ಆನಂದಪುರ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ, ಮೋರಿ ಕಟ್ಟೆಗೆ ಗುದ್ದಿದ ಕಾರು

ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019 ನರಸೀಪುರದಲ್ಲಿ ಔಷಧಿ ಪಡೆಯಲು ಬರುತ್ತಿದ್ದವರ ಕಾರು ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಬೈರಾಪುರದಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು, ಬೈರಾಪುರ ಬಳಿಯ ರಸ್ತೆ ಪಕ್ಕದಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಬಾಲ ಸಾಹೇಬ್ ಕೃಷ್ಣ ದೇಸಾಯಿ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜು … Read more

‘ಕೊನೆಗೂ ಸಿಗಂದೂರು ಸೇತುವೆ ನಿರ್ಮಾಣಕ್ಕಿದ್ದ ಅಡೆತಡೆಗಳು ದೂರ, 30 ತಿಂಗಳಲ್ಲಿ ರೆಡಿಯಾಗಲಿದೆ ಅತ್ಯಾಧುನಿಕ ಬ್ರಿಡ್ಜ್’

Siganduru Bridge Plan 1

ಶಿವಮೊಗ್ಗ ಲೈವ್.ಕಾಂ | 8 ಮಾರ್ಚ್ 2019 ಇನ್ನು 30 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು, ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಗಂದೂರು ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕಾಮಗಾರಿಯೂ ಶುರುವಾಗಲಿದೆ ಎಂದು ಸ್ಪಷ್ಟಪಡಿಸಿದರು. ಶರಾವತಿ ಹಿನ್ನೀರು ಭಾಗದ ಅಂಬರಗೋಡ್ಲು ಕಳಸವಳ್ಳಿ ನಡುವೆ ಸೇತುವೆ ನಿರ್ಮಾಣಕ್ಕೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಆನ್’ಲೈನ್’ನಲ್ಲಿ ಅಧಿಕೃತವಾಗಿ ಟೆಂಡರ್ ಕರೆಯಲಾಗಿದ್ದು, ಮಾರ್ಚ್ 22ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಸ ಕಲ್ಪಿಸಲಾಗಿದೆ ಎಂದರು. ಹತ್ತು ವರ್ಷ … Read more

ಮಂಗನಕಾಯಿಲೆ ಆತಂಕದಲ್ಲಿರುವ ಸಾಗರದ ಗ್ರಾಮಕ್ಕೆ ಮಿನಿಸ್ಟರ್ ಭೇಟಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಏನಂದ್ರು?

070119 Minister Visit Aralagodu village 1

ಶಿವಮೊಗ್ಗ ಲೈವ್.ಕಾಂ | 07 ಜನವರಿ 2019 ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಇದೇ ವೇಳೆ,  ಆರೋಗ್ಯ ಇಲಾಖೆಯ ನಿರ್ಲಕ್ಷದ ಕುರಿತು ತನಿಖೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಟ್ಟರು ಮಿನಿಸ್ಟರ್? ಸಚಿವ ಶಿವಾನಂದ ಪಾಟೀಲ್ ಅವರು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಂಗನಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಳಿಕ, ಭಾರಂಗಿ ಹೋಬಳಿಯ ಅರಳಗೋಡು ಗ್ರಾಮಕ್ಕೆ ಭೇಟಿ … Read more

ಸಾಗರದಲ್ಲಿ ಮುಂದುವರೆದ ಮಂಗನ ಕಾಯಿಲೆ ಆತಂಕ, ಮತ್ತೊಬ್ಬ ಶಂಕಿತ ಬಲಿ, ಮಂಗಗಳ ಮೃತದೇಹ ಪತ್ತೆ

030119 Mangana Kayale Monkey Death 1

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ಸಾಗರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮಂಗಗಳ ಅಸಹಜ ಸಾವು ಮುಂದುವರೆದಿದ್ದು, ಮಂಗನ ಕಾಯಿಲೆ ಆತಂಕ ಇಮ್ಮಡಿಯಾಗಿದೆ. ಇನ್ನು, ಮಂಗನ ಕಾಯಿಲೆ ಶಂಕಿತರೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಂಚಿಕೈ ಮಂಜುನಾಥ (22) ಮೃತಪಟ್ಟಿದ್ದಾರೆ. ಮಂಜುನಾಥ ಅವರಿಗೆ ತೀವ್ರ ಜ್ವರ ಮತ್ತು ಜಾಂಡೀಸ್ ಇತ್ತು. ಮಂಗನ ಕಾಯಿಲೆ ಶಂಕೆಯಿಂದಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪುಣೆಯಲ್ಲಿರುವ ಲ್ಯಾಬ್’ಗೆ ಕಳುಹಿಸಲಾಗಿದೆ. ಮುಂದುವರೆದ ಮಂಗಗಳ ಸಾವು ಭಾರಂಗಿ ಹೋಬಳಿಯ ಅರಳಗೋಡು … Read more

ಮಂಗನ ಕಾಯಿಲೆ ಭಯ, ಮುಪ್ಪಾನೆಯಲ್ಲಿ ಚಾರಣ ನಿರ್ಬಂಧ, ಸಿಗಂದೂರು ಭಕ್ತರಿಗೂ ಸದ್ಯದಲ್ಲೇ ಮಾರ್ಗಸೂಚಿ

010119 Muppane Treckking Ban Monkey Fever 1

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ದಿನೇ ದಿನೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಶರಾವತಿ ಕಣಿವೆ ಅಭಯಾಯರಣ್ಯದ ಮುಪ್ಪಾನೆ ಪ್ರಕೃತಿ ಶಿಬಿರ ಅರಣ್ಯ ವ್ಯಾಪ್ತಿಯಲ್ಲಿ, ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾ ವನ್ಯಜೀವಿ ವಿಭಾಗದ ವತಿಯಿಂದ ಈ ಆದೇಶ ಹೊರಡಿಸಲಾಗಿದೆ. ಮುಪ್ಪಾನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಜ.1ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಸದ್ಯದಲ್ಲೇ ಸಿಗಂದೂರು ಭಕ್ತರಿಗೂ ಮಾರ್ಗಸೂಚಿ … Read more

ಸಾಗರ ತಾಲೂಕಿನಲ್ಲಿ ಗಾಂಜಾ, ಡ್ರಗ್ಸ್ ಹಾವಳಿ, ಕಟ್ಟುನಿಟ್ಟಿನ ಕ್ರಮಕ್ಕೆ ಮಹತ್ವದ ಮೀಟಿಂಗ್ ಫಿಕ್ಸ್

Haratalu-Halappa

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ಯುವಕರಲ್ಲಿ ಗಾಂಜಾ ಮತ್ತು ಡ್ರಗ್ಸ್ ಸೇವನೆ ವ್ಯಾಪಕವಾಗುತ್ತಿದೆ. ವ್ಯಸನದ ಕುರಿತು ಮೃದು ಧೋರಣೆಯಿಂದ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಕಠಿಣ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಜ.10ರಂದು ಜಿಲ್ಲಾ ರಕ್ಷಣಾಧಿಕಾರಿ, ಎಸಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಗಾಂಜಾ ಸೇವನೆ ಹೆಚ್ಚುತ್ತಿರುವ ಹಿನ್ನಲೆ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಹರತಾಳು ಹಾಲಪ್ಪ, ಶಿಘ್ರದಲ್ಲೇ ನಗರ ಮತ್ತು ಗ್ರಾಮೀಣ ಭಾಗದ ಕಾಲೇಜುಗಳ … Read more

BREAKING NEWS | ಜೋಗದಿಂದ ಮರಳುವಾಗ ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

181218 Car Accident At Sagara 1

ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018 ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸಾಗರದ ಆಕಾಶ್ (21), ಅಣಲೆಕೊಪ್ಪದ ಲೋಹಿತ್ (21) ಮೃತಪಟ್ಟವರು. ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಬಳಿ ಘಟನೆ ನಡೆದಿದೆ. ಜೋಗದಿಂದ ಆಲ್ಟೋ ಕಾರಿನಲ್ಲಿ ಸಾಗರಕ್ಕೆ ಮರಳುವಾಗ, ಚಾಲಕನ ನಿಯಂತ್ರಣ ತಪ್ಪಿ, ಕಾರು ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಇನ್ನು, ಗಂಭೀರವಾಗಿ ಗಾಯಗೊಂಡಿದ್ದ ಆಕಾಶ್ … Read more

ಸಾಲ, ಬಡ್ಡಿ, ಬ್ಲಾಂಕ್ ಚೆಕ್ಕುಗಳಿಗೆ ಹೆದರಿ ವಿಷ ಕುಡಿದ ಹೊಸನಗರದ ಯುವಕ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಸಾಲ ಕೊಟ್ಟವರು ಮನೆಗೆ ಬಾಗಿಲಿಗೆ ಬಂದು ಬೆದರಿಸಿ, ಕೋರ್ಟ್’ನಲ್ಲಿ ಪ್ರಕರಣ ದಾಖಲಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಕುಡಿದಿದ್ದ ಯುವಕನನ್ನು ಆತನ ಸ್ನೇಹಿತರೇ ಆಸ್ಪತ್ರೆಗೆ  ದಾಖಲಿಸಿದ್ದಾರೆ. ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಹೊಸನಗರ ತಾಲೂಕಿನ ಕಲ್ಲುಕೊಪ್ಪ ಗ್ರಾಮದ ನಾಗರಾಜ್ (20) ಆತ್ಮಹತ್ಯೆಗೆ ಯತ್ನಿಸಿದಾತ. ವಿಷಯ ಕುಡಿಯುವ ಮೊದಲು ನಾಗರಾಜ್ ಡೆತ್ ನೋಟ್ ಬರೆದಿದ್ದಾನೆ. ಏನಿದು ಘಟನೆ? ಗಲಾಟೆ ಮಾಡಿದ್ಯಾರು? ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್, ಸಾಗರದ … Read more

ಸಾಗರದಲ್ಲಿ ಎರಡು ದಿನ ಬೆಳಗಿಂದ ಸಂಜೆವರೆಗೂ ಕರೆಂಟ್ ಇರಲ್ಲ, ಎಲ್ಲೆಲ್ಲಿ ಪವರ್ ಕಟ್ ಆಗುತ್ತೆ?

power cut graphics

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ಸಾಗರ ನಗರ ವ್ಯಾಪ್ತಿಯಲ್ಲಿ ಡಿ.5 ಮತ್ತು 7ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಕರೆಂಟ್ ಇರೋದಿಲ್ಲ. ಘಟಕ – 1 ಮತ್ತು ಘಟಕ – 2 ರಲ್ಲಿ ಎಚ್.ಟಿ.ಎ.ಬಿ ಕೇಬಲ್ ಅಳವಡಿಸುವ ಕಾಮಗಾರಿ ಇರುವುದರಿಂದ ಈ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಎಲ್.ಬಿ.ಕಾಲೇಜು, ಪ್ರಗತಿನಗರ, ಲೋಹಿಯಾ ನಗರ, ಮಂಕಳಲೆ, ಅಂಬಾಪುರ, ಕುಗ್ವೆ, ವಿನೋಬನಗರ, ನೆಹರು ನಗರ, ಹಾನಂಬಿ ರಸ್ತೆ, ಎಸ್.ಎನ್.ನಗರ, ಚಿಪ್ಪಳಿ, ವರದಾ ಕಾಲನಿ, ಆದಿಶಕ್ತಿನಗರ, ವಿಜಯನಗರ, … Read more