ಇವತ್ತು ಅನುರಾಧ ನಕ್ಷತ್ರದ ದಿನ, ಯಾವ್ಯಾವ ರಾಶಿಗೆ ಹೇಗಿದೆ? ಇಲ್ಲಿದೆ ದಿನ ಭವಿಷ್ಯ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.31ಕ್ಕೆ ಸೂರ್ಯೋದಯ. 5.57ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ಪ್ರತಿಪದ ಮತ್ತು ಅನುರಾಧ ನಕ್ಷತ್ರದ ದಿನ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.50 ರಿಂದ 5.40ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.15 ರಿಂದ 6.31ರವರೆಗೆ ಅಭಿಜಿತ್‌ ಬೆಳಗ್ಗೆ 11.51 ರಿಂದ 12.36ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.08 ರಿಂದ 2.54ರವರಗೆ ಗೋಧೂಳಿ ಮುಹೂರ್ತ ಸಂಜೆ 5.57 ರಿಂದ 6.22ರವರೆಗೆ ರಾಹು, ಯಮಗಂಡ, ಗುಳಿಕ ಕಾಲ … Read more

ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಪೊಲೀಸರಿಂದ ಪರಿಶೀಲನೆ

Person-breathed-last-at-Nehru-Stadium-in-Shimoga - ನೆಹರು ಕ್ರೀಡಾಂಗಣ

ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತ ವ್ಯಕ್ತಿಯನ್ನು ಹೊಸನಗರದ ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗುತ್ತಿಗೆ ನೌಕರರ ಶ್ರೀಕಾಂತ್‌ (42) ಎಂದು ಗುರುತಿಸಲಾಗಿದೆ. ನೆಹರು ಕ್ರೀಡಾಂಗಣದಲ್ಲಿ ಇವತ್ತು ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ನಡೆಯುತಿತ್ತು. ಆದರೆ ಶ್ರೀಕಾಂತ್‌ ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿದು ಬಂದಿದೆ. ಪೆವಿಲಿಯನ್‌ ಮೇಲೆ ಶ್ರೀಕಾಂತ್‌ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರಿಂದ ಜಯನಗರ ಠಾಣೆಗೆ ಮಾಹಿತಿ … Read more

ಅಡಿಕೆ ಧಾರಣೆ | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಭದ್ರಾವತಿ ಮಾರುಕಟ್ಟೆ ಇತರೆ 27800 28000 ಸೊರಬ ಮಾರುಕಟ್ಟೆ ಬಿಳೆ ಗೋಟು 16600 16600 ಸಾಗರ ಮಾರುಕಟ್ಟೆ ಕೆಂಪುಗೋಟು 28989 38989 ಕೋಕ 12989 34916 ಚಾಲಿ 32099 43206 ಬಿಳೆ ಗೋಟು 11619 35800 ರಾಶಿ 40299 60010 ಸಿಪ್ಪೆಗೋಟು 16299 22899 ಶಿಕಾರಿಪುರ ಮಾರುಕಟ್ಟೆ ರಾಶಿ 58668 58668 ಶಿವಮೊಗ್ಗ ಮಾರುಕಟ್ಟೆ ಗೊರಬಲು 20399 43699 ನ್ಯೂ ವೆರೈಟಿ 43280 … Read more

ಶೀಟ್‌ ಮೇಲಿತ್ತು ಪ್ರತಿಷ್ಠಿತ ಕಂಪನಿಯ ಹೆಸರು, ಪೊಲೀಸ್‌ ದಾಳಿ ಬಳಿಕ ಹೊರಬಿತ್ತು ಅಸಲಿ ವಿಷಯ

Police-raid-on-sheet-factory-in-Shimoga

ಶಿವಮೊಗ್ಗ: ಬೇರೆ ಕಂಪನಿಯ ಕಬ್ಬಿಣದ ಶೀಟ್ ಮೇಲೆ JSW ಕಂಪನಿಯ ಹೆಸರು ಮುದ್ರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಿಂಟ್ ಮಾಡಲು ಬಳಸುತ್ತಿದ್ದ ಯಂತ್ರ ಸಹಿತ ಹೊಳೆಬೆನವಳ್ಳಿ ಗ್ರಾಮದ ಲೋಹಿತ್ ಬಿ.ನಾಯ್ಕ (34) ಎಂಬುವರನ್ನು ವಶಪಡಿಸಿಕೊಳ್ಳಲಾಗಿದೆ. ಎಂಜಿನಿಯರಿಂಗ್‌ ವರ್ಕ್ಸ್‌ವೊಂದರಲ್ಲಿ ತಮ್ಮ ಬ್ರ್ಯಾಂಡ್‌ನ ನಕಲು ಮಾಡಿ ಕಬ್ಬಿಣ ಮಾರಾಟ ಮಾಡುತ್ತಿರುವ ಬಗ್ಗೆ ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಡಿವೈಎಸ್‌ಪಿ ಸಂಜೀವ್ ಕುಮಾ‌ರ್ ಮಾರ್ಗದರ್ಶನದಲ್ಲಿ ಠಾಣೆಯ ಪಿಐ ಸಿದ್ದನಗೌಡ, ಪಿಎಸ್‌ಐ ಕೆ.ಎನ್. ಹಳ್ಳಿಯವರ್ … Read more

‘ಸಿಟಿ ಬಸ್‌ ನಿಷೇಧಿಸಿ, ಸರ್ಕಾರಿ ಬಸ್‌ ಆರಂಭಿಸಿ’, ನಾಗರಿಕರ ಆಕ್ರೋಶ

Shanthi-Nagara-residents-protest-against-City-buses - ಸಿಟಿ ಬಸ್

ಶಿವಮೊಗ್ಗ: ರಾಗಿಗುಡ್ಡ ಸಮೀಪದ ಶಾಂತಿನಗರಕ್ಕೆ ಖಾಸಗಿ ಸಿಟಿ ಬಸ್‌ಗಳನ್ನು ನಿಷೇಧಿಸಬೇಕು. ಸಿಟಿ ಬಸ್ ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಶಾಂತಿನಗರ ನಾಗರಿಕ ಹಕ್ಕುಗಳ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನ.16ರ ರಾತ್ರಿ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ನಡೆದ ಅಪಘಾತ ಖಾಸಗಿ ಬಸ್‌ಗಳ ಯಮಸ್ವರೂಪಿ ವೇಗಕ್ಕೆ ಸಾಕ್ಷಿಯಾಗಿದೆ. ಶಾಂತಿನಗರದ ಯುವಕ ಜೀವ ಕಳೆದುಕೊಂಡು, ಮೂರ್ನಾಲ್ಕು ಬೈಕ್ ಸವಾರರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರ್ಘಟನೆಗೆ ಖಾಸಗಿ ಸಿಟಿ ಬಸ್‌ಗಳ … Read more

ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು

Areca-Farm-Adike-tota-in-Shimoga

ರಿಪ್ಪನ್‌ಪೇಟೆ: ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಹಳ್ಳಕ್ಕೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ದೊಡ್ಡಿನಕೊಪ್ಪದ ಮಂಜುನಾಥ್ (37) ಮೃತರು. ಮಂಗಳವಾರ ಗವಟೂರು ಗ್ರಾಮದ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, ಜೊತೆಗಿದ್ದ ವ್ಯಕ್ತಿ ಯಾರು? ‌SP ಫಸ್ಟ್‌ ರಿಯಾಕ್ಷನ್?

ರೈಲ್ವೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

railway-track-general-image.webp

ಶಿವಮೊಗ್ಗ: ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಡು ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕಡು ಗುಲಾಬಿ ಬಣ್ಣದ ಶರ್ಟ್ ಮತ್ತು ಕಪ್ಪು-ಬಿಳಿ ಬಣ್ಣದ ಲುಂಗಿ ಧರಿಸಿದ್ದಾರೆ. ಸಂಬಂಧಿಗಳು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯ ಎಸ್‌ಐ ಅವರನ್ನು ಖುದ್ದಾಗಿ ಅಥವಾ ದೂ.ಸಂ: 08182-222974/ 948082124ಗೆ ಸಂಪರ್ಕಿಸುವಂತೆ ರೈಲ್ವೆ ಪೊಲೀಸ್ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ … Read more

ಚಂದ್ರಗುತ್ತಿಯಲ್ಲಿ ಇವತ್ತು ಲಕ್ಷ ದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

Chandragutti-Temple-Soraba.

ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನ.20 ರಂದು ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ  ಪ್ರಮೀಳಾ ಕುಮಾರಿ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಕೊನೆಯ ಕಾರ್ತಿಕ ಅಮಾವಾಸ್ಯೆಯಂದು ಲಕ್ಷ ದೀಪೋತ್ಸವವನ್ನು ಆಚರಿಸಲಾಗುವುದು. ದೇವಸ್ಥಾನದಲ್ಲಿ  ದೀಪಲಂಕಾರ ಸೇರಿದಂತೆ ಪ್ರಧಾನ ಅರ್ಚಕರಾದ ಅರವಿಂದ್ ಭಟ್ ಅವರ ನೇತೃತ್ವದಲ್ಲಿ ಪೂಜಾ ಧಾರ್ಮಿಕ ಕಾರ್ಯಗಳು ನಡೆಯಲಿವೆ.   ಪರಿವಾರ ದೇವರುಗಳಾದ ನಾಗದೇವತೆ, ಕಾಲಭೈರವ, ಪರಶುರಾಮ, ಮಾತಂಗಿ, ತ್ರಿಶೂಲ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಮಹಾಮಂಗಳಾರತಿ ನಡೆಯಲಿದೆ. ಸಂಜೆ … Read more

ತುಮರಿ ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

TUMARI-SAGARA-NEWS-1.jpg

ತುಮರಿ: ಬ್ಯಾಕೋಡಿನ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ. 20ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಜೋಗ ಉಪ ವಿಭಾಗದ ವಿವಿಧೆಡೆ ಕರೆಂಟ್‌ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಸ್ಎಸ್ ಭೋಗ್, ತುಮರಿ, ಕುದರೂರು ಹಾಗೂ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, … Read more

BREAKING NEWS – ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಮಿನಿ ಬಸ್‌ ಪಲ್ಟಿ

Mini-Bus-mishap-near-kunchenahalli-in-Shimoga.

ಶಿವಮೊಗ್ಗ: ರಸ್ತೆಗೆ ಅಡ್ಡ ಬಂದ ಹಸುವಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಪಲ್ಟಿಯಾಗಿದೆ. ಶಿವಮೊಗ್ಗ ತಾಲೂಕು ಕೆಳಕಿನ ಕುಂಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಮಿನಿ ಬಸ್ಸಿನಲ್ಲಿ ತರೀಕೆರೆ ಮೂಲದ ಸುಮಾರು 25 ಪ್ರವಾಸಿಗರು ಇದ್ದರು ಎಂದು ತಿಳಿದು ಬಂದಿದೆ. ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಪ್ರವಾಸಿಗರು ತರೀಕೆರೆ ಮರಳುತ್ತಿದ್ದರು. ಕೆಳಕಿನ ಕುಂಚೇನಹಳ್ಳಿ ಬಳಿ ರಸ್ತೆಗೆ ಅಡ್ಡ ಬಂದ ಹಸುವಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಪಲ್ಟಿಯಾಗಿದೆ. ನೆರವಿಗೆ ಧಾವಿಸಿದ ಸ್ಥಳೀಯರು ಇನ್ನು, ಘಟನೆಯ ಮಾಹಿತಿ … Read more