ಸೋಮಿನಕೊಪ್ಪದಲ್ಲಿ ಮೆಕ್ಕೆಜೋಳದ ರಾಶಿಗೆ ಬೆಂಕಿ
SHIVAMOGGA LIVE NEWS | 7 ಮಾರ್ಚ್ 2022 ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಹಾನಿ ಉಂಟಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಕುಮಾರಪ್ಪ, ನರಸಿಂಹಪ್ಪ, ಸರಸ್ವತಮ್ಮ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿದೆ. ಸುಮಾರು 210 ಕ್ವಿಂಟಾಲ್ ಮೆಕ್ಕೆ ಜೋಳವನ್ನು ಒಂದು ಕಡೆ ರಾಶಿ ಮಾಡಿ ಇಡಲಾಗಿತ್ತು. ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. … Read more