ಹರ್ಷ ಹತ್ಯೆ ಕೇಸ್, 10 ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ
SHIVAMOGGA LIVE NEWS | 7 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆ.25ರಿಂದ 11 ದಿನ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಹಲವು ಮಾಹಿತಿಗಳು ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವತ್ತು ಆರೋಪಿಗಳನ್ನು ಪುನಃ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವತ್ತಿನಿಂದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ್ದ … Read more