SHIMOGA | ‘ಯಡಿಯೂರಪ್ಪ ಅವರನ್ನು ನಂಬಿ ಬಂದವರ ಕೈ ಹಿಡಿದು, ಜೆಡಿಎಸ್, ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಂಡ ಜನ’

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ಭರ್ಜರಿ ಗೆಲುವಿನಿಂದಾಗಿ ಬಿಜೆಪಿಗೆ ಮುಖಂಡರು ಜಿಲ್ಲೆಯಾದ್ಯಂತ ಸಂಭ್ರಮಾಚಾರಣೆ ಮಾಡುತ್ತಿದ್ದಾರೆ. ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಮುಖಂಡರು ಜೆಡಿಎಸ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್ ಬಿಜೆಪಿಗೆ ಗೆಲುವಿನ ಕುರಿತು ಹೇಳಿದ್ದೇನು ಅನ್ನುವ ವಿಡಿಯೋ ಇಲ್ಲಿದೆ. ಕ್ಲಿಕ್ ಮಾಡಿ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – … Read more

SHIMOGA | ಶಿವಮೊಗ್ಗ ಬಿಜೆಪಿಯಲ್ಲಿ ಸಂಭ್ರಮವೋ ಸಂಭ್ರಮ, ಸಿಎಂ ಮನೆ ಮುಂದೆ ಪಟಾಕಿ, ಪಕ್ಷದ ಕಚೇರಿ ಬಳಿ ಸಿಹಿ

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಖುಷಿಪಟ್ಟರು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು. ಈ ಸಂದರ್ಭ ಮಹಿಳೆಯರು ನೃತ್ಯ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್, ಮೇಯರ್ … Read more

SORABA | ಪೊಲೀಸ್ ಠಾಣೆಗೆ ತೆರಳಿ ಸಿಬ್ಬಂದಿಗೆ ಸ್ವೀಟ್ ಹಂಚಿ, ಗುಲಾಬಿ ಕೊಟ್ಟು ಸಂಭ್ರಮ, ಯಾಕೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ತೆಲಂಗಾಣದಲ್ಲಿ ಪಶು ವೈದ್ಯೆಯ ಅತ್ಯಾಚಾರಿಗಳನ್ನು ಪೊಲೀಸರು ಎನ್’ಕೌಂಟರ್ ಮಾಡಿದ್ದನ್ನು ಸೊರಬದಲ್ಲಿ ವಿವಿಧ ಸಂಘಟನೆಗಳು ವಿಭಿನ್ನವಾಗಿ ಸಂಭ್ರಮಿಸಿವೆ. ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಸಿಹಿ ಹಂಚಲಾಯಿತು. ಈ ಸಂದರ್ಭ ಮಾತನಾಡಿದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಜನಪದ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ತೆಲಂಗಾಣದಲ್ಲಿ ಪಶು ವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟನೆಯಾಗಿದೆ. ದೇಶದ ಮೂಲೆ … Read more

SHIMOGA | ಸಾವಿರಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಕಾಂಗ್ರೆಸ್’ನಿಂದ ಆರೋಗ್ಯ ತಪಾಸಣೆ

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ತಜ್ಞ ವೈದ್ಯರಿಂದ ಎಲ್ಲರಿಗು ಆರೋಗ್ಯ ತಪಾಸಣೆ ನಡೆಸಲಾಗಿದೆ. ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ನಾಶ ಸಾಧ್ಯವಿಲ್ಲ … Read more

SHIMOGA | ಉಷಾ ನರ್ಸಿಂಗ್ ಹೊಂ ಸರ್ಕಲ್’ನಲ್ಲಿ ಆಂಬುಲೆನ್ಸ್’ಗೆ ಟ್ರಾಕ್ಟರ್ ಡಿಕ್ಕಿ, ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗ ಲೈವ್.ಕಾಂ | SHIMOGA | 08 ಡಿಸೆಂಬರ್ 2019 ಟ್ರಾಕ್ಟರ್ ಮತ್ತು ಆಂಬುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಆಂಬುಲೆನ್ಸ್’ನ ಒಂದು ಭಾಗ ನುಜ್ಜುಗುಜ್ಜಾಗಿದ್ದು, ಘಟನೆಯಲ್ಲಿ 15 ದಿನದ ಹಸುಳೆ ಅದೃಷ್ಟವಶಾತ್ ಪಾರಾಗಿದೆ. ಉಷಾ ನರ್ಸಿಂಗ್ ಹೋಂನ ಬಳಿ ರಾತ್ರಿ ಘಟನೆ ನಡೆದಿದೆ. ಆಂಬುಲೆನ್ಸ್ ಶಿಕಾರಿಪುರದಿಂದ ಶಿವಮೊಗ್ಗದ ಕಡೆಗೆ ಬರುತ್ತಿತ್ತು. ಈ ವೇಳೆ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ಟ್ರಾಕ್ಟರ್ ಡಿಕ್ಕಿಯಾಗಿದೆ. ಶಿಕಾರಿಪುರ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಮಗುವಿಗೆ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಮಗುವಿನ … Read more

SAGARA | ಸಾಗರದಲ್ಲಿ ಸಿಎಂ : ಕಾಂಗ್ರೆಸ್, ಜೆಡಿಎಸ್ ಅಕಸ್ಮಾತ್ ಒಂದೊಂದು ಸ್ಥಾನ ಗೆಲ್ಲಬಹುದು, ಉಳಿದಲ್ಲೆಲ್ಲ ಬಿಜೆಪಿಗೆ ಜಯ

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019 ನಾಳೆ ಉಪ ಚುನಾವಣೆ ಫಲಿತಾಂಶ ಬರಲಿದೆ. ಬಿಜೆಪಿ 13 ಸ್ಥಾನ, ಕಾಂಗ್ರೆಸ್ ಹಾಗು ಜೆಡಿಎಸ್ ತಲಾ ಒಂದು ಸ್ಥಾನ ಪಡೆಯಬಹುದು ಅಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸಾಗರದ ಮಂಕಳಲೆ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನೆರೆಹಾನಿ ಸಂದರ್ಭ ರಾಜ್ಯದಲ್ಲಿ ಬಿಜೆಪಿ ಮಾಡಿದ ಕೆಲಸ ಜನರಿಗೆ ಗೊತ್ತಿದೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ … Read more

SAGARA | ‘ಸಾಗರದಲ್ಲಿ ಸಂಶೋಧನಾ ಕೇಂದ್ರ ಸೂಕ್ತ, ಜಾತ್ರೆ ಬಳಿಕ ಸೊರಬ ರಸ್ತೆ ಅಗಲೀಕರಣ’

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019 ಮಂಗನ ಕಾಯಿಲೆ ಸಂಶೋಧನೆಗೆ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಸಂಶೋಧನ ಕೇಂದ್ರವನ್ನು ಸಾಗರದಲ್ಲೇ ಸ್ಥಾಪಿಸುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಾಗರ ಶಾಸಕ ಹಾಲಪ್ಪ ಅವರ ಕಚೇರಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸಾಗರ ತಾಲೂಕಿನಲ್ಲಿ ಕೆಎಫ್’ಡಿಯಿಂದ ಜನರು ತತ್ತರಿಸಿದ್ದಾರೆ. ಹಾಗಾಗಿ ಇಲ್ಲಿಯೇ ಸಂಶೋಧನ ಕೇಂದ್ರ ತೆರೆಯುವುದು ಸೂಕ್ತ ಎಂದರು. ಜಾತ್ರೆ ಬಳಿಕ ರಸ್ತೆ ಅಗಲೀಕರಣ ಸೊರಬ … Read more

ಹೊಸನಗರ ತಹಶೀಲ್ದಾರ್ ಆರೋಪಿ ನಂಬರ್ 7, ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ವಿರುದ್ಧ ಎಫ್ಐಆರ್

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | NR PURA | 08 ಡಿಸೆಂಬರ್ 2019 ಹೊಸನಗರ ತಾಲೂಕು ತಹಶೀಲ್ದಾರ್ ಸೇರಿ ಎಳು ಮಂದಿ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ನಿರೀಕ್ಷಕ ಆತ್ಮಹತ್ಯೆಗೆ ಇವರ ಕಿರುಕುಳವೆ ಕಾರಣ ಎಂದು ಕುಟುಂಬ ಆರೋಪಿಸಿದ್ದರಿಂದ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕು ಕಚೇರಿ ಆಹಾರ ನಿರೀಕ್ಷಕ ಐ.ಡಿ.ದತ್ತಾತ್ರೇಯ (60) ಅವರು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬ ಸೇತುವೆ ಸಮೀಪ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದತ್ತಾತ್ರೇಯ … Read more

SHIMOGA | ಶಿವಮೊಗ್ಗದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿಗೆ ಅಪಘಾತ, ಸಾವಿನ ಕುರಿತು ಪೋಷಕರಿಗೆ ಅನುಮಾನ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 07 ಡಿಸೆಂಬರ್ 2019 ಕಾಲೇಜಿನಿಂದ ಸರ್ವೇ ಕ್ಯಾಂಪ್’ಗೆ ತೆರಳಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಆದರೆ ಕಾಲೇಜು ಆಡಳಿತ ಮಂಡಳಿಯ ಭಿನ್ನ ಹೇಳಿಕೆ, ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಗಳಲ್ಲಿ ಗೊಂದಲ ಸೃಷ್ಟಿಸಿತು. ಇದರಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಶವಾಗಾರದ ಬಳಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಣಿತಾ (20) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ಪಿಇಎಸ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿದ್ದ ಪರಿಣಿತಾ ಸರ್ವೇ ಕ್ಯಾಂಪ್’ಗೆ ತೆರಳಿದ್ದಳು. ಈ ವೇಳೆ … Read more

SHIMOGA | ದೇವಸ್ಥಾನದ ಹುಂಡಿ ಒಡೆದ ನಾಲ್ಕು ಕಳ್ಳರ ಬಳಿ ಸಿಕ್ತು ಪಿಸ್ತೂಲು, ಒಂಭತ್ತು ಜೀವಂತ ಗುಂಡು

ಶಿವಮೊಗ್ಗ ಲೈವ್.ಕಾಂ | SHIMOGA | 06 ಡಿಸೆಂಬರ್ 2019 ಬಿದರೆಯ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಹುಂಡಿಗಳನ್ನು ಒಡೆದು ಕಾಣಿಕೆ ಹಣ ಕಳ್ಳತನ ಮಾಡಿದ್ದ ತಂಡವನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರದಿಂದ ಪಿಸ್ತೂಲ್, ಒಂಭತ್ತು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ನವೆಂಬರ್ 25ರಂದು ಸೆಕ್ಯೂರಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ, ಶ್ರೀ ಶಿರಡಿ ಸಾಯಿ ಬಾಬಾ ಮಂದಿರದ ಬಾಗಿಲು ಒಡೆದು ಕಳ್ಳತನ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು, ನಾಲ್ಕು … Read more