ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

BY-Raghavendra-Press-meet-in-Shimoga

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು (car) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ 12‌ ಸುದ್ದಿಗಳು