ಶಿವಮೊಗ್ಗದಲ್ಲಿ ಗಾಂಧಿ ಪ್ರತಿಮೆ ಮುಂದೆ ಏಕಾಂಗಿ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅಗತ್ಯ ವಸ್ತುಗಳು ದುಬಾರಿ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಗರದ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು. ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. … Read more