BREAKING NEWS – ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ (Convict) ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ. ಮೃತ ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದ. ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನಲೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಜೈಲು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more