ಬಿಹಾರ ಫಲಿತಾಂಶ, ಶಿವಮೊಗ್ಗದಲ್ಲಿ ಯಡಿಯೂರಪ್ಪ, ರಾಘವೇಂದ್ರ ಫಸ್ಟ್‌ ರಿಯಾಕ್ಷನ್‌, ಏನಂದ್ರು?

BS-Yedyurappa-and-BY-Raghavendra-spoke-to-media-about-result - ಬಿಹಾರ ಚುನಾವಣೆ ಫಲಿತಾಂಶ

ಶಿವಮೊಗ್ಗ: ಬಿಹಾರ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇತ್ತ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಫಲಿತಾಂಶ ಮತ್ತು ಗೆಲುವಿನ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಏನಂದ್ರು? ವಿನೋಬನಗರದ ತಮ್ಮ ಮನೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ‘ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ. ಎನ್‌ಡಿಎ … Read more

ನಾಮಪತ್ರ ಸಲ್ಲಿಕೆ ಆರಂಭ, ಡಿ.5 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮತದಾನ

zilla-pachayath-shivamogga

ಶಿವಮೊಗ್ಗ: ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮತಕ್ಷೇತ್ರದಿಂದ ಶಿವಮೊಗ್ಗ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸ್ಥಾನಗಳಿಗೆ ನಡೆಯುವ ಮತದಾನದ ದಿನಾಂಕವನ್ನು ಚುನಾವಣಾಧಿಕಾರಿ ಎನ್.ಹೇಮಂತ್‌ ಪ್ರಕಟಿಸಿದ್ದಾರೆ.  ನ.13 ರಿಂದ 24ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ನ.26 ರ ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.29 ಕೊನೆ ದಿನ. ಡಿ.5ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಜಿಲ್ಲಾ ಪಂಚಾಯಿತಿ … Read more

ಕಡಿಮೆಯಾಯ್ತು ಥಂಡಿ ವಾತಾವರಣ, ಇವತ್ತೂ ಇರುತ್ತಾ ಬಿಸಿಲಿನ ಅಬ್ಬರ? ಶಿವಮೊಗ್ಗದ ಹವಾಮಾನ ವರದಿ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ಅಬ್ಬರ ಜೋರಾಗಿದೆ. ಇವತ್ತೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕೇರಳ ರಾಜ್ಯಾದ್ಯಂತ ಇವತ್ತು ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದ್ದು, ಜೋರು ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದ ವಿವಿಧೆಡೆ ತಾಪಮಾನದಲ್ಲಿ ವ್ಯತ್ಯಾಸ ಸಾಧ್ಯತೆ ಇದೆ. ಇತ್ತ ಶಿವಮೊಗ್ಗದಲ್ಲಿ ಕಳೆದ ಎರಡು ದಿನದಿಂದ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ನಡುರಾತ್ರಿ ಬಳಿಕ ಮತ್ತು ಬೆಳಗಿನ ಜಾವದ ಹೊತ್ತಿಗೆ ಥಂಡಿ ವಾತಾವರಣ … Read more

ಶಿವಮೊಗ್ಗದ ಒಂದು ರೈಲ್ವೆ ನಿಲ್ದಾಣ ಸೇರಿ ರಾಜ್ಯದ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು

Railway-Track-in-Shimoga-station

ಬೆಂಗಳೂರು: ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯ ಸೂರಗೊಂಡನಕೊಪ್ಪ ರೈಲ್ವೆ ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಪತ್ರ ಬರೆದಿದ್ದಾರೆ. ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಶ್ರೀ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಪ್ರಸ್ತಾಪಿಸಿದ್ದಾರೆ. ಸರ್ಕಾರ ಈ ನಿಲ್ದಾಣಗಳಿಗೆ ಸಂತರ … Read more

ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಪಂಚಾಂಗದಲ್ಲಿ ಏನೇನಿದೆ? ಓದಲು ಇಲ್ಲಿ ಕ್ಲಿಕ್‌ ಮಾಡಿ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.27ಕ್ಕೆ ಸೂರ್ಯೋದಯ. 5.57ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ದಶಮಿ ಮತ್ತು ಹುಬ್ಬ ನಕ್ಷತ್ರದ ದಿನ. ಇಂದು ದೇಶದ ಮೊದಲ ಪ್ರಧಾನಿ ಪಂಡಿತ್‌ ಜವಾಹರಲಾಲ್ ನೆಹರು ಜನ್ಮದಿನ ಮತ್ತು ಮಕ್ಕಳ ದಿನಾಚರಣೆ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.47 ರಿಂದ 5.37ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.12 ರಿಂದ 6.27ರವರೆಗೆ ಅಭಿಜಿತ್‌ ಬೆಳಗ್ಗೆ 11.49 ರಿಂದ 12.35ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.07 ರಿಂದ … Read more

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಎಲ್ಲೆಲ್ಲಿದೆ ಅವಕಾಶ?

SHIMOGA-NEWS-UPDATE

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರು, ಹೊಸನಗರದಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 144 ಸಹಾಯಕಿಯರು, ಸಾಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು … Read more

ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ಅನುಮಾನ

Drinking-Water-Tap

ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದು, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಲಿದೆ. ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಅರ್ಧ … Read more

ನ.19ರಿಂದ ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

JDS-Kantharaj-Press-meet-in-shimoga.

ಶಿವಮೊಗ್ಗ: ಮೂವತ್ತು ವರ್ಷಗಳ ಹಿಂದೆ ಆರಂಭವಾದ ಶಾಲಾ ಕಾಲೇಜುಗಳಿಗೆ ಮೂಲಸೌಕರ್ಯ ಮತ್ತು ವೇತನವನ್ನು ಮಂಜೂರು ಮಾಡುವಂತೆ ಆಗ್ರಹಿಸಿ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ವತಿಯಿಂದ ನ.19ರಿಂದ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಕಾಂತರಾಜ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂತರಾಜ್‌, ಬೆಕ್ಕಿನಕಲ್ಮಠ ಶ್ರೀ, ಹಂದಿಗುಂದ ಶ್ರೀ ಶಿವಾನಂದ ಸ್ವಾಮೀಜಿ, ಬೊಮ್ಮನಹಳ್ಳಿ ಸ್ವಾಮೀಜಿ ಹಾನಗಲ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು. ರಾಜ್ಯಾದ್ಯಂತ … Read more

ಸಾಗರದಲ್ಲಿ ಅವ್ವ ಮಹಿಳಾ ಮಹಾ ಸಂತೆ, ಏನೇನಿರುತ್ತೆ?

Sagara-News-Update.

ಸಾಗರ: ಇಲ್ಲಿನ ಜೀವನ್ಮುಖಿ ಸಂಸ್ಥೆಯು ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ನ. 15ರಂದು ಬೆಳಿಗ್ಗೆ 11ರಿಂದ ರಾತ್ರಿ 8ರವರೆಗೆ ಗಾಂಧಿ ಮೈದಾನದಲ್ಲಿ ಅವ್ವ ಮಹಿಳಾ ಮಹಾ ಸಂತೆ ಆಯೋಜಿಸಿದೆ ಎಂದು ಜೀವನ್ಮುಖಿ ಸಂಸ್ಥೆಯ ಎಂ.ವಿ.ಪ್ರತಿಭಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ, ಹೆಗ್ಗೋಡಿನ ಚರಕ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ಈ ಸಂತೆಯಲ್ಲಿ ರಾಜ್ಯದ ವಿವಿಧ ಭಾಗಗಳ ಮಹಿಳಾ ಉದ್ಯಮಿಗಳು ಸಿದ್ಧಪಡಿಸಿರುವ ಗೃಹೋತ್ಪನ್ನಗಳು, ಕೈಮಗ್ಗದ ವಸ್ತುಗಳು, ಸ್ಥಳೀಯ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ಮಾರಾಟವಿರುತ್ತದೆ ಎಂದು ತಿಳಿಸಿದರು. ಚರಕ ಸಂಸ್ಥೆಯ ಉತ್ಪನ್ನಗಳನ್ನು … Read more

ಆಯನೂರು ಮಂಜುನಾಥ್‌ ಜನ್ಮದಿನ, ಶಿವಮೊಗ್ಗದಲ್ಲಿ ನಾಳೆ ಇಡೀ ದಿನ ಕಾರ್ಯಕ್ರಮ

Ayanuru-Manjunatha-Followers-press-meet.

ಶಿವಮೊಗ್ಗ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಆಯನೂರು ಮಂಜುನಾಥ್‌ ಅವರ 71ನೇ ಜನ್ಮದಿನ ನ.14ರಂದು ವಿಶಿಷ್ಟವಾಗಿ ನಡೆಯಲಿದೆ ಎಂದು ಆಯನೂರು ಮಂಜುನಾಥ್ ಅಭಿಮಾನಿಗಳ ಬಳಗದ ಪರವಾಗಿ ಪಾಲಿಕೆ ಮಾಜಿ ಸದಸ್ಯ ಧೀರರಾಜ್ ಹೊನ್ನವಿಲೆ ತಿಳಿಸಿದರು. ಮಥುರಾ ಹೊಟೇಲ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 11 ಗಂಟೆಗೆ ಜ್ಯೂಯಲ್ ರಾಕ್ ಹೊಟೇಲ್‌ ಸಮೀಪ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ದೇವರಿಗೆ ವಿಶೇಷಪೂಜೆ, ಬೆಳಗ್ಗೆ 11.30ಕ್ಕೆ ಕಾಂಗ್ರೆಸ್ ಕಛೇರಿಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ, ಮಧ್ಯಾಹ್ನ … Read more