ವೈರಲ್ ಆದ ದೆವ್ವ, ವಾರ್ನಿಂಗ್ ನೀಡಿದ ಶಿವಮೊಗ್ಗ ಪೊಲೀಸ್
SAGARA NEWS, 29 OCTOBER 2024 : ರಸ್ತೆಯಲ್ಲಿ ದಿಢೀರ್ ದೆವ್ವ ಪ್ರತ್ಯಕ್ಷವಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಲಾಗಿದೆ (Viral). ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇಂತಹ ಪೋಸ್ಟ್ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರ ತಾಲೂಕು ಕಾರ್ಗಲ್ ಸಮೀಪದ ಕಂಚಿಕೈ ರಸ್ತೆಯಲ್ಲಿ ಇಬ್ಬರು ಬೈಕ್ ಸವರಾರಿಗೆ ದೆವ್ವ ಎದುರಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು … Read more