ಶಿವಮೊಗ್ಗದಲ್ಲಿ ಮನೆಗೆ ನುಗ್ಗಿ ದರೋಡೆ, ಮಗು ಸಾಯಿಸುವುದಾಗಿ ಬೆದರಿಸಿ ಹಣ, ಚಿನ್ನಾಭರಣ ದೋಚಿ ಪರಾರಿ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಮಂಕಿ ಕ್ಯಾಪ್ ಧರಿಸಿಕೊಂಡು ಬಂದು ಮನೆಯೊಂದಕ್ಕೆ ನುಗ್ಗಿ ಹಾಡಹಗಲೆ ದರೋಡೆ ಮಾಡಲಾಗಿದೆ. ಮನೆಯಲ್ಲಿದ್ದ ಒಬ್ಬರಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಯಾರಾದರೂ ಕಿರುಚಾಡಿದರೆ ಮಗುವನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ, ಹಣ, ಚಿನ್ನಾಭರಣ ಕದ್ದೊಯ್ಯಲಾಗಿದೆ. ಶಿವಮೊಗ್ಗ ತಾಲೂಕು ಚಿಕ್ಕಮರಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜಯಣ್ಣಗೌಡ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ಮಂಕಿ ಕ್ಯಾಪ್ ಧರಿಸಿ, ಎರಡು ಬೈಕ್’ನಲ್ಲಿ ಬಂದ ನಾಲ್ವರು ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು … Read more

ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021 ಬೈಕ್‍ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ. ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಖಂಡಿಕಾ ಕ್ರಾಸ್‍ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಾಗರ … Read more

ಶಿವಮೊಗ್ಗದ ಪುರಲೆ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ

220721 Purale Lake Youth Missing 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಆರೋಗ್ಯ ಸಮಸ್ಯೆಯಿಂದ ಮನನೊಂದು ಪುರಲೆ ಕೆರೆಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಭಾರಿ ಮಳೆಯ ನಡುವೆಯು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ಸಂಜೆ ವೇಳೆಗೆ ಮೃತದೇಹ ಪತ್ತೆಯಾಗಿದೆ. ನಾಗರಾಜ್ (24) ಮೃತ ದುರ್ದೈವಿ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಾಗರಾಜ್‍, ಜುಗುಪ್ಸೆಯಿಂದ ಪುರಲೆ ಕೆರೆಗೆ ಹಾರಿದ್ದ. ಗುರುವಾರ ಸಂಜೆ ಘಟನೆ ಸಂಭವಿಸಿತ್ತು. ರಾತ್ರಿ ಜೋರು ಮಳೆಯಲ್ಲೂ ಯುವಕನ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. … Read more

ಪುರಲೆ ಕೆರೆಯಲ್ಲಿ ಯುವಕನಿಗೆ ಶೋಧ, ಕಾರ್ಯಾಚರಣೆಗೆ ಮಳೆ ಅಡ್ಡಿ

220721 Purale Lake Youth Missing 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ಯುವಕನೊಬ್ಬ ಪುರಲೆ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಪುರಲೆ ನಿವಾಸಿ ಹರೀಶ್ ಎಂಬಾತ ನಾಪತ್ತೆಯಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಆದರೆ ಜೋರು ಮಳೆ ಶೋಧ ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ … Read more

ರಾಗಿಗುಡ್ಡದಲ್ಲಿ ನಡುರಾತ್ರಿ ಕಬ್ಬಿಣದ ರಾಡ್ ಹಿಡಿದು ಓಡಾಡುತ್ತಿದ್ದ ಇಬ್ಬರ ವಿರುದ್ಧ ಕೇಸ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ನಡುರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರ ವಿಚಾರಣೆ ನಡೆಸಿದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಯುವಕನೊಬ್ಬನ ಕೈಯಲ್ಲಿ ಕಬ್ಬಿಣದ ರಾಡ್ ಇರುವುದು ಅನುಮಾನಕ್ಕೆ ಕಾರಣವಾಗಿತ್ತು. ಶಿವಮೊಗ್ಗದ ರಾಗಿಗುಡ್ಡದ ಚರ್ಚ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಒಬ್ಬ ಯುವಕನ ಕೈಯಲ್ಲಿ ಕಬ್ಬಿಣದ ರಾಡ್ ಇತ್ತು. ಅಲ್ಲದೆ … Read more

ಹೊಸಗುಂದದಲ್ಲಿ ದೇವಸ್ಥಾನದ ಗರ್ಭಗುಡಿ ಮುಂದಿದ್ದ ಹಿತ್ತಾಳೆ ಘಂಟೆಗಳು ಕದ್ದೊಯ್ದ ಕಳ್ಳರು

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 27 MARCH 2021 ದೇವಸ್ಥಾನವೊಂದರ ಗರ್ಭಗುಡಿಯ ಮುಂದೆ ಇದ್ದ ಹಿತ್ತಾಳೆ ಘಂಟೆಗಳ ಕಳ್ಳತನವಾಗಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಶಂಕೆ ಇದ್ದು, ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ಹೊಸಗುಂದ ಗ್ರಾಮದ ಕಂಚಿಕಾಳಮ್ಮ ದೇವಸ್ಥಾನದಲ್ಲಿ ಘಂಟೆಗಳು ಕಳುವಾಗಿದೆ. ಇವುಗಳ ಮೌಲ್ಯ ಸುಮಾರು 12 ಸಾವಿರ ಎಂದು ಅಂದಾಜಿಸಲಾಗಿದೆ. ಮಾರ್ಚ್‌ 24ರಂದು ಸಂಜೆ ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು … Read more

ವಾಸ್ತವ್ಯಕ್ಕೆ ಬಂದ ಶಿವಮೊಗ್ಗ ಡಿಸಿಗೆ ಪೂರ್ಣ ಕುಂಭ ಸ್ವಾಗತ

200321 Aladahalli DC Vastavya in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021 ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ, ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇವತ್ತು, ಹೊಳಲೂರು ಹೋಬಳಿಯ ಆಲದಹಳ್ಳಿಯಲ್ಲಿ ವಾಸ್ತವ ಮಾಡಲಿದ್ದಾರೆ. ಆಲದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು. ಆರೋಗ್ಯ ಕೇಂದ್ರ, ಅಂಗನವಾಡಿಗೆ ಭೇಟಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇಲ್ಲಿನ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿಗೆ ಭೇಟಿ ನೀಡಿದರು. ವ್ಯವಸ್ಥೆಯ ಕುರಿತು ಪರಿಶೀಲನೆ … Read more

‘ಅಡಕೆ ಬೆಳೆಗಾರರೆ ಭಯ ಬೇಡ’, ಅಭಯ ನೀಡಿದ ಸಿಎಂ, ಏನೆಲ್ಲ ಹೇಳಿದರು?

170221 CM Yedyurappa at Shimoga Rural 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 FEBRUARY 2021 ಅಡಕೆ ಬೆಳೆಗಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ನೀಡಿದ್ದಾರೆ. ಬೆಳೆಗಾರರಿಗೆ ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಯಡಿಯೂರಪ್ಪ, ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಉತ್ತಮ ಬೆಲೆ ಬರುವಂತೆ ಮಾಡುತ್ತೇವೆ ಎಂದರು. ಅಡಕೆ ಬೆಳೆಗಾರರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಬದ್ಧವಾಗಿದೆ. ಅಡಕೆಗೆ ಉತ್ತಮ … Read more

BHADRAVATHI | ದೊಡ್ಡೇರಿ ಬಳಿ ಭೀಕರ ಅಪಘಾತ, ಹೊಸಮನೆಯ ಯುವಕ ಸೇರಿ ಇಬ್ಬರ ಸಾವು

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 03 FEBRUARY 2021 ಟ್ರಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿಯ ಹೊಸಮನೆ ನಿವಾಸಿ ರಘು (32) ಮತ್ತು ತರೀಕೆರೆಯ ಇಟಿಗಿ ಗ್ರಾಮದ ಶಿವು (30) ಮೃತರು. ಭದ್ರಾವತಿಯಿಂದ ಶಿವನಿ ಗ್ರಾಮಕ್ಕೆ ತೆರಳುತ್ತಿದ್ದ ಟ್ರಾಕ್ಟರ್ ಮತ್ತು ದೊಡ್ಡೇರಿ ಗ್ರಾಮದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ ರಘು ಮತ್ತು ಶಿವು ಮೃತಪಟ್ಟಿದ್ದಾರೆ. … Read more

ಕಣದಲ್ಲಿ ಒಣಗಲು ಹಾಕಿದ್ದ ಅಡಕೆ ರಾತ್ರೋರಾತ್ರಿ ಕಳ್ಳತನ, ಎಷ್ಟು ಅಡಕೆ ಕಳ್ಳತನವಾಗಿದೆ?

police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021 ಕಣದಲ್ಲಿ ಒಣಗಿಸಲು ಹಾಕಿದ್ದ 150 ಕೆ.ಜಿ ಅಡಕೆಯನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಖದೀಮರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲಿನ ಬೇಡರ ಹೊಸಹಳ್ಳಿಯ ಸುಭಾಷ್ ಎಂಬುವವರ ತೋಟದಲ್ಲಿ ಕಳ್ಳತನವಾಗಿದೆ. ಅಡಕೆಯನ್ನು ಬೇಯಿಸಿ, ಕಣದಲ್ಲಿ ಒಣಗಿಸಲು ಹಾಕಲಾಗಿತ್ತು. ಜನವರಿ 5ರ ರಾತ್ರಿ ತೋಟದಲ್ಲಿ ಕಳ್ಳರು, 55 ಸಾವಿರ … Read more