ಶಿವಮೊಗ್ಗಕ್ಕೆ ನಾಳೆ ಪಾದಯಾತ್ರಿಗಳ ಪ್ರವೇಶ, ಶಿವಪೂಜೆ, ಪ್ರಸಾದ ವಿನಿಯೋಗ
ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ನ.27ರಂದು ಜಗದ್ಗುರು ಶಿವಾನಂದ ರಾಜೇಂದ್ರ ಶಿವಾಚಾರ್ಯರ ಪೀಠಾರೋಹಣದ ಶತಮಾನೋತ್ಸವ ಸಮಾರಂಭ ನಡೆಯಲಿದೆ. ಇದರ ಅಂಗವಾಗಿ ನಡೆಯುತ್ತಿರುವ ಪಾದಯಾತ್ರೆ ನ.24ರಂದು ಶಿವಮೊಗ್ಗ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುದ್ರಮುನಿ ಸಜ್ಜನ್, ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿಯಿಂದ ರಂಭಾಪುರಿ ಮಹಾಪೀಠದವರೆಗೆ 171 ಕಿ.ಮೀ ಪಾದಯಾತ್ರೆ ಈಗಾಗಲೇ ಆರಂಭವಾಗಿದೆ. ನ.23ರಂದು ಕೊಮ್ಮನಾಳು ತಲುಪಲಿದೆ.. … Read more