ಶಿವಮೊಗ್ಗದ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸಿದ ಬಳಿಕ ಕಾರ್ಮಿಕನಿಗೆ ರಕ್ತವಾಂತಿ, ಸಾವು
ಶಿವಮೊಗ್ಗ: ತಾಲೂಕಿನ ಶ್ರೀರಾಂಪುರ ಗ್ರಾಮದ ಅಡಿಕೆ ತೋಟವೊಂದರಲ್ಲಿ ಅಡಿಕೆ ಮರಗಳಿಗೆ ಔಷಧಿ (pesticide) ಸಿಂಪಡಣೆ ಮಾಡುವ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ತೋಟದ ಮಾಲೀಕನ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಂಜಾನಾಯ್ಕ ಎಂಬ ಕಾರ್ಮಿಕ ಶ್ರೀರಾಂಪುರದ ಏಕಾಂತಪ್ಪ ಎಂಬುವವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಮರಳಿದಾಗ ತೀವ್ರ ಕೆಮ್ಮು, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೆ ಮಂಜಾನಾಯ್ಕ ಅವರನ್ನು ಗಾಡಿಕೊಪ್ಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ … Read more