ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಇನ್ನಿಲ್ಲ, ಪತ್ರಿಕಾ ಭವನದಲ್ಲಿ ಅಂತಿಮ ದರ್ಶನ
SHIVAMOGGA LIVE NEWS | 11 JANUARY 2025 ಶಿವಮೊಗ್ಗ : ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ (Reporter) ಶಶಿಧರ್.ಕೆ.ವಿ (39) ನಿಧನರಾಗಿದ್ದಾರೆ. ತೀವ್ರ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಶಶಿಧಕರ್.ಕೆ.ವಿ. ಕೆಳೆದ ಆರು ವರ್ಷದಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕು ಮೊದಲು ವಿಜಯಪುರ ಜಿಲ್ಲೆಯಲ್ಲಿ ಈಟಿವಿ, ಚಾಮರಾಜನಗರ ಜಿಲ್ಲೆಯಲ್ಲಿ ಸುವರ್ಣ ನ್ಯೂಸ್ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು. 16 ವರ್ಷದಿಂದ … Read more