ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್‌ಮನ್‌, ಆಗಿದ್ದೇನು?

SMS-Fraud-Shimoga-CEN-Police-Station.

ಶಿವಮೊಗ್ಗ: ಹೆಚ್ಚಿನ ಲಾಭಾಂಶದ ಆಮಿಷ ಒಡ್ಡಿ ಆನ್‌ಲೈನ್ ಸ್ಟೋರ್ ತೆರೆಸುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಸುಮಾರು ₹52.93 ಲಕ್ಷ (investment) ದೋಚಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸೇಲ್ಸ್‌ಮನ್‌ ಒಬ್ಬರಿಗೆ ಪೂಜಾ ಗೌಡ ಹೆಸರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ wwishvipstore ಎಂಬ ವೆಬ್ ಲಿಂಕ್ ಕಳುಹಿಸಿದ್ದರು. ಈ ಲಿಂಕ್ ಮೂಲಕ ಆನ್‌ಲೈನ್ ಸ್ಟೋರ್ ಓಪನ್ ಮಾಡಿ, ಅದರಲ್ಲಿ ವಸ್ತುಗಳನ್ನು ಆರ್ಡರ್ ಮಾಡಿ ಪಿಕಪ್ ಮಾಡುವ ಕೆಲಸ ನೀಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಇದನ್ನು ನಂಬಿದ … Read more

ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

SMS-Fraud-Shimoga-CEN-Police-Station.

ಶಿವಮೊಗ್ಗ: ಜಿಲ್ಲೆಯ ಉಪನ್ಯಾಸಕಿ ಒಬ್ಬರಿಗೆ (ಹೆಸರು, ಗುರುತು ಗೌಪ್ಯ) ಅಪರಿಚಿತನೊಬ್ಬ ವಾಟ್ಸಾಪ್ ವಿಡಿಯೋ ಕರೆ (Video Call) ಮೂಲಕ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ. ಉಪನ್ಯಾಸಕಿಯ ಮೊಬೈಲ್ ಸಂಖ್ಯೆಗೆ ರಾತ್ರಿ ಸಮಯದಲ್ಲಿ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಸತತವಾಗಿ ವಿಡಿಯೋ ಕರೆಗಳನ್ನು ಮಾಡಲಾಗಿದೆ. ಆರಂಭದಲ್ಲಿ ಎರಡು ಬಾರಿ ಕರೆ ಸ್ವೀಕರಿಸಿದಾಗ ವ್ಯಕ್ತಿಯ ಮುಖ ಸ್ಪಷ್ಟವಾಗಿ ಕಾಣಿಸಿರಲಿಲ್ಲ. ಮೂರನೆ ಬಾರಿ ಕರೆಯನ್ನು ಉಪನ್ಯಾಸಕಿ ತಮ್ಮ ಮೊಬೈಲ್‌ನಲ್ಲಿ ಸ್ಕ್ರೀನ್ ರೆಕಾರ್ಡ್ ಆನ್ ಮಾಡಿಕೊಂಡು ಸ್ವೀಕರಿಸಿದ್ದಾರೆ. ಈ ವೇಳೆ ಅಪರಿಚಿತನು ತನ್ನ ಖಾಸಗಿ … Read more

ಒಂದೇ ಒಂದು ವಾಟ್ಸಪ್‌ ಮೆಸೇಜ್‌ನಿಂದಾಗಿ ₹3,65,892 ಹಣ ನಾಪತ್ತೆ, ಆಗಿದ್ದೇನು?

whatsapp-general-image

ಶಿವಮೊಗ್ಗ: ಟ್ರಾಫಿಕ್ ಚಲನ್ (Traffic Challan) ಪಾವತಿಸುವ ನೆಪದಲ್ಲಿ ಮೊಬೈಲ್‌ಗೆ ಎಪಿಕೆ (APK) ಫೈಲ್ ಕಳುಹಿಸಿ, ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಹಣವನ್ನು ದೋಚಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರು ವಂಚನೆಗೆ ಒಳಗಾಗಿದ್ದಾರೆ. ನಿವೃತ್ತ ಉದ್ಯೋಗಿಯ ವಾಟ್ಸಾಪ್ ನಂಬರ್‌ಗೆ ಅಪರಿಚಿತ ನಂಬರ್‌ನಿಂದ Traffic Challan ಹೆಸರಿನ ಪಿಡಿಎಫ್ ಮಾದರಿಯ ಎಪಿಕೆ ಫೈಲ್ ಬಂದಿತ್ತು. ಚಲನ್ ಮಾಹಿತಿಗಾಗಿ ದೂರುದಾರರು ಆ … Read more

ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯ ಖಾಸಗಿ ಫೋಟೊ ಅಪ್‌ಲೋಡ್, ಡಿಲೀಟ್‌ ಮಾಡಲು ಹಣಕ್ಕೆ ಡಿಮಾಂಡ್‌

Instagram-Cyber-Crime-Shimoga-Station.

ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪೋಸ್ಟ್ ಮಾಡಿ, ಅವುಗಳನ್ನು ಡಿಲೀಟ್ ಮಾಡಲು ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಮಹಿಳೆಗೆ ಕಳೆದ ಎರಡು ವರ್ಷಗಳಿಂದ ವ್ಯಕ್ತಿಯೊಬ್ಬರ ಪರಿಚಯವಾಗಿತ್ತು. ಇಬ್ಬರು ಒಟ್ಟಿಗೆ ಇದ್ದ ಸಂದರ್ಭ ಆ ವ್ಯಕ್ತಿ ತನ್ನ ಮೊಬೈಲ್‌ನಲ್ಲಿ ಮಹಿಳೆಯ ಖಾಸಗಿ ಫೋಟೋಗಳನ್ನು ತೆಗೆದುಕೊಂಡಿದ್ದ. ನಂತರದ ಇಬ್ಬರ ನಡುವೆ ಜಗಳವಾಗಿದ್ದು, ಮಹಿಳೆಯು ಆತನಿಂದ ದೂರಾಗಿದ್ದರು. ಇದೇ ಕಾರಣಕ್ಕೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದೂರುದಾರರ ಖಾಸಗಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ವಾಟ್ಸ್‌ಆಪ್ ಮೂಲಕ ಮಹಿಳೆಗೆ ಫೋಟೋಗಳನ್ನು … Read more