ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.30 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

-Linganamakki-Dam-General-Image

ಸಾಗರ: ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಕಡಿಮೆಯಾಗಿದೆ. ಇವತ್ತು ಡ್ಯಾಮ್‌ಗೆ 37,631 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 5,559 ಕ್ಯೂಸೆಕ್‌ ಹೊರ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.30 ಅಡಿಯಷ್ಟು ಹೆಚ್ಚಳವಾಗಿದೆ. ಇವತ್ತು ನೀರಿನ ಮಟ್ಟ 1792.50 ಅಡಿಗೆ ತಲುಪಿದೆ. ಸದ್ಯ ಜಲಾಶಯ ಶೇ.51.78ರಷ್ಟು ಭರ್ತಿಯಾಗಿದೆ. ಒಟ್ಟು 78.52 ಟಿಎಂಸಿ ನೀರು ಇದೆ. ಇದನ್ನೂ ಓದಿ » ಭದ್ರಾ ಡ್ಯಾಮ್‌ನ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ? ಇದನ್ನೂ … Read more

ಭದ್ರಾ ಡ್ಯಾಮ್‌ನ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ?

Bhadra-Dam-General-Image

ಭದ್ರಾವತಿ: ಮಳೆ ಕಡಿಮೆ ಆಗಿರುವ ಹಿನ್ನೆಲೆ ಭದ್ರಾ ಜಲಾಶಯದ (Dam Level) ಒಳ ಹರಿವು ಇಳಿಕೆಯಾಗಿದೆ. ಇವತ್ತು 18,391 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 5,197 ಕ್ಯೂಸೆಕ್‌ ನೀರು ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 169.6 ಅಡಿಗೆ ತಲುಪಿದೆ. ಸದ್ಯ ಜಲಾಶಯದಲ್ಲಿ 52.360 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ತಗ್ಗಿದೆ. ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ?

ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ?

Tunga-Dam-Gajanuru.

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಇವತ್ತು ಇಳಿಕೆಯಾಗಿದೆ. ಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 39,188 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇಂದು 38,239 ಕ್ಯೂಸೆಕ್‌ ಹೊರಹರಿವು ಇದೆ. ತುಂಗಾ ಜಲಾಶಯದಲ್ಲಿ ಸದ್ಯ 2.101 ಟಿಎಂಸಿ ನೀರಿನ ಸಂಗ್ರಹವಿದೆ. ನೀರಿನ ಮಟ್ಟ 587.69 ಮೀಟರ್‌ನಷ್ಟಿದೆ. ಇದನ್ನೂ ಓದಿ … Read more

ರಾಗಿಗುಡ್ಡದಲ್ಲಿ ದೇವರ ಮೂರ್ತಿ ಕಿತ್ತೊಗೆದ ಕಿರಾತಕರು, ಬಿಗುವಿನ ವಾತಾವರಣ, ಈತನಕ ಏನೇನಾಯ್ತು? ಕಂಪ್ಲೀಟ್‌ ರಿಪೋರ್ಟ್

Gods-displaced-by-miscreants-at-Ragigudda-in-Shimoga.

ಶಿವಮೊಗ್ಗ: ಗಣಪತಿ ಮೂರ್ತಿ ಮತ್ತು ನಾಗರ ಕಲ್ಲನ್ನು (Idols) ಕಿತ್ತೆಸೆದ ಆರೋಪದ ಹಿನ್ನೆಲೆ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಕಳೆದ ರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ದೌಡಾಯಿಸಿ ಪರಿಶೀಲಿಸಿದರು. ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು. ಬಡಾವಣೆಯ ನಿರ್ಮಾಣ ಹಂತದ ಕಟ್ಟಡವೊಂದರ ಮುಂಭಾಗ ಖಾಲಿ ಜಾಗವಿದೆ. ಅಲ್ಲಿ ಕಟ್ಟೆ ನಿರ್ಮಿಸಿ ಗಣಪತಿ ಮತ್ತು ನಾಗರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿತ್ತು. ನಿರ್ಮಾಣ ಹಂತದ ಕಟ್ಟಡದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ತಂಗಿದ್ದ. ಶನಿವಾರ ಈ ಮನೆ ಬಳಿ ಬಂದಿದ್ದ ಆ … Read more

ಶಿವಮೊಗ್ಗದಲ್ಲಿ ಬಿಡುವು ನೀಡಿದ ಪುನರ್ವಸು ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-in-Shimoga-city-Kuvempu-Road

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ (Rainfall) ಅಬ್ಬರ ತಗ್ಗಿದೆ. ಪುನರ್ವಸು ಮಳೆ ಕೊಂಚ ಬಿಡುವು ನೀಡಿದ್ದು, ಬಿಸಿಲು ಕಾಣಿಸಿಕೊಂಡಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇತ್ತು. ಆಗಾಗ ತುಸು ಮಳೆಯಾಗಿದೆ. ಆ ಬಳಿಕ ಬಿಸಿಲು ಆವರಿಸಿದೆ. ಮೋಡ ಮರೆಯಾಗಿದ್ದು, ಆಗಸ ಸ್ವಚ್ಛವಾಗಿ ಕಾಣಿಸುವಂತಿದೆ. ಭಾರಿ ಮಳೆಯಾಗುತ್ತಿದ್ದ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿಯು ಮಳೆ ಪ್ರಮಾಣ ಕಡಿಮೆಯಾಗಿದೆ. 24 ಗಂಟೆಯಲ್ಲಿ  30 ಮಿ.ಮೀ ಮಳೆ ಇನ್ನು , ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ … Read more

ತಗ್ಗಿತು ತುಂಗಾ ಜಲಾಶಯದ ಒಳ ಹರಿವು, ಇವತ್ತು ಎಷ್ಟಿದೆ? ಎಷ್ಟು ನೀರನ್ನು ಹೊರಗೆ ಹರಿಸಲಾಗುತ್ತಿದೆ?

Tunga-Dam-Full-All-Gates-opened.

ಶಿವಮೊಗ್ಗ: ಮಳೆ ಪ್ರಮಾಣ ಕಡಿಮೆಯಾದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ತಗ್ಗಿದೆ. ಇವತ್ತು ತುಂಗಾ ಡ್ಯಾಂಗೆ 46,042 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದಿಂದ ಸದ್ಯ 38,380 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 2.01 ಟಿಎಂಸಿ ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹರಿಸುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇದನ್ನೂ ಓದಿ » ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಪ್ರಕಟಿಸಿದ ಸಂಸದ ರಾಘವೇಂದ್ರ

BREAKING NEWS – ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಪ್ರಕಟಿಸಿದ ಸಂಸದ ರಾಘವೇಂದ್ರ

BY-Raghavendra-Meets-Nitin-Gadkari-speaks-about-sigandur-bridge

ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ (Sigandur Bridge) ಜುಲೈ 14ರಂದು ಲೋಕಾರ್ಪಣೆ ಆಗಲಿದೆ‌. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಥಳ ಇನ್ನಷ್ಟೆ ನಿಗದಿ ಆಗಬೇಕಿದೆ ಎಂದರು. ಇಂದಿನಿಂದ ಎರಡನೇ ಹಂತದ ಲೋಡ್ ಟೆಸ್ಟ್ ನಡೆಯಲಿದೆ. ಅಲ್ಲದೆ ಕೊನೆಯ ಹಂತದ ಕೆಲಸ … Read more

ಭದ್ರಾ ಜಲಾಶಯದ ನೀರಿನ ಮಟ್ಟ ಒಂದೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

ಭದ್ರಾವತಿ: ಜಲನಾಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಭದ್ರಾ ಜಲಾಶಯದ (Dam Level) ಒಳ ಹರಿವು ಉತ್ತಮವಾಗಿದೆ. ಇವತ್ತು ಜಲಾಶಯಕ್ಕೆ 21,180 ಕ್ಯೂಸೆಕ್‌ ಒಳ ಹರಿವು ಇದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 168.5 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಒಂದೂವರೆ ಅಡಿಯಷ್ಟು ಏರಿಕೆಯಾಗಿದೆ. 5196 ಕ್ಯೂಸೆಕ್‌ ಹೊರ ಹರಿವು ಇದೆ. ಸದ್ಯ ಜಲಾಶಯದಲ್ಲಿ 51.220 ಟಿಎಂಸಿ ನೀರಿನ ಸಂಗ್ರಹವಿದೆ. ಇದನ್ನೂ ಓದಿ » ಕುಸಿದ ಚಾವಣಿ, ಕೃಷಿ ಚಟುವಟಿಕೆ ಬಿರುಸು, ತುಂಗೆಗೆ ಬಾಗಿನ – ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ … Read more

ಕುಸಿದ ಚಾವಣಿ, ಕೃಷಿ ಚಟುವಟಿಕೆ ಬಿರುಸು, ತುಂಗೆಗೆ ಬಾಗಿನ – ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಮಳೆ ರಿಪೋರ್ಟ್‌

rainfall-report-shimoga

ಶಿವಮೊಗ್ಗ: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳಗಳು ತುಂಬಿವೆ. ಭಾರಿ ಮಳೆಗೆ ಅಲ್ಲಲ್ಲಿ ಆಸ್ತಿಪಾಸ್ತಿಗೆ ಹಾನಿಯು ಉಂಟಾಗಿದೆ. ಇನ್ನು ಇಂದಿನಿಂದ ಮಳೆ (Rainfall) ಪುನರ್ವಸು ಮಳೆ ಶುರುವಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಶುಕ್ರವಾರ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಾಯ್ತು ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಫಟಾಫಟ್‌ ಸುದ್ದಿ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಂಬುಲೆನ್ಸ್‌ ಪರಿಶೀಲಿಸಿದ ಪೊಲೀಸ್‌, ಚಾಲಕನಿಗೆ ಕಾದಿತ್ತು ಶಾಕ್

ಶಿವಮೊಗ್ಗ ಸಿಟಿಯ ಹಲವೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ನಗರದ ಉಪ ವಿಭಾಗ-2 ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 5ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶಯ ಬಡಾವಣೆ, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿಎಸ್ ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಪ್ಯಾಕ್ಟರಿ, … Read more