28 ವರ್ಷದ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹1.30 ಲಕ್ಷ ದಂಡ, ಕಾರಣವೇನು?
ಶಿವಮೊಗ್ಗ: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ ನ್ಯಾಯಾಲಯವು, ಆರೋಪಿಗೆ (Thirthahalli youth) 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹1,30,000 ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕಿನ 28 ವರ್ಷದ ಯುವಕ, 17 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಘಟನೆ ಕುರಿತು ಬಾಲಕಿಯ ತಾಯಿ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಯುವಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. … Read more