ಭದ್ರಾವತಿಯ ವ್ಯಕ್ತಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹61,000 ದಂಡ, ಏನಿದು ಪ್ರಕರಣ?

Shimoga District Court

ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 21 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹61,000 ದಂಡ ವಿಧಿಸಿ ಆದೇಶಿಸಿದೆ.  2023ರಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ನಡೆದಿತ್ತು. ಈ ಬಗ್ಗೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.  ಇದನ್ನೂ ಓದಿ » ಶಿವಮೊಗ್ಗದ ರೈತನಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು? ಪ್ರಕರಣದ ತನಿಖೆ ನಡೆಸಿದ್ದ ಭದ್ರಾವತಿ ನಗರ ವೃತ್ತದ … Read more

ಶಿವಮೊಗ್ಗದಿಂದ ಕೆಲಸಕ್ಕೆಂದು ಆಫ್ರಿಕಾಗೆ ಹೋಗಿದ್ದ, ಭಾರತಕ್ಕೆ ಹಿಂತಿರುಗಿ 7 ವರ್ಷವಾದರೂ ಮನೆಗೆ ಬಾರದ ವ್ಯಕ್ತಿ

200123 Police Jeep With Light jpg

SHIVAMOGGA LIVE NEWS | 26 JUNE 2024 SHIMOGA: ಕೆಲಸಕ್ಕೆಂದು ಆಫ್ರಿಕಾ ದೇಶಕ್ಕೆ ತೆರಳಿದ್ದ ವ್ಯಕ್ತಿ ಭಾರತಕ್ಕೆ ಮರಳಿದ್ದು ಮನೆಗೆ ಹಿಂತಿರುಗಿಲ್ಲ. ಏಳು ವರ್ಷದಿಂದ ಆತ ಕಾಣೆಯಾಗಿದ್ದಾನೆ (Missing) ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಇಬ್ರಾಹಿಂ ಖಲೀಲ್‌ ವುಲ್ಲಾ (39) ಕಾಣೆಯಾದಾತ. ವೆಸ್ಟ್‌ ಅಫ್ರಿಕಾದ ಸಿರಾ ಲಿಯೋನ್‌ ಎಂಬಲ್ಲಿಗೆ ಇಬ್ರಾಹಿಂ ಖಲೀಲ್‌ ವುಲ್ಲಾ ಕೆಲಸಕ್ಕೆ ತೆರಳಿದ್ದ. 2016ರಲ್ಲಿ ಈತ ಭಾರತಕ್ಕೆ ಹಿಂತಿರುಗಿದ್ದ. ಅಂದಿನಿಂದ ಈತ ಮನೆಗೆ ಬಂದಿಲ್ಲ ಎಂದು ಪ್ರಕಟಣೆಯಲ್ಲಿ … Read more

ಶಿವಮೊಗ್ಗದಲ್ಲಿ ವಾಕಿಂಗ್ ತೆರಳಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಸಂಸದ ಸೇರಿ ಹಲವರು ಆಸ್ಪತ್ರೆಗೆ ದೌಡು

Attack-on-a-person-in-Gopala-in-Shimoga

SHIVAMOGGA LIVE NEWS | 3 ಮಾರ್ಚ್ 2022 ಸಾಕು ನಾಯಿ ಕರೆದುಕೊಂಡು ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಗೋಪಾಳದ ಪದ್ಮಾ ಟಾಕೀಸ್ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ಸ್ಥಳೀಯರಾದ ವೆಂಕಟೇಶ್ ಅವರ ಮೇಲೆ ಹಲ್ಲೆಯಾಗಿದೆ. ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more

ಹೊಳೆ ಬಸ್ ಸ್ಟಾಪ್ ಬಳಿ ಬಾರ್ ಮುಂದೆ ವ್ಯಕ್ತಿ ಮೃತದೇಹ ಪತ್ತೆ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಬಾರ್ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ. ಪೊಲೀಸರು ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳೆ ಬಸ್ ಸ್ಟಾಪ್ ಬಳಿ ಶಂಕರ ಮಠ ಹಿಂಭಾಗದ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಬಾರ್ ಒಂದರ ಮುಂದೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟಿರುವ ಶಂಕೆ ಮೇರೆಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ … Read more