ಶಿವಮೊಗ್ಗದ ಜೆಡಿಎಸ್ ಮುಖಂಡ ಸಿದ್ದಪ್ಪ ವಿಧಿವಶ
ಶಿವಮೊಗ್ಗ : ಜೆಡಿಎಸ್ ಮುಖಂಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದಪ್ಪ (62) ನಿಧನರಾಗಿದ್ದಾರೆ (No More). ಅನಾರೋಗ್ಯದ ಹಿನ್ನೆಲೆ ಬೆಳಗಿನ ಜಾವ ಸಿದ್ದಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸಿದ್ದಪ್ಪ ಬಹುಕಾಲದಿಂದ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಜಿಲ್ಲಾ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಸದ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ಸಿದ್ದಪ್ಪ ನಿಧನಕ್ಕೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್ … Read more