ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

ATNCC-College-Programme-SP-Mithun-Kumar.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು? ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು … Read more

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ, ಉಪನ್ಯಾಸಕನ ವಿರುದ್ಧ ಪ್ರತಿಭಟನೆ

Police-Jeep-at-Shimoga-General-Image

SHIMOGA NEWS, 21 SEPTEMBER 2024 : ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ ಉಪನ್ಯಾಸಕನನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಸಭ್ಯ ಮಾತುಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ, ಪ್ರಾಚಾರ್ಯರಿಗೆ ನೊಟೀಸ್‌ ನೀಡಿದ್ದಾರೆ ಎಂದು ಆರೋಪಿಸಿದರು. 15 ದಿನ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ, ವಿದ್ಯಾರ್ಥಿನಿಯರದ್ದೇ ಮೇಲುಗೈ

sslc-puc-exam-timetable

SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರ ಪೈಕಿ ಶೇ.93.03ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ 11,389 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 9,592 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.84.22ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. 11,639 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. 10,828 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ.93.03ರಷ್ಟು ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ತಾಲೂಕುವಾರು ಹೇಗಿದೆ ಫಲಿತಾಂಶ? ತೀರ್ಥಹಳ್ಳಿ ತಾಲೂಕಿನಲ್ಲಿ … Read more

ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೆ ಸಭೆ, ಸಮಾರಂಭಗಳೆ ನಡೆಯೋದಿಲ್ಲ, ಎಲ್ಲಕ್ಕು ಇವರು ಅನಿವಾರ್ಯ ಪ್ರೇಕ್ಷಕರು

COLLEGE-STUDENTS-REFERENCE-IMAGE-

SHIVAMOGGA LIVE NEWS | 11 JANUARY 2024 SHIMOGA : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಮತ್ತು ಹೊರ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ. ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸಾವಿರ ಸಾವಿರ ಸಂಖ್ಯೆಯ ವಿದ್ಯಾರ್ಥಿಗಳು ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು … Read more

ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ, KSRTC ಬಸ್ ತಡೆದು ಆಕ್ರೋಶ

271223 Students Protest for bus at kaimara near holehonnuru

SHIVAMOGGA LIVE NEWS | 27 DECEMBER 2023 HOLEHONNURU : ಕೆಎಸ್‌ಆರ್‌ಟಿಸಿ ಬಸ್ಸುಗಳು ನಿಲುಗಡೆ ನೀಡದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಸರ್ಕಾರಿ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಹೊಳೆಹೊನ್ನೂರು ಸಮೀಪ ಕೈಮರ ಸರ್ಕಲ್‌ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಮಾರ್ಗದಲ್ಲಿ ಹಾದು ಹೋಗುವ ಬಸ್ಸುಗಳು ವಿದ್ಯಾರ್ಥಿಗಳನ್ನು ಕಂಡರೆ ನಿಲುಗಡೆ ನೀಡುತ್ತಿಲ್ಲ. ಹಾಗಾಗಿ ನಿತ್ಯ ಶಾಲೆ, ಕಾಲೇಜಿಗೆ ತಡವಾಗಿ ತೆರಳುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗೆ … Read more

ರಸ್ತೆಯಲ್ಲಿ ಕೈ ಕೈ ಮಿಲಾಯಿಸಿದ ಕಾಲೇಜು ವಿದ್ಯಾರ್ಥಿಗಳು | ಪುರಲೆಯಲ್ಲಿ ಯುವಕರ ಮೇಲೆ ರಾಡ್‌, ದೊಣ್ಣೆಯಿಂದ ದಾಳಿ

Crime-News-General-Image

SHIVAMOGGA LIVE NEWS | 24 DECEMBER 2023 SHIMOGA : ರಸ್ತೆಯಲ್ಲಿ ಕೈ ಕೈ ಮಿಲಾಯಿಸಿ ಸಾರ್ವಜನಿಕ ನೆಮ್ಮದಿಗೆ ಭಂಗ ತಂದ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ನಗರದ ಸರ್ಜಿ ಕನ್ವೆಷನ್‌ ಹಾಲ್‌ ಸಮೀಪ ಘಟನೆ ಸಂಭವಿಸಿದೆ. ಓರ್ವ ಅಪ್ರಾಪ್ತ ಸೇರಿ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸುತ್ತಿದ್ದರು. ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದು ವಿನೋಬನಗರ … Read more

ಶಿವಮೊಗ್ಗದ ಕಾಲೇಜಿನಲ್ಲಿ ಅಗ್ನಿ ಅವಘಡದ ಪ್ರಾತ್ಯಕ್ಷಿಕೆ

061223-Shimoga-Fire-department-awareness-at-college.webp

SHIVAMOGGA LIVE NEWS | 6 DECEMBER 2023 SHIMOGA : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಗ್ನಿ ಶಾಮಕ ದಳದಿಂದ (Fire department) ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಶಿಬಿರ ನಡೆಸಲಾಯಿತು. ಸಂದರ್ಭದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ವಸಂತಕುಮಾರ್ ಮಕ್ಕಳಿಗೆ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ತಿಳಿವಳಿಕೆ ನೀಡಿದರು. ಅಗ್ನಿ ಅವಘಡಗಳ ಮಾದರಿಗಳು ಮತ್ತು ಯಾವೆಲ್ಲ ಸಂದರ್ಭ ಯಾವೆಲ್ಲ ಸುರಕ್ಷಿತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸಲಾಯಿತು. ಪ್ರೊಬೇಷನರಿ ಅಗ್ನಿಶಾಮಕ (Fire department) ಅಧಿಕಾರಿ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ರಸ್ತೆ ತಡೆ, ಮಾತು ತಪ್ಪಿದ ವಿವಿ ಆಡಳಿತದ ವಿರುದ್ಧ ಗರಂ

Sahyadri-College-Student-protest-in-Shimoga-BH-Road.

SHIVAMOGGA LIVE NEWS | 27 NOVEMBER 2023 SHIMOGA : ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಕೊಟ್ಟ ಮಾತು ತಪ್ಪಿದ್ದಾರೆ. ಇದರಿಂದ ತರಗತಿಗಳು ನಡೆಯದೆ ತಮ್ಮ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತಿದೆ ಎಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟಿಸಿದರು. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್‌.ರಸ್ತೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿ ಕುವೆಂಪು ವಿವಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್‌.ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ವಿದ್ಯಾರ್ಥಿಗಳು … Read more

ಇಂಧನ ರಹಿತ ಅಡುಗೆ ಸ್ಪರ್ಧೆ, 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಬಗೆಬಗೆ ಖಾದ್ಯ ರೆಡಿ

181123-Cooking-Competitation-in-DVS-High-School-in-Shimoga.webp

SHIVAMOGGA LIVE NEWS | 18 NOVEMBER 2023 SHIMOGA : ದೇಶಿಯ ವಿದ್ಯಾಶಾಲೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಇಂಧನ ರಹಿತ ಅಡುಗೆ (Cooking) ಸ್ಪರ್ಧೆ ಆಯೋಜಿಸಲಾಗಿತ್ತು. 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಅಡುಗೆ ತಯಾರಿಸಿದರು. 8, 9 ಮತ್ತು 10ನೇ ತರಗತಿಯ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಡುಗೆ (Cooking) ತಯಾರಿಗೆ 30 ನಿಮಿಷ ಕಾಲವಕಾಶ ನೀಡಲಾಗಿತ್ತು. ತೀರ್ಪುಗಾರರು ಪ್ರತಿ ಅಡುಗೆಯ ರುಚಿ ನೋಡಿ ಬಹುಮಾನ ಘೋಷಿಸಿದರು. … Read more

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ನ.23ರಂದು ಹೊಸ ಯೋಜನೆ ಘೋಷಣೆ ಅಂದರು ಮಿನಿಸ್ಟರ್‌, ಏನದು?

301023-Minister-Madhu-Bangarappa-press-meet-in-Shimoga.webp

SHIVAMOGGA LIVE NEWS | 30 OCTOBER 2023 SHIMOGA : ಮಕ್ಕಳಲ್ಲಿ ಪೌಷ್ಠಿಕಾಂಶ (Nutrition) ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮತ್ತೊಂದು ಪ್ರಮುಖ ಹೆಜ್ಜೆ ಇರಿಸಿದೆ. ಬಿಸಿ ಊಟದಲ್ಲಿ ಮೊಟ್ಟೆ ವಿತರಣೆ ಮಾಡಿದ ಹಾಗೆ ಇನ್ನೊಂದು ಯೋಜನೆ ಜಾರಿಗೊಳಿಸುತ್ತಿದ್ದೇವೆ. ನ.23ರಂದು ಯೋಜನೆಯ ಕುರಿತು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮಕ್ಕಳಲ್ಲಿ ಪೌಷ್ಠಿಕಾಂಶ ((Nutrition) ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಪ್ರಯೋಗ ನಡೆದಿದ್ದು ಯಶಸ್ವಿಯಾಗಿದೆ. ನ.23ರಂದು … Read more