ಶಿಕಾರಿಪುರದಲ್ಲಿ ಯಡಿಯೂರಪ್ಪ ಜನ್ಮದಿನ ಅದ್ಧೂರಿ ಆಚಾರಣೆ, ಸಾವಿರ ಸಾವಿರ ಜನ ಭಾಗಿ, ಯಾರೆಲ್ಲ ಏನೆಲ್ಲ ಹೇಳಿದರು?
ಶಿಕಾರಿಪುರ: ರಾಜ್ಯದ ಉದ್ದಗಲಕ್ಕೂ ಓಡಾಟ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಏಕೈಕ ಗುರಿಯೊಂದಿಗೆ ಮುನ್ನಡೆಯುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yediyurappa) ಹೇಳಿದರು. ಕುಮದ್ವತಿ ಕಾಲೇಜು ಆವರಣದ ಏಕಲವ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಯಡಿಯೂರಪ್ಪ ಅವರ 84ನೇ ಜನ್ಮದಿನದ ಸಂಭ್ರಮಾಚರಣೆಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಮಾತು ಸಾಧನೆಯಾಗಬಾರದು. ಬದಲಿಗೆ ಸಾಧನೆಯೇ ಮಾತು ಆಗಬೇಕು ಎಂಬ ಮಂತ್ರದಲ್ಲಿ ನಂಬಿಕೆ ಇಟ್ಟವನು ನಾನು. ಅದಕ್ಕೆ ಶ್ರಮವಹಿಸಿ ಕೆಲಸ ಮಾಡುವುದು ಅಗತ್ಯ. ಶೋಷಿತರ, ದಮನಿತರ ಏಳಿಗೆಗೆ ಪ್ರಾಮಾಣಿಕವಾಗಿ ಪ್ರಯತ್ನ … Read more