ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ, ನಾಲ್ಕು ಡ್ರಂಕ್ ಅಂಡ್ ಡ್ರೈವ್ ಕೇಸ್ ಪತ್ತೆ
ಶಿವಮೊಗ್ಗ: ನಗರದ ವಿವಿಧೆಡೆ ಸಂಚಾರ ಪೊಲೀಸರು ಶಾಲಾ ವಾಹನಗಳನ್ನು (School Vans) ತಡೆದು ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಸೋಮವಾರ ಬೆಳಗ್ಗೆ ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ಏಕಕಾಲಕ್ಕೆ ತಪಾಸಣೆ ನಡೆಸಿದರು. ಶಾಲೆ, ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳನ್ನು ತಡೆದು ಪರಿಶೀಲಿಸಿದರು. ನಿಗದಿಗಿಂತಲು ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 17 ಪ್ರಕರಣಗಳು ದಾಖಲು ಮಾಡಲಾಗಿದೆ. ವಾಹನದ ಫಿಟ್ನೆಸ್ ಅವಧಿ ಮುಕ್ತಾಯಗೊಂಡಿದ್ದ 3 ಪ್ರಕರಣಗಳು ಪತ್ತೆಯಾಗಿವೆ. … Read more