BREAKING NEWS | ಶಿವಮೊಗ್ಗದಲ್ಲಿ ಪೊಲೀಸರಿಂದ ಫೈರಿಂಗ್, ಕುಖ್ಯಾತ ರೌಡಿ ಮಾರ್ಕೆಟ್ ಲೋಕಿ ಕಾಲಿಗೆ ಗುಂಡು

Resizer 15815149998510 1581515235267 1

ಶಿವಮೊಗ್ಗ ಲೈವ್.ಕಾಂ | SHIMOGA | 12 ಫೆಬ್ರವರಿ 2020 ಶಿವಮೊಗ್ಗದಲ್ಲಿ ಮತ್ತೆ ಪೊಲೀಸರು ಬಂದೂಕು ಸದ್ದು ಮಾಡಿದೆ. ಕುಖ್ಯಾತ ರೌಡಿ ಶೀಟರ್ ಮಾರ್ಕೆಟ್ ಲೋಕಿ ಮೇಲೆ ಫೈರಿಂಗ್ ಮಾಡಿದ್ದಾರೆ. ಮಾರ್ಕೆಟ್ ಲೋಕಿ ಎಡಗಾಲಿಗೆ ಗುಂಡು ತಗುಲಿದೆ. ಶಿವಮೊಗ್ಗ ತಾಲೂಕು ಅಬ್ಬಲಗೆರೆ ಬಳಿ ಮಾರ್ಕೆಟ್ ಲೋಕಿ ಇರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದು, ಮಾರ್ಕೆಟ್ ಲೋಕಿ ಎಡಗಾಲಿಗೆ ಗುಂಡು … Read more

ಶಿವಮೊಗ್ಗ ಲೋಕ ಅದಾಲತ್’ನಲ್ಲಿ 811 ಕೇಸ್ ಇತ್ಯರ್ಥ, ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್ ಬಗೆಹರಿದಿದೆ ಗೊತ್ತಾ?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಫೆ.8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಸಿದ ಲೋಕ ಅದಾಲತ್‌ನಲ್ಲಿ 811 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ವಿವಿಧ ರೀತಿಯ 7,797 ಪ್ರಕರಣಗಳನ್ನು ತೆಗೆದುಕೊಂಡು, ಅವುಗಳ ಪೈಕಿ ವಿಚಾರಣೆಯ ಹಂತದಲ್ಲಿ ಬಾಕಿ ಇದ್ದ 656 ಪ್ರಕರಣಗಳನ್ನು ಹಾಗೂ 155 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥಪಡಿಸಲಾಯಿತು ಎಂದು ಜಿಲ್ಲಾ ಸಿವಿಲ್ … Read more

ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಕ್ಕೆ ಅನುಮತಿ, 8 ಬ್ಲಾಕ್’ನಲ್ಲಿ ಈಗ ಶುರು, ಇನ್ನೊಂದು ವಾರದಲ್ಲಿ ಎಲ್ಲೆಡೆ, ಅಕ್ರಮ ತಡೆಗೆ ಚೆಕ್’ಪೋಸ್ಟ್

DC Office 1

ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020 ಜಿಲ್ಲೆಯಲ್ಲಿ ಗುರುತಿಸಲಾಗಿರುವ 28 ಮರಳು ಬ್ಲಾಕ್ ಗಳಲ್ಲಿ ಮರಳುಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮರಳು ಸಮಿತಿ ಸಭೆಯಲ್ಲಿ ಮಾತನಾಡಿ, ನದಿಯ ಕೆಲವೆಡೆ ನೀರು ಇಳಿಯದ ಕಾರಣ ಮರಳುಗಾರಿಕೆ ಆರಂಭವಾಗಿಲ್ಲ. 28 ಬ್ಲಾಕ್’ಗಳ ಪೈಕಿ ಎಂಟರಲ್ಲಿ ಮರಳುಗಾರಿಕೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ತೀರ್ಥಹಳ್ಳಿಯಲ್ಲಿರುವ 13 ಮರಳು ಬ್ಲಾಕ್’ಗಳ ಪೈಕಿ ಎರಡು ಬ್ಲಾಕ್’ಗಳಲ್ಲಿ ಮರಳುಗಾರಿಕೆ ಆರಂಭವಾಗಿದೆ. … Read more

ಕಾಪಿ ಹೊಡೆಯಲು ಅವಕಾಶ ಕೊಟ್ಟ ಪರೀಕ್ಷಾ ಕೇಂದ್ರಗಳ ಪ್ರವೇಶಾತಿ ರದ್ದು, ಯಾವ್ಯಾವ ಕೇಂದ್ರಗಳು ರದ್ದಾಗಲಿದೆ ಗೊತ್ತಾ?

Kuvempu-University

ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020 ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದ ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧ್ಯಯನ ಕೇಂದ್ರಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ನಿಲ್ಲಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ವೆಂಕಟೇಶ್ವರಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುವೆಂಪು ವಿವಿ ಮಾನ್ಯತೆ ಪಡೆದ ಸ್ಟೂಡೆಂಟ್ ಡೆವಲಪ್‌ಮೆಂಟ್ ಟ್ರಸ್ಟ್ ಮತ್ತು ಕೆಸಿಇ ಫೌಂಡೇಷನ್ ಫೆಬ್ರವರಿ 6ರಂದು ಹುಬ್ಬಳ್ಳಿಯ ಮಹಾರಾಣಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸುತ್ತಿದ್ದ ಪರೀಕ್ಷೆಯಲ್ಲಿ ಮತ್ತು … Read more

ಶಿವಮೊಗ್ಗ – ಬೀರೂರು ರೈಲ್ವೆ ಮಾರ್ಗ ವಿದ್ಯುದೀಕರಣಕ್ಕೆ ಕೇಂದ್ರ ಸರ್ಕಾರ ಅಸ್ತು, ಎಷ್ಟು ಕೋಟಿ ಮೀಸಲಾಗಿದೆ ಗೊತ್ತಾ?

Train engine and boggies

ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020 ಬೀರೂರು – ಶಿವಮೊಗ್ಗ ತಾಳಗುಪ್ಪ ರೈಲು ಮಾರ್ಗದ ವಿದ್ಯುದೀಕರಣ ಯೋಜನೆಗೆ ಕೇಂದ್ರ ಸರಕಾರವು ಮಂಜೂರು ನೀಡಿದೆ. 2020 – 21ನೇ ಸಾಲಿನ ಬಜೆಟ್‌ನಲ್ಲಿ ವಿದ್ಯುದೀಕರಣ ಕಾಮಗಾರಿಗಾಗಿ 25 ಕೋಟಿ ರೂ.ಗಳನ್ನು ಘೋಷಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಸಂಸದನಾದ ಬಳಿಕ ಶಿವಮೊಗ್ಗಕ್ಕೆ ಹಲವು ರೈಲುಗಳನ್ನು ತರಲು ಶ್ರಮ ವಹಿಸಲಾಗಿತ್ತು. ಅದರ ಪರಿಣಾಮವಾಗಿ ಹಲವು ರೈಲುಗಳು ಲಭ್ಯವಾಗಿವೆ. ಮಲೆನಾಡಿನೊಂದಿಗೆ ಮಧ್ಯ ಮತ್ತು ಉತ್ತರ ಕರ್ನಾಟಕಕ್ಕೆ ನೇರ ಸಂಪರ್ಕ … Read more

ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ ಗ್ರಾಮಸ್ಥರ ಗೋಳು ಕೇಳೋರಿಲ್ಲ, ಊರು ತೊರೆಯಲು ಸಿದ್ಧವಾದರು ಜನ

ಶಿವಮೊಗ್ಗ ಲೈವ್.ಕಾಂ | SHIMOGA | 10 ಫೆಬ್ರವರಿ 2020 ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿಹಳ್ಳಿ ಗ್ರಾಮಗಳ ಸ್ಥಳಾಂತರಕ್ಕೆ ನಾವು ಮನಃಪೂರ್ವಕವಾಗಿ ಒಪ್ಪಿದ್ದು, ತಮಗೆ ಕೂಡಲೇ ಪುನರ್ ವಸತಿ ಕಲ್ಪಿಸಬೇಕು ಎಂದು ಎರಡೂ ಗ್ರಾಮದ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾ.ಪಂ. ಸದಸ್ಯ ಸಿ.ರಾಜಪ್ಪ, ಎಂ.ಜೆ.ರಾಜಪ್ಪ, ಎಸ್.ಜೆ.ಮಂಜಪ್ಪ ಮತ್ತಿತರರು, ಶಿವಮೊಗ್ಗ ತಾಲ್ಲೂಕು ಕಸಬಾ-1 ಹೋಬಳಿಗೆ ಒಳಪಡುವ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ, ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿ ಹಳ್ಳಿ ಗ್ರಾಮಗಳಿಗೆ ಇದುವರೆಗೂ ಮೂಲ ಸೌಕರ್ಯ ಇಲ್ಲ. ಪುನರ್’ವಸತಿಗಾಗಿ ನಾವು ಸರ್ಕಾರಕ್ಕೆ … Read more

ಸಾಗರ ಪಟ್ಟಣದಲ್ಲಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನಾ ಮೆರವಣಿಗೆ, ಕೂಡಲೇ ಸಮಸ್ಯೆ ಪರಿಹಾರಕ್ಕೆ ಸರ್ಕಾರಕ್ಕೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 10 ಫೆಬ್ರವರಿ 2020 ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್’ಟಾಪ್ ವಿತರಿಸುವಂತೆ ಆಗ್ರಹಿಸಿ ಸಾಗರ ಪಟ್ಟಣದಲ್ಲಿ  ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಎರಡು ವರ್ಷದಿಂದ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಣೆ ಆಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಾಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇವತ್ತು ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಉಪ ವಿಭಾಗಾಧಿಕಾರಿ ಮತ್ತು ಶಾಸಕ ಹರತಾಳು ಹಾಲಪ್ಪ ಅವರಿಗೆ ಮನವಿ ಸಲ್ಲಿಸಿದರು. 2017ರಿಂದ ರಾಜ್ಯ ಸರ್ಕಾರ … Read more

ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ, ಎಲ್ಲಿ? ಹೇಗಾಯ್ತು ಗೊತ್ತಾ ಕೊಲೆ?

ಶಿವಮೊಗ್ಗ ಲೈವ್.ಕಾಂ | SHIMOGA | 10 ಫೆಬ್ರವರಿ 2020 ಶಿವಮೊಗ್ಗದಲ್ಲಿ ಮತ್ತೊಂದ ಬರ್ಬರ ಹತ್ಯ ನಡೆದಿದೆ. ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ರಾತ್ರಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಾಗರಾಜ್ ಅಲಿಯಾಸ್ ಟೈಲ್ಸ್ ನಾಗ (45) ಹತ್ಯೆಗೀಡಾದವರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಕುವೆಂಪು ಬಡಾವಣೆಯಲ್ಲಿ ರಾತ್ರಿ ಟೈಲ್ಸ್ ನಾಗರಾಜ್ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ … Read more

ಸಚಿವ ಸ್ಥಾನ ಕುರಿತು ಶಿವಮೊಗ್ಗದಲ್ಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿಕೆ, ಮಿನಿಸ್ಟರ್ ಪಟ್ಟದ ಬಗ್ಗೆ ಸಿಎಂ ಏನು ಹೇಳಿದ್ದಾರಂತೆ ಗೊತ್ತಾ?

Aaraga Jnanendra going in car

ಶಿವಮೊಗ್ಗ ಲೈವ್.ಕಾಂ | SHIMOGA | 8 ಫೆಬ್ರವರಿ 2020 ನಮ್ಮಂಥ ಹರಿಯರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಒತ್ತಾಯವಿದೆ. ಹಾಗಂತ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿಲ್ಲ ಅಂತಾ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಮುಖ್ಯಮಂತ್ರಿಗಳು ಮತ್ತು ತಾವು ಜೊತೆ ಜೊತೆಗೆ ಬೆಳೆದವರು. ಸಚಿವ ಸ್ಥಾನ ನೀಡುವಂತೆ ಕೇಳಿಕೊಂಡಿದ್ದೇನೆ. ಆದರೆ ಮನವಿ ಪತ್ರ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕಾಗಿ ಇನ್ನಷ್ಟು ಸಮಯ … Read more

ಶಿವಮೊಗ್ಗಕ್ಕೆ ಸಚಿವ ಶ್ರೀರಾಮುಲು, ಬಿಜೆಪಿ ಕಚೇರಿ, ಕಾರ್ಯಕರ್ತರ ಮನೆ ಮನೆಗು ತೆರಳಿ ಆಮಂತ್ರಣ ಪತ್ರಿಕೆ ಹಂಚಿದ ಮಿನಿಸ್ಟರ್

ಶಿವಮೊಗ್ಗ ಲೈವ್.ಕಾಂ | SHIMOGA | 8 ಫೆಬ್ರವರಿ 2020 ಮಗಳ ಮದುವೆ ಆಮಂತ್ರಣ ಪತ್ರಿಕೆ ನೀಡಲು ಆರೋಗ್ಯ ಸಚಿವ ಶ್ರೀರಾಮುಲು ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವರು ಭೇಟಿ ನೀಡಿ, ಮುಖಂಡರು ಕಾರ್ಯಕರ್ತರಿಗೆ ಆಮಂತ್ರಣ ಪತ್ರಿಕೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿವಮೊಗ್ಗದ ನಿವಾಸ, ಬಿಜೆಪಿ ಮುಖಂಡರ ಮನೆಗಳಿಗೆ ಭೇಟಿ ನೀಡಿ ಆಮಂತ್ರಣ ಪತ್ರಿಕೆ ನೀಡಿದರು. ಇದೇ ವೇಳೆ ಶಿವಮೊಗ್ಗದಲ್ಲಿರುವ ಕಾರ್ಯಕರ್ತರು, ಹಿತೈಷಿಗಳ ಮನೆಗು ತೆರಳಿ ಸಚಿವ ಶ್ರೀರಾಮುಲು … Read more