ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

Arabilachi-Bhadra-Canal-incident.

ಹೊಳೆಹೊನ್ನೂರು: ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದ ಭದ್ರಾ ನಾಲೆ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಎರಡನೇ ಮೃತದೇಹ (Second body) ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ನೀಲಾಬಾಯಿ (55) ಎಂದು ಗುರುತಿಸಲಾಗಿದೆ. ಇಂದು ಎಸ್‌ಡಿಆರ್‌ಎಫ್ (SDRF) ತಂಡ ಕಾರ್ಯಾಚರಣೆ ನಡೆಸಿ ಅರಬಿಳಚಿ ಕ್ಯಾಂಪ್ ಸಮೀಪದ ನಾಲೆಯಲ್ಲಿ ನೀಲಾಬಾಯಿ ಅವರ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದಿದೆ. ಕಳೆದ ಭಾನುವಾರ ಮಧ್ಯಾಹ್ನ ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು. ಇದನ್ನೂ ಓದಿ – ಮದ್ಯದ ಅಮಲು, ರಸ್ತೆ ಬದಿ ಕಾರಿನಲ್ಲೇ … Read more

ಭರ್ಜರಿ ಪಾರ್ಟಿಗೆ ರೆಡಿಯಾದ ಶಿವಮೊಗ್ಗ, ಹೊಸ ವರ್ಷಾಚರಣೆಗೆ ಎಲ್ಲೆಲ್ಲಿ ಹೇಗಿದೆ ಸಿದ್ಧತೆ?

All-Set-for-new-year-party-in-shimoga-city.

ಶಿವಮೊಗ್ಗ: ನೂತನ ವರ್ಷದ ಸ್ವಾಗತಕ್ಕೆ (New Year 2026) ಶಿವಮೊಗ್ಗ ನಗರ ಸಜ್ಜಾಗುತ್ತಿದೆ. ವಿವಿಧೆಡೆ ಪಾರ್ಟಿಗಳನ್ನು ಆಯೋಜಿಸಲಾಗಿದ್ದು ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. 2026ರನ್ನು ಅದ್ಧೂರಿಯಾಗಿ ಸ್ವಾಗತಿಸಲು ಶಿವಮೊಗ್ಗದಲ್ಲಿ ಸಿದ್ಧತೆ ಜೋರಾಗಿದೆ. ನಗರದ ಎಲ್ಲ ಕ್ಲಬ್‌ಗಳು, ಪಾರ್ಟಿ ಹಾಲ್‌ಗಳು ಅಲಂಕೃತವಾಗಿ ರೆಡಿಯಾಗಿವೆ. ಸಂಜೆಯಾಗುತ್ತಲೆ ಪಾರ್ಟಿಗಳು ಆರಂಭವಾಗಲಿವೆ. ಎಲ್ಲೆಲ್ಲಿ ಹೇಗಿದೆ ಸಿದ್ಧತೆ? ಶಿವಮೊಗ್ಗದಲ್ಲಿ ಇಂದು ಸಂಜೆ 7 ಗಂಟೆಯಿಂದಲೇ ಪಾರ್ಟಿಗಳು ಆರಂಭವಾಗಲಿವೆ. ಕಿಮ್ಮನೆ ಗಾಲ್ಫ್‌ ರೆಸಾರ್ಟ್‌, ಮಂಡಿ ಮರ್ಚೆಂಟ್ಸ್‌ ಕ್ಲಬ್‌, ಕಂಟ್ರಿ ಕ್ಲಬ್‌, ರಾಯಲ್‌ ಆರ್ಕಿಡ್‌ ಹೊಟೇಲ್‌ ಸೇರಿದಂತೆ … Read more

BREAKING NEWS – ಶಿವಮೊಗ್ಗದಲ್ಲಿ 26 ವರ್ಷದ ಯುವಕನ ಕೊಲೆ

BREAKING NEWS GENERAL IMAGE 1

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ (murdered). ಅರುಣ್‌ (26) ಹತ್ಯೆಯಾದ ಯುವಕ. ವಿನೋಬನಗರ ಪೊಲೀಸ್‌ ಠಾಣೆಯ ತರಕಾರಿ ಮಾರುಕಟ್ಟೆ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ‘ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ. ಅವರನ್ನು ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ » ಹೊಸ ವರ್ಷಾಚರಣೆ, … Read more

ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ, ಹಲವರು ವಶಕ್ಕೆ, ಕಾರಣವೇನು?

Youth-Congress-workers-protest-in-front-of-railway-station.

ಶಿವಮೊಗ್ಗ: ಯುವ ಕಾಂಗ್ರೆಸ್‌ ಕಾರ್ಯಕರ್ತರು ಇವತ್ತು ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ (Railway Station) ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಮುತ್ತಿಗೆ ಹಾಕಲು ಯತ್ನಿಸಿದ್ದೇಕೆ? ಇಲ್ಲಿದೆ ಪಾಯಿಂಟ್ಸ್‌ ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರವನ್ನು ಪದೇ ಪದೆ ಹೆಚ್ಚಳ ಮಾಡುತ್ತಿದೆ. ಈಗ ಮತ್ತೊಮ್ಮೆ ಪ್ರಯಾಣ ದರ ಏರಿಕೆ ಮಾಡಿ ಸಾಮಾನ್ಯ ಜನರಿಗೆ ಹೊರೆಯಾಗುವಂತೆ ಮಾಡಲಾಗುತ್ತಿದೆ. ಒಂದೇ ವರ್ಷದಲ್ಲಿ ಎರಡನೇ ಬಾರಿ ದರ ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿದರು. ಕೋಟ್ಯಂತರ ಜನರು ರೈಲುಗಳಲ್ಲಿ … Read more

ಗುತ್ತಿಗೆದಾರನ ಆತ್ಮಹತ್ಯೆ ಕುರಿತು ಶಿವಮೊಗ್ಗದಲ್ಲಿ ಗೃಹ ಸಚಿವರ ಮೊದಲ ಪ್ರತಿಕ್ರಿಯೆ

Home-Minister-Araga-Janendra-About-Udupi-Suicide

SHIVAMOGGA LIVE NEWS | HOME MINISTER | 12 ಏಪ್ರಿಲ್ 2022 ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲಿನ ಆರೋಪ ಸಂಬಂಧವು ಹೇಳಿಕೆ ನೀಡಿದ್ದಾರೆ. ಗೃಹ ಸಚಿವರು ಹೇಳಿದ್ದೇನು? ‘ಉಡುಪಿ ಜಿಲ್ಲಾ ರಕ್ಷಣಾಧಿಕಾರಿ ಅವರ ಜೊತೆಗೆ ಈಗಷ್ಟೆ ಮಾತನಾಡಿದ್ದೇನೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸುತ್ತಿದ್ದಾರೆ. ಅವರು ಬಂದ ಬಳಿಕ ಕೊಠಡಿಯ ಬಾಗಿಲು … Read more

ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ

Shimoga-Youth-Congress-Protest-against-Eshwarappa

SHIVAMOGGA LIVE NEWS | Youth Congress | 12 ಏಪ್ರಿಲ್ 2022 ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಖಂಡಿಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಬಿ.ಹೆಚ್.ರಸ್ತೆಯಿಂದ ಮಲ್ಲೇಶ್ವರ … Read more

ಲಕ್ಷಾಂತರ ಮೌಲ್ಯದ ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ ಮೂವರ ಮೇಲೆ ಸಾಗರ ಪೊಲೀಸರ ದಾಳಿ

Sagara Police Station Building

SHIVAMOGGA LIVE NEWS | Ambergris  | 12 ಏಪ್ರಿಲ್ 2022 ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್’ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ … Read more

ಮನೆ ಬಾಗಿಲಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ಇಲ್ಲ

SHIVAMOGGA LIVE NEWS | Crime News | 11 ಏಪ್ರಿಲ್ 2022 ಮನೆ ಬಾಗಿಲ ಪಕ್ಕದಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಹೋಂಡಾ ಡಿಯೋ ಬೈಕ್ ಕಳ್ಳತನವಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯೂ ಮಂಡ್ಲಿಯ ಗಂಧರ್ವ ನಗರದ ಆನಂದ ಎಂಬುವವರಿಗೆ ಸೇರಿದ ಬೈಕ್ ಕಳವಾಗಿದೆ. ಭಾನುವಾರ ರಾತ್ರಿ 10 ಗಂಟೆಗೆ ಮನೆ ಬಳಿ ತಂದು ನಿಲ್ಲಿಸಿದ್ದ ಬೈಕ್ ಬೆಳಗೆದ್ದು ನೋಡಿದಾಗ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಬಳಿಕ ಪೊಲೀಸ್ ಠಾಣೆಗೆ ಬಂದು ದೂರು … Read more

ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಎಂಜಿನಿಯರ್ ಬೈಕ್’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Tunga-Nagara-Police-Station-Shimoga

SHIVAMOGGA LIVE NEWS | Crime News Today | 12 ಏಪ್ರಿಲ್ 2022 ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ. ಎಂಜಿನಿಯರ್ ಸುರೇಂದ್ರಬಾಬು ಎಂಬುವವರು ಓಡಿಸುತ್ತಿದ್ದ ಹೋಂಡಾ ಆಕ್ಟೀವಾ ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಶನಿವಾರ ಬೆಳಗಿನ ಜಾವ ರಾಮಿನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ‘ಕಸ್ಟಮರ್ ಕೇರ್’ಗೆ ಕರೆ ಮಾಡಿದ್ಮೇಲೆ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಬರೀ 2 ರೂ..! ಸುರೇಂದ್ರ … Read more

ಕಾಡಿನಲ್ಲಿ ಅಂದರ್ – ಬಾಹರ್ ಜೂಜಾಟ, ಪೊಲೀಸರಿಂದ ದಾಳಿ

police jeep

SHIVAMOGGA LIVE NEWS | Gambling| 12 ಏಪ್ರಿಲ್ 2022 ಕಾಡಿನಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮೂವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದು ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಶ್ರೀಧರ್ (27), ಸುರೇಶ್ (26), ಬಸವರಾಜ (31) ಬಂಧಿತರು. ಗಾಜನೂರಿನ ಕಾಡಿನಲ್ಲಿ ಇವರು ಜೂಜಾಟ ಆಡುತ್ತಿದ್ದರು. ಜೂಜಾಟದ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ … Read more