ಮೆಕಾನಿಕಲ್‌ ಇಂಜಿನಿಯರ್‌ ಇನ್ಮುಂದೆ ಶಿವಮೊಗ್ಗ ಪೊಲೀಸ್‌ ಇಲಾಖೆಯ ‘ಮೈಕ್‌ ಒನ್‌ʼ

311225 Shimoga New SP Nikhil

ಶಿವಮೊಗ್ಗ: ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ ನಿಖಿಲ್‌.ಬಿ (Nikhil IPS) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸದ್ಯ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ನಿಖಿಲ್‌ ಅವರು ನೂತನ ವರ್ಷದ ಮೊದಲ ದಿನದಿಂದಲೇ ಶಿವಮೊಗ್ಗದಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ. ಯಾರು ನಿಖಿಲ್‌? ಇಲ್ಲಿದೆ ಅವರ ಕುರಿತ ಪ್ರಮುಖಾಂಶ ಐಪಿಎಸ್‌ ಅಧಿಕಾರಿ ನಿಖಿಲ್‌.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್‌ ಇಂಜಿನಿಯರಿಂಗ್‌ ಪದವಿ ಹೊಂದಿದ್ದಾರೆ. 2017ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ರಾಯಚೂರಿನಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದಾರೆ. ಉತ್ತರ … Read more

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವರ್ಗಾವಣೆ, ಹೊಸ ಎಸ್‌ಪಿ ಯಾರು?

SP Mithun Kumar

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರ ವರ್ಗಾವಣೆಯಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ (NEW SP) ಬಿ.ನಿಖಿಲ್‌ ಅವರನ್ನು ನೇಮಕ ಮಾಡಿದ್ದಾರೆ. ಜಿ.ಕೆ.ಮಿಥುನ್‌ ಕುಮಾರ್‌ ಅವರು 2022ರ ಅಕ್ಟೋಬರ್‌ 5ರಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್‌ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ.  ಇದನ್ನೂ ಓದಿ » ಭರ್ಜರಿ ಪಾರ್ಟಿಗೆ ರೆಡಿಯಾದ ಶಿವಮೊಗ್ಗ, ಹೊಸ ವರ್ಷಾಚರಣೆಗೆ ಎಲ್ಲೆಲ್ಲಿ ಹೇಗಿದೆ ಸಿದ್ಧತೆ?