ಅಡಿಕೆ ಧಾರಣೆ | 28 ನವೆಂಬರ್‌ 2025 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಭದ್ರಾವತಿ, ಹೊಸನಗರ, ತೀರ್ಥಹಳ್ಳಿ ಮಾರುಕಟ್ಟೆಗಳಲ್ಲಿ (Market) ಇವತ್ತಿನ ಅಡಿಕೆ ಧಾರಣೆ (Adike Rate). ತೀರ್ಥಹಳ್ಳಿ ಮಾರುಕಟ್ಟೆ ಸಿಪ್ಪೆಗೋಟು 14000 14000 ಭದ್ರಾವತಿ ಮಾರುಕಟ್ಟೆ ರಾಶಿ 47199 59100 ಹೊಸನಗರ ಮಾರುಕಟ್ಟೆ ಕೆಂಪುಗೋಟು 28999 41409 ರಾಶಿ 46170 62210 ಶಿವಮೊಗ್ಗ ಮಾರುಕಟ್ಟೆ ಗೊರಬಲು 19000 42730 ನ್ಯೂ ವೆರೈಟಿ 45089 58701 ಬೆಟ್ಟೆ 57099 68416 ರಾಶಿ 42869 59100 ಸರಕು 60009 92040 ‌ಇದನ್ನೂ ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ … Read more

ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌

hd-kumaraswamy-visit-to-visl-in-bhadravathi

ಶಿವಮೊಗ್ಗ: ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ (Shimoga) ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ನ.29ರಂದು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shimoga Airport) ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆವರೆಗೆ VISL ಕಾರ್ಖಾನೆಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 6.15ಕ್ಕೆ … Read more

ಶಿವಮೊಗ್ಗದಲ್ಲಿ ಈಜು ಸ್ಪರ್ಧೆಗೆ 15 ಜಿಲ್ಲೆಯ 300ಕ್ಕೂ ಹೆಚ್ಚು ಸ್ಪರ್ಧಿಗಳು, ಯಾವಾಗ? ಎಲ್ಲಿ ನಡೆಯುತ್ತೆ?

Swimming-Competation-in-Shimoga-city

ಶಿವಮೊಗ್ಗ: ನಗರದ ಮಲೆನಾಡು ಶಿವಮೊಗ್ಗ ಸ್ವಿಮ್ಮಿಂಗ್‌ ಅಸೋಸಿಯೇಷನ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನ.30ರಂದು ಗೋಪಾಲಗೌಡ ಬಡಾವಣೆಯ ಶಿವಮೊಗ್ಗ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನ ಈಜು ಕೊಳದಲ್ಲಿ ರಾಜ್ಯಮಟ್ಟದ 2ನೇ ನಾನ್ ಮೆಡಲಿಸ್ಟ್ ಸ್ವಿಮ್ ಮೀಟ್ ಈಜು ಸ್ಪರ್ಧೆ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ ತಿಳಿಸಿದರು. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕ್ರೀಡಾಕೂಟಕ್ಕೆ ನ.30ರ ಬೆಳಗ್ಗೆ 7ಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 8.30ಕ್ಕೆ ಸ್ಪರ್ಧೆಗಳು ಆರಂಭವಾಗುತ್ತವೆ. 2011ರಿಂದ 2019ರ ಒಳಗೆ ಜನಿಸಿದ … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಕೇರಳ ರಾಜ್ಯಪಾಲರು, ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ?

Kerala-Governor-to-visit-Shivamogga

ಶಿವಮೊಗ್ಗ: ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ನ.30ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ ಹೈದರಾಬಾದ್‌ನಿಂದ ವಿಮಾನದಲ್ಲಿ ಹೊರಟು 10.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್‌ಗೆ ಆಗಮಿಸಲಿದ್ದು, ಶ್ರೀ ಭಗವದ್ಗೀತೆ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.50ಕ್ಕೆ ಶಿವಮೊಗ್ಗದ ಸರ್ಕ್ಯೂಟ್‌ ಹೌಸ್‌ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಂಡಿಗೋ ವಿಮಾನದ ಮೂಲಕ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.   ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್‌ ನಿರಂತರ … Read more

ಹಿಂದುಳಿದ, ಅಲೆಮಾರಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ‌, ಅವಧಿ ವಿಸ್ತರಣೆ

SHIMOGA-NEWS-UPDATE

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ  ವಿಸ್ತರಿಸಲಾಗಿದೆ. ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ … Read more

ಶಿಕಾರಿಪುರ ಪುರಸಭೆಯ ಮಹತ್ವದ ಆದೇಶ, ತಪ್ಪಿದಲ್ಲಿ ದಂಡ ಕಟ್ಟಿಸಿಕೊಳ್ಳುವ ಎಚ್ಚರಿಕೆ

291124 Shikaripura Purasabhe general image

ಶಿಕಾರಿಪುರ: ಪುರಸಭೆ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅವುಗಳ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಶಿಕಾರಿಪುರ ಪುರಸಭೆಯ ಮುಖ್ಯಾಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ. ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಬೇಕು. ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

Shimoga-News-update

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ನ.28 ರಂದು ರಾತ್ರಿ 9.40 ಶಿವಮೊಗ್ಗ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ನ.29 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗ , ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಕಾರ್ಯಗಾರದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಶಾಲಾ – ಕಾಲೇಜುಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಇದನ್ನೂ ಓದಿ » ಇಂಟರ್‌ನೆಟ್‌ ಬಿಲ್‌ ಕಟ್ಟಲು ಮುಂದಾದ ನಿವೃತ್ತ ಉದ್ಯೋಗಿಯ ಬ್ಯಾಂಕ್‌ ಖಾತೆ … Read more

‘ನಾನೇನು ಸನ್ಯಾಸಿಯಲ್ಲ, ಹೈಕಮಾಂಡ್‌ ಶೀಘ್ರ ನಿರ್ಧಾರ ಕೈಗೊಳ್ಳಲಿʼ

Beluru-Gopalakrishna-speaks-to-media-in-Shimoga

ಶಿವಮೊಗ್ಗ: ನಾನೇನು ಸನ್ಯಾಸಿಯಲ್ಲ. ನನ್ನ ಹಕ್ಕು ಕೇಳುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಪರಿಹಾರ ಮಾಡುವುದರ ಜೊತೆಗೆ ಹೊಸಬರಿಗೆ ಸಚಿವ ಸ್ಥಾನ ನೀಡುವ ವಿಚಾರವನ್ನು ಹೈಕಮಾಂಡ್‌ ಶೀಘ್ರ ಬಗೆಹರಿಸಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಚಿವ ಸ್ಥಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಕೇಳಿದ್ದೇನೆ. ಪ್ರಬಲ ಆಕಾಂಕ್ಷಿ ಎಂಬುದನ್ನ ಮನದಟ್ಟು ಮಾಡಿದ್ದೇನೆ. ‘ನಾನು ಹೈಕಮಾಂಡ್‌ ಬಣʼ ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಗೊಂದಲ ಮೂಡಿಸಿದೆ. … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ

CITU-Protest-against-Labour-Act

ಶಿವಮೊಗ್ಗ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಮಿಕ ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಏಕಪಕ್ಷೀಯವಾಗಿ ಜಾರಿಗೊಳಿಸಲು ಮುಂದಾಗಿದೆ ಎಂದು ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು  ಏಕಪಕ್ಷೀಯವಾಗಿ ಜಾರಿಗೆ ಮುಂದಾಗಿದೆ. ಇವುಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಹೀಗಿದ್ದೂ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿವೆ … Read more

ನೀರು ಕಾಯಿಸಿಲು ಇಟ್ಟಿದ್ದ ತಾಮ್ರದ ಹಂಡೆಯೇ ನಾಪತ್ತೆ

Tunga-Nagara-Police-Station-Shimoga

ಶಿವಮೊಗ್ಗ: ನೀರು ಕಾಯಿಸಲು ಮನೆಯ ಹಿಂಬದಿ ಇಟ್ಟಿದ್ದ ತಾಮ್ರದ ಹಂಡೆಯನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಹಾಯ್‌ಹೊಳೆ ಸಮೀಪದ ಭಾರತಿ ನಗರದ ನಿವಾಸಿ ಮೀನಾಕ್ಷಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಅಂದಾಜು 15 ಕೆಜಿ ತೂಕದ ತಾಮ್ರದ ಹಂಡೆಯನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ತಾಮ್ರದ ಹಂಡೆಯ ಅಂದಾಜು ಮೌಲ್ಯ ₹15,000 ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯ ಹಿಂಭಾಗದ ತೆರೆದ ಜಾಗದಲ್ಲಿ ಮೀನಾಕ್ಷಿ ಅವರು ನೀರು ಕಾಯಿಸಲು ಹಂಡೆ ಇಟ್ಟಿದ್ದರು. ಕಳ್ಳತನವಾಗಿರುವ ಬಗ್ಗೆ ಗಮನಕ್ಕೆ ಬಂದ ನಂತರ ಕೂಡಲೆ ತುಂಗಾ ನಗರ … Read more