ಶಿವಮೊಗ್ಗದಲ್ಲಿ ಎಸಿಬಿ ಅಧಿಕಾರಿಗಳ ದಾಳಿ, ಲಂಚ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019 ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸ್ಸು ಮಾಡಲು ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕಾ ಸಹಾಯಕ ನಿರ್ದೇಶಕ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಮುಖ್ಯಮಂತ್ರಿ ಉದ್ಯೋಗ ಸೃಜನ ಯೋಜನೆಯಲ್ಲಿ ಶಾಮಿಯಾನ ಅಂಗಡಿ ತೆರೆಯಲು ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸು ಮಾಡಲು ನಾಲ್ಕು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಪ್ರಶಾಂತ್ ಕುಮಾರ್ ಎಸಿಬಿ ಬಲೆಗೆ … Read more

ಭದ್ರಾವತಿಯಲ್ಲಿ 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಎಸಿಬಿ ರೇಡ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 29 ಆಗಸ್ಟ್ 2019 ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಿಗ ಶಿಕ್ಷೆ ಕೊಡಿಸುವ ಸಲುವಾಗಿ ಹಣ ಪಡೆಯುತ್ತಿದ್ದ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಭದ್ರಾವತಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ರವೀಂದ್ರ ಅವರು ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಸುನಿಲ್ ಗಾಯಕ್’ವಾಡ್ ಎಂಬುವವರಿಂದ 20 ಸಾವಿರ ರೂ. ಹಣ ಸ್ವಿಕರಿಸುತ್ತಿದ್ದಾಗ, ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರಂಜನ್ ಕದಂ ಎಂಬುವವರ ಕೊಲೆ ಪ್ರಕರಣದಲ್ಲಿ, ಆರೋಪಿಗಳಿಗೆ … Read more

ಮುಂದುವರೆದ ಪೊಲೀಸ್ ರೇಡ್, ಹೊಸನಗರದಲ್ಲಿ 80 ಲೋಡ್ ಮರಳು ಸೀಜ್

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 9 ಮಾರ್ಚ್ 2019 ಹೊಸನಗರ ತಾಲೂಕಿನ ಹಲುಸಾಲೆ ಮಳವಳ್ಳಿ ಗ್ರಾಮದ ಬಳಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಂದಾಜು 2.56 ಲಕ್ಷ ವೌಲ್ಯದ ಮರಳನ್ನು ವಶಕ್ಕೆ ಪಡೆಯಲಾಗಿದೆ. ಹಲುಸಾಲೆ ಮಳವಳ್ಳಿ ಗ್ರಾಮದ ದಿನೇಶ್‌ಗೌಡ ಎಂಬುವವರು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದ ಶರಾವತಿ ಹಿನ್ನೀರಿಗೆ ಸೇರಿದ ನೀರಿಲ್ಲದ ಹಳ್ಳದಲ್ಲಿ  ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್, ಸಿಬ್ಬಂದಿ ಭೇಟಿ ನೀಡಿ … Read more