ನಂದಿನಿ ಗ್ರಾಹಕರಿಗೆ ಗುಡ್‌ ನ್ಯೂಸ್‌, 1 ಕೆ.ಜಿ ಬಕೆಟ್‌ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?‌

Nandini-Curd-1-KG-Bucket-in-Shimoga-market.

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟವು (ಶಿಮುಲ್) ಮಾರ್ಚ್ 1ರಿಂದ ಜಾರಿಗೆ ಬರುವಂತೆ 1 ಕೆ.ಜಿ ತೂಕದ ನಂದಿನಿ ಮೊಸರು ಬಕೆಟ್ ಅನ್ನು ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. (special discount) ಒಂದು ಕೆ.ಜಿ ಮೊಸರು ಬಕೆಟ್‌ ದರ ₹95 ನಿಗದಿ ಮಾಡಲಾಗಿದೆ. ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವ ಆರಂಭಿಕ ಕೊಡುಗೆಯಾಗಿ ಪ್ರತಿ ಬಕೆಟ್‌ಗೆ ₹10 ರಿಯಾಯಿತಿ ನೀಡಲಾಗಿದೆ. ಹೀಗಾಗಿ ಗ್ರಾಹಕರಿಗೆ ಇದು ₹85 ದರದಲ್ಲಿ ಲಭ್ಯವಾಗಲಿದೆ ಎಂದು ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕರು … Read more

ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಲೋಕಾಯುಕ್ತ ತಂಡ ದಿಢೀರ್‌ ಭೇಟಿ, ಪರಿಶೀಲನೆ

Shimul-Milk-Dairy-Machenahalli

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್) ಸಂಸ್ಥೆಯ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ (Lokayukta raid) ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ 8 ಅಧಿಕಾರಿಗಳ ತಂಡ ಪರಿಶೀಲನೆಯಲ್ಲಿ ತೊಡಗಿದೆ.   ಶಿಮುಲ್ ಸಂಸ್ಥೆಯಲ್ಲಿ ನಡೆಯುತ್ತಿರುವ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಹಣದ ವ್ಯವಹಾರ ನಡೆದಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ದೂರಿನ ಹಿನ್ನೆಲೆ ದಾಖಲೆ ಪರಿಶೀಲಿಸಲು ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ … Read more