ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ವಿವಿಧೆಡೆ ಮೋಡ ಕವಿದ ವಾತಾವರಣ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?

rain-in-shimoga-city-near-vidyanagara-flyover

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆ ಮುಂದುವರೆದಿದೆ (Rain Update). ಅಲ್ಲಲ್ಲಿ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ಹಲವಡೆ ಮೋಡ ಕವಿದ ವಾತಾವರಣ ಇದೆ. ಯಾವುದೇ ಸಂದರ್ಭ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ವಿವಿಧೆಡೆ ಮಳೆಯಾಗುತ್ತಿದೆ. ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಜಿಲ್ಲೆಯಲ್ಲಿ ಬೆಳಗ್ಗೆ 8.30ರಿಂದ 11.15ರವರೆಗೆ ಸರಾಸರಿ 8.5 ಮಿ.ಮೀ.ನಷ್ಟು ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ? ಈ ಸುದ್ದಿ ಪ್ರಕಟವಾಗುವಾಗ ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು, … Read more