲಾ ಖಾನ್ ಅಲಿಯಾಸ್ ಸೈಫು ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಆಯನೂರು ಸಮೀಪದ ದೊಡ್ಡದಾನವಂದಿ ಗ್ರಾಮದಲ್ಲಿ ಸೈಫುನನ್ನು ಬಂಧಿಸಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಆಸ್ಪತ್ರೆಗೆ ಆರೋಪಿ ಶಿಫ್ಟ್ … Read more