ಆನಂದಪುರ ಬಳಿ ನೇಣು ಬಿಗಿದುಕೊಂಡಿದ್ದ KSRTC ಚಾಲಕ ಶಿವಮೊಗ್ಗದಲ್ಲಿ ಸಾವು, ಕಾರಣವೇನು?
ಸಾಗರ: ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ KSRTC ಚಾಲಕ (KSRTC driver) ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಕೆಲಸದ ಸ್ಥಳದಲ್ಲಿನ ಕಿರುಕುಳವೆ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಲಾಗಿದೆ. ಸಾಗರ ತಾಲೂಕು ತ್ಯಾಗರ್ತಿಯ ನೀಚಡಿ ಬಳಿಯ ಮಳ್ಳ ಗ್ರಾಮದ ನಾಗಪ್ಪ (58) ಮೃತರು. ಕಳೆದ ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದ ನಾಗಪ್ಪ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಾಲ್ಕು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣವೇನು? ಕಳೆದ ಒಂದೂವರೆ ತಿಂಗಳಿನಿಂದ ತಮಗೆ ಡ್ಯೂಟಿ ನೀಡದೆ ಕಿರುಕುಳ ನೀಡಲಾಗುತ್ತಿತ್ತು … Read more