ರಸ್ತೆ ತಡೆಗೆ ಮುಂದಾಗ ವಿದ್ಯಾರ್ಥಿಗಳು, ಪೊಲೀಸರ ಮಧ್ಯೆ ಮಾತಿನ ಚಕಮಕಿ, ಡಿಸಿ ಕಚೇರಿ ಮುಂದೆ ಆಗಿದ್ದೇನು?

ABVP-protest-for-guest-lecturers-in-shimoga-city

ಶಿವಮೊಗ್ಗ: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ (Students) ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜು ಶಿಕ್ಷಣ ಇಲಾಖೆ ಅಡಿಯ 432 ಪದವಿ ಕಾಲೇಜುಗಳಲ್ಲಿನ 6,000 ಕಾಯಂ ಉಪನ್ಯಾಸಕರಲ್ಲಿ 3,000ಕ್ಕಿಂತ ಹೆಚ್ಚು ಜನ ಈಗಾಗಲೇ ನಿವೃತ್ತಿ ಪಡೆದಿದ್ದಾರೆ. ಅತಿಥಿ ಉಪನ್ಯಾಸಕರ ನೆರವಿನಿಂದ ಪದವಿ ತರಗತಿಗಳು … Read more

ಶಿವಮೊಗ್ಗದಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ, ದಾಖಲಾಯ್ತು FIR, ಯಾರ ವಿರುದ್ಧ? ಈತನಕ ಏನಾಯ್ತು?

Mc-gann-hospital-mother-and-child-ward

ಓದುಗರ ಗಮನಕ್ಕೆ: ಅಪ್ರಾಪ್ತರ (Student) ಪ್ರಕರಣ ಆಗಿರುವುದರಿಂದ ಅವರ ಹೆಸರು, ವಿಳಾಸ ಮತ್ತು ಗುರುತು ಬಹಿರಂಗ ಆಗುವಂತಹ ಯಾವುದೇ ಮಾಹಿತಿ ಪ್ರಕಟಿಸುವಂತಿಲ್ಲ. ಆದ್ದರಿಂದ ಈ ಸುದ್ದಿಯಲ್ಲಿ ಅಂತಹ ಯಾವುದೇ ಅಂಶಗಳಿಲ್ಲ. ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿ ಮಗುವಿನ ಜನ್ಮ ನೀಡಿದ ಪ್ರಕರಣ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವಿದ್ಯಾರ್ಥಿನಿಯ ಸಹೋದರನ ವಿರುದ್ಧವೇ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಪ್ರಕರಣದ ಕುರಿತು ಇಲ್ಲಿದೆ ಪ್ರಮುಖಾಂಶ ಇದನ್ನೂ ಓದಿ » ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ … Read more

ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗರಂ, ಏನಂದ್ರು ಸದಸ್ಯ ಶಶಿಧರ ಕೋಸಂಬೆ?

Shashidhar-Kosambe-speaks-about-9-standard-student

ಬೆಂಗಳೂರು: ಶಿವಮೊಗ್ಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ (Student) ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣ ಸಂಬಂಧ ತಕ್ಷಣ ಪ್ರಕರಣ ದಾಖಲು ಮಾಡಿಕೊಂಡು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಶಶಿಧರ ಕೋಸಂಬೆ, ಪೋಕ್ಸೊ ಕಾಯ್ದೆ ಪ್ರಕಾರ ಘಟನೆ ನಡೆದು 24 ಗಂಟೆಯೊಳಗೆ ಪ್ರಕರಣ ದಾಖಲಿಸಿಕೊಳ್ಳಬೇಕು. ತ್ವರಿತವಾಗಿ ತನಿಖೆ ನಡೆಸಬೇಕು. ಘಟನೆ ಕುರಿತು ಶಿವಮೊಗ್ಗದ ಹೆಚ್ಚುವರಿ ರಕ್ಷಣಾಧಿಕಾರಿ ಜೊತೆ ಚರ್ಚೆ ಮಾಡಿದ್ದೇನೆ. ಈವರೆಗೆ ಪ್ರಕರಣ … Read more

ಶಿವಮೊಗ್ಗದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIMOGA-NEWS-UPDATE

ಶಿವಮೊಗ್ಗ: ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ಬಾಲಕಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ ಶಿವಮೊಗ್ಗದಲ್ಲಿಯು ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ (Student) ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ. ಕೂಡಲೆ ಮಗು ಮತ್ತು ಬಾಲಕಿಯನ್ನು … Read more

ಸಿರಿವಂತೆಯಲ್ಲಿ ಆಯಾತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ 9ನೇ ತರಗತಿ ವಿದ್ಯಾರ್ಥಿನಿ

Sagara-Rural-Police-Station-General-Image

ಶಿವಮೊಗ್ಗ: ಚಲಿಸುತ್ತಿದ್ದ ಬಸ್ಸಿನಿಂದ (Bus) ಆಯಾತಪ್ಪಿ ಕೆಳೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ. ಸಾಗರದ ಸಿರಿವಂತೆಯಲ್ಲಿ ಘಟನೆ ಸಂಭವಿಸಿದೆ. ಸಾಗರದ ವರದಹಳ್ಳಿ ಕ್ರಾಸ್‌ನಲ್ಲಿರುವ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕಾ ಎಂಬ ವಿದ್ಯಾರ್ಥಿನಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದರು. ಸಿರಿವಂತೆ ಬಳಿ ಪ್ರಿಯಾಂಕ ಬಸ್ಸಿನಿಂದ ಆಯಾತಪ್ಪಿ ಕೆಳೆಗೆ ಬಿದ್ದಿದ್ದಾಳೆ. ಆಕೆಯ ತಲೆ, ಮೈಕೈಗೆ ಪೆಟ್ಟಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ವಿದ್ಯಾರ್ಥಿನಿ ಆಯಾತಪ್ಪಿ ಕೆಳಗೆ … Read more

ತೀವ್ರ ಅನಾರೋಗ್ಯ, ಆನಂದಪುರ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ill-health-sslc-student-breathed-last.

ತ್ಯಾಗರ್ತಿ: ಆನಂದಪುರದ ಕೆಪಿಎಸ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ (Student) ಐಶ್ವರ್ಯ (15) ಅನಾರೋಗ್ಯದ ಕಾರಣ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ » ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಸಾವು ಕಳೆದ 20 ದಿನಗಳಿಂದ ಐಶ್ವರ್ಯ ಅನಾರೋಗ್ಯದಿಂದ ಬಳಲತ್ತಿದ್ದಳು. ಎರಡು ದಿನದ ಹಿಂದೆ ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದಿದ್ದಾಳೆ. ಐಶ್ವರ್ಯ ಮಲಂದೂರು ಗ್ರಾಮದ ಬಡ ಕುಟುಂಬದ ಹಿನ್ನೆಲೆಯ ಹುಡುಗಿ. ಬಾಲಕಿ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾಳೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌, ಅರ್ಜಿ ಸಲ್ಲಿಸುವುದು ಹೇಗೆ? ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು?

ksrtc-news-update-thumbnail.webp

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಜೂ.2ರಿಂದ ಉಚಿತ ಅಥವಾ ರಿಯಾಯಿತಿ ಬಸ್‌ ಪಾಸ್ ವಿತರಣಾ ಕಾರ್ಯ ಆರಂಭಿಸಿದೆ. ಬಸ್‌ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಒನ್‌ ಕೇಂದ್ರಗಳಲ್ಲಿ … Read more

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

SAGARA-NEWS-UPDATE

ಸಾಗರ: ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ (Student) ಬೈಕ್‌ ಡಿಕ್ಕಿ ಹೊಡೆದಿದೆ. ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಘಟನೆ ಸಂಭವಿಸಿದೆ. ಸೊರಬ ರಸ್ತೆಯ ಸಾಮಿಲ್‌ ಸಮೀಪ ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಮಿಂದುಶ್ರೀಗೆ ಸಾಗರ ಪಟ್ಟಣದ ಕಡೆಗೆ ತೆರಳುತ್ತಿದ್ದ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಿಂದುಶ್ರೀ ಕೆಳಗೆ ಬಿದ್ದಿದ್ದು ಮೈಕೈ ತರಚಿದೆ. ಕಾಲು ಮತ್ತು ಸೊಂಟದ ಭಾಗಕ್ಕೆ ಒಳಪೆಟ್ಟು ಬಿದ್ದಿದೆ. ಮಿಂದುಶ್ರೀಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ … Read more

ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

student-falls-down-in-private-college-in-Shimoga.

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು (Student) ದಿಢೀರ್‌ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ಬಂದು ಬಾಗಿಲು ತೆಗೆಯುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ಉಪನ್ಯಾಸಕರು, ಸಹಪಾಠಿಗಳು ಆಕೆಯ ನೆರವಿಗೆ ಧಾವಿಸಿದ್ದಾರೆ. ಕೂಡಲೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾಳೆ. (ಮನವಿ … Read more

ಶಿವಮೊಗ್ಗದಲ್ಲಿ ನಶೆಯಲ್ಲಿದ್ದ ಮೆಡಿಕಲ್‌ ವಿದ್ಯಾರ್ಥಿಯಿಂದ ಅವಾಂತರ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Crime-News-General-Image

SHIVAMOGGA LIVE NEWS | 3 FEBRUARY 2024 SHIMOGA : ನಶೆಯಲ್ಲಿದ್ದ ಮೆಡಿಕಲ್‌ ವಿದ್ಯಾರ್ಥಿಯೊಬ್ಬ ಕಾರಿನಲ್ಲಿ ಐದಾರು ಕಡೆ ಅಪಘಾತ ಮಾಡಿದ್ದಾನೆ. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದಾರೆ. ರೊಚ್ಚಿಗೆದ್ದ ಸಾರ್ವಜನಿಕರು ಮೆಡಿಕೆಲ್‌ ವಿದ್ಯಾರ್ಥಿಯನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಖಾಸಗಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೊಬ್ಬ ಹೊಳೆಹೊನ್ನೂರು ರಸ್ತೆಯಲ್ಲಿ ಜಾವಳ್ಳಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುವಾಗ ನಾಲ್ಕೈದು ಕಡೆ ಅಪಘಾತ ಮಾಡಿದ್ದಾನೆ. ಗುರುಪುರದ ಶಾಂತಮ್ಮ ಲೇಔಟ್‌ನಲ್ಲಿ ಭದ್ರಾವತಿಯ ಲೋಯರ್‌ ಹುತ್ತದ ನವೀನ್‌ ಕುಮಾರ್‌ ಮತ್ತು ಅವರ ಪತ್ನಿ ತೆರಳುತ್ತಿದ್ದ ಬೈಕ್‌ಗೆ … Read more