ಶಿವಮೊಗ್ಗದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಪೋಟ, ಎಲ್ಲಿ? ಏನೇನು ಹಾನಿಯಾಗಿದೆ?

LPG-cylinder-incident-at-Siddeshwara-nagara-in-Shimoga

ಶಿವಮೊಗ್ಗ: ಅಡುಗೆ ಅನಿಲ ಸಿಲಿಂಡರ್‌ (cylinder) ಸ್ಪೋಟಗೊಂಡು ಮನೆ ಸಂಪೂರ್ಣ ಹಾನಿಯಾಗಿದೆ. ಸಿದ್ದೇಶ್ವರ ನಗರದ 4ನೇ ಅಡ್ಡರಸ್ತೆಯ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೇಗಾಯ್ತು ಘಟನೆ? ಧರ್ಮಪ್ಪ ಎಂಬುವವರು ಬಾಡಿಗೆಗೆ ಇದ್ದ ಮನೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಸಿಲಿಂಡರ್‌ ಸ್ಪೋಟಗೊಂಡಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಹಾನಿಯಾಗಿವೆ. ಶೀಟ್‌ ಛಾವಣಿ ಹಾರಿ ಹೋಗಿದೆ. ಇನ್ನು, ಧರ್ಮಪ್ಪ ಅವರ ಕುಟುಂಬದವರು ಮನೆಯಲ್ಲಿ ಇರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಪೋಟದ ರಭಸಕ್ಕೆ ಪಕ್ಕದ … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಬಸ್‌, ಬೈಕ್‌ ಡಿಕ್ಕಿ, ಸಿರಿಗೆರೆಯ ಇಬ್ಬರಿಗೆ ಗಾಯ

bike-collision-with-bus-in-sagara-road-in-shimoga.

ಶಿವಮೊಗ್ಗ: ಪಿಇಎಸ್‌ ಕಾಲೇಜು ಸಮೀಪ ಸಾಗರ ರಸ್ತೆಯಲ್ಲಿ ಬಸ್ ಹಾಗೂ ಬೈಕ್ (bike collision) ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ಸಾಗರದ ಕಡೆಗೆ ಹೋಗುತ್ತಿದ್ದ ಬಸ್ ಮತ್ತು ಬೈಕ್ ನಡುವೆ ಈ ಡಿಕ್ಕಿ ಸಂಭವಿಸಿದೆ. ಗಾಯಗೊಂಡವರು ಶಿವಮೊಗ್ಗ ಸಮೀಪದ ಸಿರಿಗೆರೆ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ರಭಸಕ್ಕೆ ಹೊಸ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್‌, ಎಲ್ಲೆಲ್ಲಿ ಹೇಗಿತ್ತು ಆಚರಣೆ?

Christmas-in-Shimoga-Sacred-Heart-Church

ಶಿವಮೊಗ್ಗ: ನಗರದಲ್ಲಿ ಕ್ರಿಸ್‌ಮಸ್‌ ಹಬ್ಬವನ್ನು (Christmas) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಳೆದ ರಾತ್ರಿಯಿಂದಲೆ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲಾಗುತ್ತಿದೆ. ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕ ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾಗಿ ನೇಮಕ ನಗರದ ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ರಾತ್ರಿ ಪ್ರಾರ್ಥನೆ ನೆರವೇರಿಸಲಾಯಿತು. ದಿವ್ಯ ಬಲಿ ಪೂಜೆ, ಗೋದಲಿ ಮುಂದೆ ಪ್ರಾರ್ಥನೆ ಸಲ್ಲಿಸಲಾಯಿತು. ಬಿಷಪ್‌, ವಿವಿಧ ಚರ್ಚ್‌ಗಳ ಧರ್ಮಗುರುಗಳು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ದೊಡ್ಡ ಸಂಖ್ಯೆಯ ಕ್ರೈಸ್ತರು ಏಸು ಕ್ರಿಸ್ತನನ್ನು ಪ್ರಾರ್ಥಿಸಿದರು. ಚರ್ಚ್‌ ಆವರಣಕ್ಕೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಶಿವಪ್ಪನಾಯಕ ಪ್ರತಿಮೆ ಸಮೀಪದ … Read more

‘ಸರ್ಕಾರಿ ನೌಕರರ ಸಂಘ ಇದೇ ಮೊದಲು ಬೃಹತ್‌ ಯೋಜನೆಗೆ ಕೈ ಹಾಕಿದೆ, ದೇಶದಲ್ಲೇ ವಿನೂತನ ಪ್ರಯತ್ನʼ

Government-Employees-Association-2026-Calender-release.

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಸರ್ಕಾರಿ ನೌಕರನ ಕಚೇರಿ ಟೇಬಲ್‌ಗೆ ಸಂಘದ ಅಧಿಕೃತ ಕ್ಯಾಲೆಂಡರ್ (calendars) ತಲುಪಿಸುವ ಬೃಹತ್ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಇಡೀ ದೇಶದಲ್ಲಿ ವಿನೂತನ ಯೋಜನೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘವು ಮೊದಲ ಬಾರಿಗೆ ಜಾರಿಗೆ ತಂದಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬಿಡುಗಡೆ … Read more

ಈಶ್ವರಪ್ಪ ನೇತೃತ್ವದ ಕಾರ್ಯಕ್ರಮ, ಶಿವಮೊಗ್ಗ ವಕೀಲರಿಂದ ಮುಖ್ಯ ನ್ಯಾಯಮೂರ್ತಿಗಳಿಗೆ ದೂರು, ಯಾಕೆ?

KP-Sripal-remark-against-Srigandha-Programme.

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. ಅವರ ಜೊತೆಗೆ ಹೈಕೋರ್ಟ್‌ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ವೇದಿಕೆ ಹಂಚಿಕೊಳ್ಳುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಲಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ದೂರು ನೀಡಲಾಗಿದೆ ಎಂದು ವಕೀಲ (Advocates) ಕೆ.ಪಿ.ಶ್ರೀಪಾಲ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್‌, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ಒಂದು ಪ್ರಕರಣವಿದೆ. ಇದು ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳಿವೆ. ಹೈಕೋರ್ಟ್‌ ಹಾಗೂ ಶಿವಮೊಗ್ಗ ನ್ಯಾಯಾಲಯದಲ್ಲಿ ಪ್ರಕರಣಗಳು … Read more

ಬಸ್‌ ಪಾಸ್‌ ನವೀಕರಣಕ್ಕೆ ಅರ್ಜಿ ಸಲ್ಲಿಕೆಗೆ ಸೂಚನೆ, ಹೇಗೆ ಸಲ್ಲಿಸಬೇಕು? ಏನೆಲ್ಲ ದಾಖಲೆ ಬೇಕು?

ksrtc-news-update-thumbnail.webp

ಶಿವಮೊಗ್ಗ: ಅಂಗವಿಕಲರಿಗೆ 2026ನೇ ಸಾಲಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳ (bus passes) ವಿತರಣೆ ಹಾಗೂ ನವೀಕರಣಕ್ಕೆ ಸೇವಾ ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಡಿ.30ರಿಂದ ಫೆ.28ರವರೆಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಹೊಸದಾಗಿ ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡಿಕೊಳ್ಳಬೇಕು. 2025ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಬೇಕು. ಇದನ್ನೂ ಓದಿ » ಹೋಂ ಸ್ಟೇ ಮಾಲೀಕ, ರೂಂ … Read more

ಸಿರಿಧಾನ್ಯ, ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ, ಯಾವಾಗ? ಯಾರೆಲ್ಲ ಸ್ಪರ್ಧಿಸಬಹುದು?

Shimoga-News-update

ಶಿವಮೊಗ್ಗ: ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2026ರ ಅಂಗವಾಗಿ ಕೃಷಿ ಇಲಾಖೆಯಿಂದ ಜನವರಿ 6ರಂದು ಬೆಳಗ್ಗೆ 11ಕ್ಕೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ (Millet) ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಅದಕ್ಕೆ ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯ ಜತೆಗೆ ಅರ್ಜಿಯನ್ನು ಡಿ.31ರ ಒಳಗೆ ಇ-ಮೇಲ್ ವಿಳಾಸ dagrshi@gmail.com … Read more

ಜೇನುಕಲ್ಲಮ್ಮ ದೇಗುಲಕ್ಕೆ ನೂತನ ಅಧ್ಯಕ್ಷರ ಆಯ್ಕೆ, ಹೊಸ ಯೋಜನೆಗಳ ಕುರಿತು ಚರ್ಚೆ

Kalgodu-Rathnakar-new-president-of-Jenukallama-temple

ಹೊಸನಗರ: ಪುರಾಣ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ (president) ಕಲಗೋಡು ರತ್ನಾಕರ್‌ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನೆಗೆ ಮುಜರಾಯಿ ಇಲಾಖೆಯಿಂದ 9 ಸದಸ್ಯರ ಸಮಿತಿ ರಚಿಸಲಾಗಿದೆ. ಅಧ್ಯಕ್ಷ ಕಲಗೋಡು ರತ್ನಾಕರ್‌ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿಯು, ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಭೇಟಿಯಾಗಿ ಗೌರವಸಿತು.

ಹೋಂ ಸ್ಟೇ ಮಾಲೀಕ, ರೂಂ ಬಾಯ್‌ ಸೇರಿ ಮೂವರಿಗೆ 20 ವರ್ಷ ಜೈಲು, ದಂಡ, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ: ಬಾಲಕಿಯನ್ನು ಅನಧಿಕೃತ ಹೋಂ ಸ್ಟೇಗೆ (homestay) ಕರೆದೊಯ್ದು ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪೋಕ್ಸೊ ಕಾಯ್ದೆಯಡಿ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. 2023ರ ಸೆಪ್ಟೆಂಬರ್ 11ರಂದು 26 ವರ್ಷದ ವ್ಯಕ್ತಿಯೊಬ್ಬ 16 ವರ್ಷದ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಹೋಂಸ್ಟೇಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರು ಆಧರಿಸಿ ಸಾಗರದ ಟೌನ್ ಪೊಲೀಸ್ … Read more

ATMನಲ್ಲಿ ಹಣ ಬಿಡಿಸಲು ಹೋದಾಗ ಎಚ್ಚರ, ಭದ್ರಾವತಿಯ ರೈತನಿಗೆ ವಂಚನೆ, ಆಗಿದ್ದೇನು?

Bhadravathi-News-Update

ಭದ್ರಾವತಿ: ATMನಲ್ಲಿ ಹಣ ಬಿಡಿಸಲು ಹೋದಾಗ ರೈತರೊಬ್ಬರು ವಂಚನೆಗೆ ಒಳಗಾಗಿ ₹79,000 ಕಳೆದುಕೊಂಡಿದ್ದಾರೆ. ವಂಚನೆ ಆಗಿದ್ದು ಹೇಗೆ? ಬೊಮ್ಮನಕಟ್ಟೆಯ ನಾರಾಯಣ ಅವರು 11 ತಿಂಗಳ ಹಿಂದೆ ರಂಗಪ್ಪ ವೃತ್ತ ಸಮೀಪದ ಬ್ಯಾಂಕ್ ಆಫ್ ಬರೋಡದ ಎಟಿಎಂನಲ್ಲಿ ಹಣ ಬಿಡಿಸಲು ಹೋಗಿದ್ದರು. ಆಗ ಹಿಂದೆ ನಿಂತಿದ್ದ ಇಬ್ಬರು ಅಪರಿಚಿತರಲ್ಲಿ ಒಬ್ಬ, ಹಣ ಬಿಡಿಸಿಕೊಡುವುದಾಗಿ ಎಟಿಎಂ ಕಾರ್ಡ್ ಪಡೆದಿದ್ದ. 3 ಬಾರಿ ಪ್ರಯತ್ನಿಸಿದರೂ ಹಣ ಬಂದಿರಲಿಲ್ಲ. ಹೀಗಾಗಿ ಅವರು ಕಾರ್ಡ್‌ ಹಿಂದಕ್ಕೆ ಪಡೆದು ಮನೆಗೆ ಹೋಗಿದ್ದರು. ನಂತರ ಅವರ ಖಾತೆಯಿಂದ … Read more