ನೇಣು ಬಿಗಿದುಕೊಂಡು ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

-Bcom-student-hosanagara-rachana.

ಹೊಸನಗರ: ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯುವತಿಯನ್ನು ರಚನಾ (20) ಎಂದು ಗುರುತಿಸಲಾಗಿದೆ. ಇವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದರು (College Student). ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ನಡೆದ ಘಟನೆ. ಕಾಲೇಜಿನಿಂದ ಮನೆಗೆ ಮರಳಿದ ರಚನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶೃಂಗೇರಿಯಲ್ಲಿ ತೀರ್ಥಹಳ್ಳಿ ಮೂಲದ ವಿದ್ಯಾರ್ಥಿನಿಗೆ ಹೃದಯಾಘಾತ, … Read more