ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ MLA ನೇತೃತ್ವದಲ್ಲಿ ಹೋರಾಟ, ಯಾಕೆ?

ಶಿವಮೊಗ್ಗ: ಇಲ್ಲಿನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (JDS protest)ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ಸೂಡಾ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ನಿವೇಶನ ಕೊಡಬೇಕಾದ ಸೂಡಾ, ಸುಳ್ಳು ರಸೀದಿ, ಅವೈಜ್ಞಾನಿಕ ಕಾಮಗಾರಿಗಳ ಮೂಲಕ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿದೆ. ಈ … Read more

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಕರಕುಶಲ ಉತ್ಸವ, ಸಿರಿಧಾನ್ಯ ಮೇಳ, ಫಲಪುಷ್ಪ ಪ್ರದರ್ಶನ, ಏನೇನಿದೆ?

Crafts-mela-and-flower-show-in-shimoga

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಲೆನಾಡ ಕರಕುಶಲ ಉತ್ಸವ, ಸಿರಿಧಾನ್ಯ ಮೇಳ, ಪುಷ್ಪಸಿರಿ ಫಲಪುಷ್ಟ ಪ್ರದರ್ಶನಕ್ಕೆ (Flower Show) ಆರಂಭವಾಗಿದೆ. ಇಂದಿನಿಂದ ಜನವರಿ 27ವರೆಗೆ ಈ ಮೇಳ ಇರಲಿದೆ. ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘದ ವತಿಯಿಂದ ಮೇಳ ಆಯೋಜಿಸಲಾಗಿದೆ. ಮೊದಲ ದಿನವೇ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇಳದಲ್ಲಿ ಏನೇನಿದೆ? ಹೂಗಳಿಂದ ಅಲಂಕೃತವಾದ ನಮ್ಮ ಶಿವಮೊಗ್ಗ ಸೆಲ್ಫಿ ಪಾಯಿಂಟ್‌, ಶಿವಪ್ಪನಾಯಕನ ಪ್ರತಿಮೆ, ಬಳ್ಳಿಗಾವಿಯ ಕೇದಾರೇಶ್ವರ ದೇವಸ್ಥಾನ, ಜೋಗ ಜಲಪಾತ ಗಮನ ಸೆಳೆಯುತ್ತಿವೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ 12‌ ಸುದ್ದಿಗಳು

GOOD-MORNING-SHIVAMOGGA-NEWS-UPDATE

ಶಿವಮೊಗ್ಗ: ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಪ್ರಮುಖ ಸುದ್ದಿಗಳ ಫಟಾಫಟ್‌ ಅಪ್‌ಡೇಟ್‌. (Morning News) NEWS 1 ಲೋಪ ಕಂಡು ಬಂದರೆ ಕ್ರಮ ಶಿವಮೊಗ್ಗ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ ಅವರು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಜಿಲ್ಲೆಯ ಪಡಿತರ ವ್ಯವಸ್ಥೆ ಖಾತ್ರಿಪಡಿಸಲು ನಾಲ್ಕು ದಿನ ಜಿಲ್ಲಾ ಪ್ರವಾಸ ಕೈಗೊಳ್ಳಲಾಗಿದೆ. ಲೋಪದೋಷಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. NEWS 2 ಅಸಂಘಟಿತ ಕಾರ್ಮಿಕರಿಗೆ … Read more

ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ (Road Accident) ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಸಮೀಪದ ಹೊಸೂರು ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತರು. ತೀರ್ಥಹಳ್ಳಿ ತಾಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇವರಿಗೆ ಪತ್ನಿ ಹಾಗೂ ಪುತ್ರಿ … Read more

ಶಂಕರಘಟದಲ್ಲಿ ಬಸ್ಸಿನ ಟೈರ್‌ ಸ್ಫೋಟ, ಬೈಕ್‌ ಸವಾರ ಸಾವು, ಹೇಗಾಯ್ತು ಘಟನೆ?

SHANKARAGHATTA BDVT NEWS 1

ಭದ್ರಾವತಿ: ಖಾಸಗಿ ಬಸ್ಸಿನ ಟೈರ್ ಸ್ಫೋಟಗೊಂಡು (Tire Burst) ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಕಣಗಲಸರ ಗ್ರಾಮದ ನಿವಾಸಿ ಬೀರು (42) ಮೃತಪಟ್ಟವರು. ಅದೇ ಬೈಕಿನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಲಕ್ಷ್ಮಿ ಎಂಬುವವರಿಗೆ ಗಾಯವಾಗಿದೆ. ಬೀರು ಅವರು ಲಕ್ಷ್ಮಿ ಅವರನ್ನು ಬೈಕ್‌ನಲ್ಲಿ ಕುರಿಸಿಕೊಂಡು ಆಸ್ಪತ್ರೆಗೆ ಹೋಗಿ ವಾಪಸ್ ಬರುತ್ತಿದ್ದರು. ಶಂಕರಘಟ್ಟ ಗ್ರಾಮದ ಅಂಗಾಳ ಪರಮೇಶ್ವರಿ ದೇವಸ್ಥಾನದ ಬಳಿ ಸಂಚರಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಖಾಸಗಿ ಬಸ್ ಇವರ ಬೈಕನ್ನು ದಾಟಿದ ತಕ್ಷಣ ಅದರ ಟೈರ್ ಸ್ಫೋಟಗೊಂಡಿದೆ. … Read more

ಇವತ್ತಿನ ಪಂಚಾಂಗ, ವಿಜಯ ಮುಹೂರ್ತ ಎಷ್ಟೊತ್ತಿಗಿದೆ? ಓದಲು ಇಲ್ಲಿ ಕ್ಲಿಕ್‌ ಮಾಡಿ

Indina-Panchanga-today Panchanga

ದಿನ ಭವಿಷ್ಯ, ಪಂಚಾಂಗ: ಇವತ್ತು 2026ರ ಜನವರಿ 10. ಶಿವಮೊಗ್ಗದಲ್ಲಿ ಇವತ್ತು 6.54ಕ್ಕೆ ಸೂರ್ಯೋದಯ. 6.16ಕ್ಕೆ ಸೂರ್ಯಾಸ್ತವಾಗಲಿದೆ. ಸಪ್ತಮಿ, ಹಸ್ತಾ ನಕ್ಷತ್ರದ ದಿನ. (Panchanga) ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.13 ರಿಂದ 6.04ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.38 ರಿಂದ 6.54ರವರೆಗೆ ಅಭಿಜಿತ್‌ ಮಧ್ಯಾಹ್ನ 12.12 ರಿಂದ 12.58ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.28 ರಿಂದ 3.14ರವರಗೆ ಗೋಧೂಳಿ ಮುಹೂರ್ತ ಸಂಜೆ 6.13 ರಿಂದ 6.39ರವರೆಗೆ ಇದನ್ನೂ ಓದಿ » ಶಿವಮೊಗ್ಗದ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು ಉದ್ಘಾಟನೆಗೆ … Read more

ಇವತ್ತಿನ ಪಂಚಾಂಗ, ಯಾವ್ಯಾವ ಸಮಯ ಯಾವಾಗಿದೆ? ಓದಲು ಇಲ್ಲಿ ಕ್ಲಿಕ್‌ ಮಾಡಿ

Indina-Panchanga-today Panchanga

ದಿನ ಭವಿಷ್ಯ, ಪಂಚಾಂಗ: ಇವತ್ತು 2026ರ ಜನವರಿ 8. ಶಿವಮೊಗ್ಗದಲ್ಲಿ ಇವತ್ತು 6.54ಕ್ಕೆ ಸೂರ್ಯೋದಯ. 6.15ಕ್ಕೆ ಸೂರ್ಯಾಸ್ತವಾಗಲಿದೆ. ಷಷ್ಠಿ ಪೂರ್ಣ. ಪೂರ್ವಾಫಾಲ್ಗುಣಿ ನಕ್ಷತ್ರ. (Panchanga) ಇದನ್ನೂ ಓದಿ » ಶಿವಮೊಗ್ಗದ ಠಾಣೆಯಲ್ಲೇ ನೇಣು ಬಿಗಿದುಕೊಂಡ ಪೊಲೀಸ್‌ ಸಿಬ್ಬಂದಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.13 ರಿಂದ 6.03ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.38 ರಿಂದ 6.54ರವರೆಗೆ ಅಭಿಜಿತ್‌ ಮಧ್ಯಾಹ್ನ 12.12 ರಿಂದ 12.57ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.28 ರಿಂದ 3.13ರವರಗೆ ಗೋಧೂಳಿ ಮುಹೂರ್ತ ಸಂಜೆ 6.13 ರಿಂದ … Read more

ಶಿವಮೊಗ್ಗದ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

New-Deputy Commissioner Prabhuling-Kavalakatti-takes-charge

ಶಿವಮೊಗ್ಗ: ನೂತನ ಜಿಲ್ಲಾಧಿಕಾರಿಯಾಗಿ (Deputy Commissioner) ಪ್ರಭುಲಿಂಗ್‌ ಕವಲಿಕಟ್ಟಿ ಇಂದು ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಪ್ರಭುಲಿಂಗ್‌ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶಿಸಲಾಗಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ್‌ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು. ನಂತರ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ್‌ ಕವಲಿಕಟ್ಟಿ ಅವರು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಇದನ್ನೂ ಓದಿ » ಶಿವಮೊಗ್ಗದ ನೂತನ ರಕ್ಷಣಾಧಿಕಾರಿ ಅಧಿಕಾರ ಸ್ವೀಕಾರ, ಮಹತ್ವದ ಮೀಟಿಂಗ್‌

BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವರ್ಗಾವಣೆ

shimoga-dc-gurudatta-hegde

ಶಿವಮೊಗ್ಗ: ಜಿಲ್ಲಾಧಿಕಾರಿ (Deputy Commissioner) ಗುರುದತ್ತ ಹೆಗಡೆ ಅವರ ವರ್ಗಾವಣೆಯಾಗಿದೆ. ಪ್ರಭು ಕವಲಿಕಟ್ಟಿ ಅವರನ್ನು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸ್ಟೇಟ್‌ ಮೆಡಿಕಲ್‌ ಸಪ್ಲೈ ಕಾರ್ಪೊರೇಷನ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಡಿಪಿಎಆರ್‌ ಆದೇಶದಲ್ಲಿ ತಿಳಿಸಲಾಗಿದೆ.   ಪ್ರಭು ಕವಲಕಟ್ಟಿ ಅವರು ಬೆಂಗಳೂರು ಮುನಿಸಿಪಲ್‌ ಅಡ್ಮಿನಿಸ್ಟ್ರೇಷನ್‌ ನಿರ್ದೇಶಕರಾಗಿದ್ದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ … Read more