ಶಿವಮೊಗ್ಗದಲ್ಲಿ ಶೆಡ್‌ ಮೇಲೆ ದಾಳಿ, ಆರೋಪಿ ಅರೆಸ್ಟ್‌, ಏನಿದು ಕೇಸ್‌?

Goa-Liquor-seized-in-shimoga-taluk

ಶಿವಮೊಗ್ಗ: ಗೋವಿಂದಪುರ ಗ್ರಾಮದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಕುಮಾರ್ ಎಂಬುವವರಿಗೆ ಸೇರಿದ ಶೆಡ್‌ ಮೇಲೆ ದಾಳಿ (Raided A Shed) ನಡೆಸಲಾಗಿದ ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬುಧವಾರ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಅನಧಿಕೃತವಾಗಿ ಮಾರಾಟ ಮಾಡಲು 51.75 ಲೀಟರ್‌ ಗೋವಾ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಅದನ್ನು ವಶಕ್ಕೆ ಪಡೆಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ … Read more

ಮಂಡಗದ್ದೆ ಬಳಿ ಅರಣ್ಯ ಇಲಾಖೆ ದಿಢೀರ್‌ ಕಾರ್ಯಾಚರಣೆ, ಇಬ್ಬರು ಆರೋಪಿಗಳು ಅರೆಸ್ಟ್‌

Mandagadde Graphics by smg live

ತೀರ್ಥಹಳ್ಳಿ: ಅಕ್ರಮವಾಗಿ ಶ್ರೀಗಂಧ (Sandal Wood) ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾ‌ರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ, ಸೋಮವಾರ ಬಂಧಿಸಿದೆ. ಕಣಗಲಕೊಪ್ಪ ಗಸ್ತು ವಿಭಾಗದಲ್ಲಿ 33 ಕೆ.ಜಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿಎಫ್‌ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಮೇಲಿನಪಟ್ರೊಳ್ಳಿ ಗ್ರಾಮದ ಸ.ನಂ.06ರಲ್ಲಿ ಶ್ರೀಗಂಧ ಮರ ಕಡಿತಲೆ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟ ತುಂಡುಗಳ ಜತೆಗೆ ಆರೋಪಿಗಳಾದ ಕಣಗಲಕೊಪ್ಪ ಗ್ರಾಮದ ಸತೀಶ್ … Read more

ತುಮಿಳುನಾಡಿನಿಂದ ಬಂದ ಲಾರಿ ಮೇಲೆ ಶಿವಮೊಗ್ಗ DySP ನೇತೃತ್ವದಲ್ಲಿ ದಾಳಿ, ಲಕ್ಷ ಲಕ್ಷದ ವಸ್ತುಗಳು ಸೀಜ್‌

Police-Van-in-Shimoga-City

ಶಿವಮೊಗ್ಗ: ಸಾರಿಗೆ ಅಧಿಕಾರಿಗಳಿಂದ ಪರವಾನಗಿ ಪಡೆಯದೆ, ಸುರಕ್ಷಿತ ಕ್ರಮ ಕೈಗೊಳ್ಳದೆ ಪಟಾಕಿ ಸಾಗಿಸುತ್ತಿದ್ದ ಲಾರಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ₹4,15,741 ಮೌಲ್ಯದ ಪಟಾಕಿ ಜಫ್ತಿ ಮಾಡಲಾಗಿದೆ. ತಮಿಳುನಾಡಿನ ಶಿವಾಕಾಶಿಯಿಂದ ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗೋಡೋನ್‌ಗಳಿಗೆ ಪಟಾಕಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಸಂಜೀವ್‌ ಕುಮಾರ್‌ ನೇತೃತ್ವದಲ್ಲಿ ವಿರೂಪಿನಕೊಪ್ಪ ಬಳಿ ದಾಳಿ ನಡೆಸಿದ ಪೊಲೀಸರು, ದಾಖಲೆಗಳ ಪರಿಶೀಲನೆ ನಡೆಸಿದರು. ಸ್ಪೋಟಕ ವಸ್ತುಗಳ ಸಾಗಣೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲ. ಲಾರಿಯಲ್ಲಿ ಅಗ್ನಿ ನಿರೋಧಕ ವಸ್ತುಗಳು … Read more

ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?

Lokayukta-Raid-in-shimoga-SIMS-FDA-Lakshmipathi-House.

ಶಿವಮೊಗ್ಗ: ಆದಾಯಕ್ಕಿಂತಲು ಹೆಚ್ಚಿಗೆ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಶಿವಮೊಗ್ಗ ಮೆಡಿಕಲ್‌ ಕಾಲೇಜು ಎಫ್‌.ಡಿ.ಎ ಲಕ್ಷ್ಮೀಪತಿ.ಸಿ.ಎನ್‌ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಐದು ಕಡೆ ದಾಳಿ ನಡೆಸಿ ಒಟ್ಟು ₹2.49 ಕೋಟಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ಲಕ್ಷ್ಮೀಪತಿ ಬಳಿ 3 ಮನೆಗಳು, 3 ಎಕರೆ 20 ಗುಂಟೆ ಕೃಷಿ ಜಮೀನು ಪತ್ತೆಯಾಗಿದೆ. ಇವುಗಳ ಮೌಲ್ಯ ₹1,63,80,000 ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನು ದಾಳಿ ಸಂದರ್ಭ ₹12,01,720 ನಗದು, ₹ 23,29,880 … Read more

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ, ಇಬ್ಬರ ಬಂಧನ

Shikaripura-Town-Police-Station

ಶಿರಾಳಕೊಪ್ಪ: ಪಟ್ಟಣದ ಪೊಲೀಸರು ಮಟ್ಕಾ ಅಡ್ಡೆ ಮೇಲೆ ದಾಳಿ (Raid) ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಹೆಚ್‌.ಕೆ.ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶದಲ್ಲಿ ಮಟ್ಕಾ ಬರೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ದಾಳಿ ನಡೆಸಲಾಗಿದೆ. ರಿಯಾಜ್ ಮತ್ತು ವೀರಭದ್ರಪ್ಪ ಎಂಬುವರನ್ನು ಸಬ್ ಇನ್ಸ್‌ಪೆಕ್ಟರ್ ಟಿ.ಬಿ.ಪ್ರಶಾಂತ್ ಕುಮಾ‌ರ್ ನೇತೃತ್ವದ ತಂಡ ಬಂಧಿಸಿದೆ. ಬಂಧಿತರಿಂದ ₹5,000 ನಗದು ಹಾಗೂ ಮಟ್ಕಾ ಬರವಣಿಗೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ  … Read more

BREAKING NEWS – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿ ಮನೆಯಲ್ಲಿ ಪರಿಶೀಲನೆ

Lokayukta-Raid-in-shimoga-near-krushi-nagara

ಶಿವಮೊಗ್ಗ: ರಾಜ್ಯದ‌ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ (lokayukta raid) ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲು ದಾಳಿಯಾಗಿದೆ. ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿಯಾಗಿದೆ. ದಾವಣಗೆರೆಯಿಂದ … Read more

ಶಿವಮೊಗ್ಗ ತಹಶೀಲ್ದಾರ್‌ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಡತಗಳ ಪರಿಶೀಲನೆ, ದಿಢೀರ್‌ ದಾಳಿಗೇನು ಕಾರಣ?

Shimoga-Taluk-Office-General-Image

ಶಿವಮೊಗ್ಗ: ದುರಾಡಳಿತ, ಲಂಚಕ್ಕೆ ಬೇಡಿಕೆ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಆರೋಪಗಳ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು.  ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಪೈಕಿ ಒಂದು ತಂಡ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿತ್ತು.  ಏನೇನೆಲ್ಲ ಪರಿಶೀಲಿಸಿದರು? ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಬಲೆಗೆ

Lokayuktha-Raid-General-Image

ಶಿವಮೊಗ್ಗ: ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆ‍ಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ₹10,000 ನಗದು ಮತ್ತು ಅಧಿಕಾರಿ ಎ.ಪಿ.ಶಶಿಧರ್‌ನನ್ನು ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು … Read more

ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ಅಧಿಕಾರಿಗಳಿಂದ ದಿಢೀರ್‌ ದಾಳಿ, 63 ಕೇಸ್‌ ದಾಖಲು

Raid-at-Holehonnuru-city.

ಹೊಳೆಹೊನ್ನೂರು: ದಿಢೀರ್‌ ಕಾರ್ಯಾಚರಣೆ (Raid) ನಡೆಸಿದ ಅಧಿಕಾರಿಗಳು ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ 63 ಪ್ರಕರಣ ದಾಖಲು ಮಾಡಿಕೊಂಡು ₹4800 ದಂಡ ಸಂಗ್ರಹಿಸಿದ್ದಾರೆ. ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ಇಂದು ಕಾರ್ಯಾಚರಣೆ ನಡೆಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ಕೋಟ್ಪಾ ಕಾಯ್ದೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ ರಾಜ್ ಅರಸ್, ರವಿರಾಜ್, ತಾಲೂಕು ಆರೋಗ್ಯ ಅಧಿಕಾರಿಗಳ … Read more

ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

Lokayukta-raid-gold-found-at-Professors-house.

ಶಿವಮೊಗ್ಗ: ಆದಾಯಕ್ಕು ಮೀರಿದ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ 8 ಅಧಿಕಾರಿಗಳಿಗೆ ಸಂಬಂಧಿಸಿದ 45 ಕಡೆಗಳಲ್ಲಿ ದಾಳಿ ನಡೆಸಿದರು. ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಕೋಟ್ಯಂತರ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ (Asset) ಪತ್ತೆ ಹಚ್ಚಿದ್ದಾರೆ. ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಎಡಿಆರ್‌ ಕೋಆರ್ಡಿನೇಟರ್‌, ಪ್ರಾಧ್ಯಾಪಕ ಡಾ. ಪ್ರದೀಪ್‌ ಅವರಿಗೆ ಸೇರಿದ 6 ಕಡೆಗಳಲ್ಲಿ ದಾಳಿ ನಡೆಸಿ, ಶೋಧ ಕಾರ್ಯ ನಡೆಸಲಾಗಿದೆ. ಒಟ್ಟು ₹6.34 ಕೋಟಿ ಮೊತ್ತದ … Read more