ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆ, ಭದ್ರಾವತಿಯಲ್ಲಿ ಆಲಿಕಲ್ಲು ಸಹಿತ ಮಳೆ
ಶಿವಮೊಗ್ಗ ಲೈವ್.ಕಾಂ | SHIMOGA RAIN | 28 ಏಪ್ರಿಲ್ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಹಲವು ಕಡೆ ಆಲಿಕಲ್ಲು ಮಳೆಯಾದ ವರದಿಯಾಗಿದೆ. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಜೋರು ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಭಾರಿ ಮಳೆಯಿಂದ ಅಲ್ಲಲ್ಲಿ ಚರಂಡಿ ತುಂಬಿ ನೀರು ರಸ್ತೆಗೆ ಹರಿದಿದೆ. ಇನ್ನು, ಜೋರು ಮಳೆಯಿಂದ ಶಿವಮೊಗ್ಗ ನಗರದಲ್ಲಿ ಜನಜೀವನ ಅಸ್ತವ್ಯಸ್ತ ಆಗಿತ್ತು. ಶಿವಮೊಗ್ಗ ತಾಲೂಕಿನಲ್ಲೂ ಮಳೆ ಅಬ್ಬರಿಸಿದೆ. ವಿವಿಧೆಡೆ ಮಳೆಗೆ ಮರಗಳು ಬುಡಮೇಲಾದ ವರದಿಯಾಗಿದೆ. … Read more