ಶಿವಮೊಗ್ಗದಲ್ಲಿ ರಾಜ ಕಾಲುವೆ ಅವೈಜ್ಞಾನಿಕ ಕಾಮಗಾರಿ, ಸ್ಥಳಕ್ಕೆ ತೆರಳಿ ಸಂಸದ ರಾಘವೇಂದ್ರ ಪರಿಶೀಲನೆ
ಶಿವಮೊಗ್ಗ: ರಾಜ ಕಾಲುವೆಯ (Raja Kaluve) ಅವೈಜ್ಞಾನಿಕ ನಿರ್ಮಾಣದಿಂದಾಗಿ ಮಳೆ ಹೆಚ್ಚಾದ ಸಂದರ್ಭ ವಿವಿಧೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ ಎಂದು ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್ ಹಾಲ್ ಸಮೀಪ ರಾಜ ಕಾಲುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಮಳೆ ಹೆಚ್ಚಾದರೆ ಕೊಳಚೆ ನೀರು ಗೋಪಾಲಗೌಡ ಬಡಾವಣೆಯ ಮನೆಗಳಿಗೆ ನುಗ್ಗಿ ಹಾನಿ ಉಂಟಾಗುತ್ತಿದೆ. ಈ ಕುರಿತು ಸ್ಥಳೀಯರು ತಿಳಿಸಿದ್ದರಿಂದ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. … Read more