ಶಿವಮೊಗ್ಗದಲ್ಲಿ ಪೆಂಡಾಲ್ ಹಾಕಿ ಶ್ವಾನದ ಅದ್ಧೂರಿ ಹುಟ್ಟುಹಬ್ಬ, 150 ಜನಕ್ಕೆ ಬಿರಿಯಾನಿ ಊಟ, ದುಬಾರಿ ಗಿಫ್ಟ್
ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶ್ವಾನ ಪ್ರಿಯರೊಬ್ಬರು ಶಿವಮೊಗ್ಗದಲ್ಲಿ ತಾವು ಸಾಕಿರುವ ಶ್ವಾನದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಪೆಂಡಾಲ್ ಹಾಕಿಸಿ, ಕೇಕ್ ಕಟ್ ಮಾಡಿಸಿ, ಸ್ನೇಹಿತರಿಗೆಲ್ಲ ಬಿರಿಯಾನಿ ಊಟ ಹಾಕಿಸಿದ್ದಾರೆ. ಅಷ್ಟೆ ಅಲ್ಲ, ತಮ್ಮ ಅಚ್ಚುಮೆಚ್ಚಿನ ಶ್ವಾನಕ್ಕೆ ಅತ್ಯಂತ ದುಬಾರಿ ಗಿಫ್ಟ್ ನೀಡಿದ್ದಾರೆ. ರಾಗಿಗುಡ್ಡದ ಮೊಹಮ್ಮದ್ ಅಯಾಜ್ ಅವರು ಸೈಬೀರಿಯನ್ ಹಸ್ಕಿ ತಳಿಯ ಶ್ವಾನವೊಂದನ್ನು ಸಾಕಿದ್ದಾರೆ. ಅದಕ್ಕೆ ಟೈಸನ್ ಎಂದು ಹೆಸಿರಿಟ್ಟಿದ್ದಾರೆ. ಜನವರಿ 13ರಂದು ಟೈಸನ್’ಗೆ ಮೊದಲ ವರ್ಷದ ಹುಟ್ಟುಹಬ್ಬ. … Read more