ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?
ಶಿಕಾರಿಪುರ: ಪಟ್ಟಣದ ಭದ್ರಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶಿಕಾರಿಪುರ ಪಟ್ಟಣ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು (carpenter) ಬಂಧಿಸಿ, ಆತನಿಂದ 7 ಸಿಂಗಲ್ ಬ್ಯಾರಲ್ ನಾಡಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾಪುರ ಗ್ರಾಮದ 3ನೇ ಕ್ರಾಸ್ ನಿವಾಸಿ ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ವೃತ್ತಿಯಲ್ಲಿ ಕಾರ್ಪೆಂಟರ್ ಆಗಿರುವ ಲಕ್ಷ್ಮಣಪ್ಪ, ತನ್ನ ಮನೆಯ ಪಕ್ಕದ ಹಳೆಯ ಮನೆಯಲ್ಲಿ ಅಕ್ರಮವಾಗಿ ನಾಡಬಂದೂಕುಗಳನ್ನು ತಯಾರಿಸಿ ಮಾರಾಟಕ್ಕೆ ಇಟ್ಟಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ … Read more